ಬ್ರೇಕಿಂಗ್ ನ್ಯೂಸ್
24-05-23 03:10 pm Mangalore Correspondent ಕರಾವಳಿ
ಪುತ್ತೂರು, ಮೇ 24 : ಮುಖ್ಯಮಂತ್ರಿ ಸಿದ್ದರಾಮಯ್ಯ 24 ಮಂದಿ ಹಿಂದು ಕಾರ್ಯಕರ್ತರನ್ನು ಹತ್ಯೆ ಮಾಡಿದ್ದಾರೆಂದು ಹೇಳಿಕೆ ನೀಡಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಪುತ್ತೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ದೂರು ನೀಡಿದ್ದಾರೆ.
ಬೆಳ್ತಂಗಡಿಯಲ್ಲಿ ನಡೆದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಹರೀಶ್ ಪೂಂಜಾ ನೀಡಿದ್ದ ಹೇಳಿಕೆ ವೈರಲ್ ಆಗಿದೆ. ಹಿಂದು ಸಂಘಟನೆಯಲ್ಲಿ ಗುರುತಿಸಿದ್ದ ಸತ್ಯಜಿತ್ ಸುರತ್ಕಲ್, ಪ್ರವೀಣ್ ವಾಲ್ಕೆ ತನ್ನ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯ ಪರ ಪ್ರಚಾರ ನಡೆಸಿದ್ದಾರೆಂದು ಆರೋಪಿಸಿ ನೀಡಿದ್ದ ಹೇಳಿಕೆಗೆ ಪರ - ವಿರೋಧ ಪ್ರತಿಕ್ರಿಯೆಗಳ ಬಂದಿದ್ದವು. ಅದೇ ಸಂದರ್ಭದಲ್ಲಿ, 24 ಮಂದಿ ಹಿಂದು ಕಾರ್ಯಕರ್ತರನ್ನ ಹತ್ಯೆ ಮಾಡಿದ ಸಿದ್ದರಾಮಯ್ಯಗೆ ನೀವು ವೋಟ್ ಕೇಳಿದ್ದೀರಾ.. ಬಜರಂಗದಳ ಬ್ಯಾನ್ ಮಾಡುತ್ತೇವೆ ಎಂದ ಕಾಂಗ್ರೆಸ್ ಪರ ವೋಟ್ ಕೇಳಿದ್ದೀರಾ. ನಿಮ್ಮದು ಯಾವ ರೀತಿಯ ಹಿಂದುತ್ವ ಎಂದು ಜನ ಕೇಳುತ್ತಿದ್ದಾರೆ. ಇದಕ್ಕೆ ಸತ್ಯಜಿತ್ ಸುರತ್ಕಲ್ ಅವರಿಂದ ಸ್ಪಷ್ಟನೆ ಬಯಸುತ್ತೇನೆ ಎಂದು ಶಾಸಕ ಹರೀಶ್ ಪೂಂಜ ಹೇಳಿದ್ದರು.
ಆದರೆ ಮಾತಿನ ಓಘದಲ್ಲಿ ಬಿಜೆಪಿ ಶಾಸಕ ಹರೀಶ ಪೂಂಜ, ನೇರವಾಗಿ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡಿದ್ದಾರೆ. 24 ಮಂದಿ ಹಿಂದು ಕಾರ್ಯಕರ್ತರನ್ನು ಕೊಲ್ಲಿಸಿದ್ದಾರೆ ಎಂದು ಹೇಳುವ ಮೂಲಕ ವಿವಾದಕ್ಕೆ ಕಾರಣವಾಗಿದ್ದಾರೆ. ಹೇಳಿಕೆಯ ವಿಡಿಯೋ ತುಣುಕು ಆಧರಿಸಿ, ಕಾಂಗ್ರೆಸ್ ಕಾರ್ಯಕರ್ತರು ಶಾಸಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಪುತ್ತೂರು ನಗರಸಭಾ ಸದಸ್ಯ ಮೊಹಮ್ಮದ್ ರಿಯಾಝ್ ಮತ್ತು ಬೆಂಬಲಿಗರು ಹರೀಶ್ ಪೂಂಜಾ ವಿರುದ್ಧ ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದು ಮುಖ್ಯಮಂತ್ರಿ ಬಗ್ಗೆ ಸುಳ್ಳು ಆರೋಪ ಮಾಡಿರುವ ಕುರಿತು ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.
CM Siddaramaiah murdered 24 Hindus case, Complaint filed against Beltangady MLA Harish Poonja for controversial statement. Municipal councillor Mohammed Riaz filed a complaint against Beltangady MLA Harish Poonja at Puttur town police station over the latter’s statement against chief minister Siddaramaiah.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm