ಬ್ರೇಕಿಂಗ್ ನ್ಯೂಸ್
24-05-23 01:00 pm Udupi Correspondent ಕರಾವಳಿ
ಉಡುಪಿ, ಮೇ 24: ಉಡುಪಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಡ್ಡಾದಿಡ್ಡಿ ಕಾರುಗಳನ್ನು ಚಲಾಯಿಸಿ ವಿಡಿಯೋ ಮೀಮ್ಸ್ ಹಾಕಿದ್ದ ನಾಲ್ವರು ಯುವಕರನ್ನು ಕಾಪು ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸುತ್ತಿದ್ದ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿತ್ತು. ವಿಡಿಯೋದಲ್ಲಿದ್ದ ವಾಹನಗಳ ನಂಬರ್ ಪ್ಲೇಟ್ ಆಧರಿಸಿ ನಾಲ್ವರು ಚಾಲಕರ ಸಹಿತ ನಾಲ್ಕು ವಾಹನಗಳನ್ನು ಕಾಪು ಪೊಲೀಸರು ವಶಪಡಿಸಿದ್ದಾರೆ.
ವಾಹನ ಚಾಲಕರನ್ನು ಉಡುಪಿಯ ಶಾನೂನ್ ಡಿಸೋಜ(25), ಉಡುಪಿ ಕೊಡಂತೂರಿನ ವಿವೇಕ್(23), ಉದ್ಯಾವರ ಗುಡ್ಡೆ ಅಂಗಡಿ ನಿವಾಸಿ ಅಯಾನ್(24) ಹಾಗೂ ಕುಂಜಿಬೆಟ್ಟು ನಿವಾಸಿ ಮಿಶಾಲುದ್ದೀನ್ (23) ಎಂದು ಗುರುತಿಸಲಾಗಿದೆ. ಇವರ ಮಹೀಂದ್ರಾ ಜೀಪು, ಕ್ರೆಟಾ ಕಾರು, ಫಾರ್ಚುನರ್ ಮತ್ತು ಸ್ವಿಫ್ಟ್ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಾಪು ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂದು ಜೀಪು ಹಾಗೂ 3 ಕಾರುಗಳನ್ನು ಅದರ ಚಾಲಕರು ಅತೀ ವೇಗ ಮತ್ತು ತೀವ್ರ ಅಜಾಗರೂಕತೆಯಿಂದ ರಸ್ತೆಯ ತುಂಬಾ ಅಡ್ಡದಿಡ್ಡಿಯಾಗಿ ಚಲಾಯಿಸಿಕೊಂಡು ಹೋಗುತ್ತಿದ್ದ ವಿಡಿಯೋ ವೈರಲ್ ಆಗುತ್ತಿರುವ ಬಗ್ಗೆ ದೂರು ಬಂದಿತ್ತು. ಪರಿಶೀಲಿಸಿದಾಗ ಕಟಪಾಡಿ ಸಮೀಪದ ಮೂಡಬೆಟ್ಟು ಗ್ರಾಮದಿಂದ ಮೂಳೂರು ಗ್ರಾಮದ ವರೆಗಿನ ರಾ.ಹೆ. 66ರ ಉಡುಪಿ- ಮಂಗಳೂರು ರಸ್ತೆಯಲ್ಲಿ ಮೇ 19ರಿಂದ ಮೇ 23ರ ನಡುವೆ ವಿಡಿಯೋ ಮಾಡಿರುವುದು ತಿಳಿದುಬಂತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ವಿಡಿಯೋದಲ್ಲಿನ ವಾಹನಗಳ ನಂಬ್ರಗಳನ್ನು ಪರಿಶೀಲಿಸಿ ವಾಹನಗಳ ಗುರುತು ಪತ್ತೆ ಹಚ್ಚಿದ ಪೊಲೀಸರು ಚಾಲಕರು ಮತ್ತು ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಕಾಪು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Police booked cases against four drivers, seize cars and arrested them for rash driving and obstructing smooth flow of vehicular traffic on the National Highway 66. The drivers who have been arrested are Ayaan (24) a resident of Guddeyangady Udayavara village, Udupi who was driving a Creta, Mishaluddin (23), a resident of Kunjibettu, Udupi who was driving a Thar, Shanoon D’Souza (25), a resident of Haika Building, Udupi who was driving a fortuner and Vivek (23), a resident of Kodanthur, Udupi who was driving a Swift.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
15-07-25 10:57 pm
HK News Desk
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm