ಕೋಮು ಪ್ರಚೋದನೆ ; ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಎಫ್ಐಆರ್ ದಾಖಲು 

24-05-23 11:01 pm       Mangalore Correspondent   ಕರಾವಳಿ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡಿರುವ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 153, 153A, 505 ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ‌

ಮಂಗಳೂರು, ಮೇ 24 : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡಿರುವ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 153, 153A, 505 ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ‌

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನಮಿತಾ ಕೆ.ಪೂಜಾರಿ ನೀಡಿದ ದೂರಿನಂತೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಕೋಮು ಪ್ರಚೋದಕ ಹಾಗೂ ದ್ವೇಷ ಹರಡುವ ರೀತಿಯ ಭಾಷಣ ಮಾಡಿದ ಆರೋಪದಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ನಮಿತಾ ಪೂಜಾರಿ ದೂರು ನೀಡಿದ್ದರು. 

Won't Tolerate "Hooliganism, Drug Mafia" In State: Karnataka Chief Minister  Siddaramaiah Tells Cops

ಇತ್ತೀಚೆಗೆ ಬೆಳ್ತಂಗಡಿಯಲ್ಲಿ ನಡೆದ ಬಿಜೆಪಿ ಅಭಿನಂದನಾ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ವಿವಾದಾತ್ಮಕ ಹೇಳಿಕೆ ನೀಡಿದ್ದರು. 24 ಹಿಂದೂ ಕಾರ್ಯಕರ್ತರನ್ನ ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆ ಎಂದು ತುಳು ಭಾಷೆಯಲ್ಲಿ‌ ಭಾಷಣ ಮಾಡಿದ್ದು ಈಗ ಕೊರಳು ಸುತ್ತಿಕೊಂಡಿದೆ. ಭಾಷಣದ ವೇಳೆ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದಾಗಿ ಹಿಂದು ಸಂಘಟನೆಗಳ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. 

ಸತ್ಯಜಿತ್ ಸುರತ್ಕಲ್ ಅವರನ್ನು ಉದ್ದೇಶಿಸಿ, ನೀವು ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದೀರಿ. 24 ಹಿಂದೂ ಕಾರ್ಯಕರ್ತರನ್ನ ಹತ್ಯೆ ಮಾಡಿದ ಸಿದ್ದರಾಮಯ್ಯಗೆ ನೀವು ವೋಟ್ ಕೇಳಿದ್ದೀರಾ.. ಬಜರಂಗದಳ ಬ್ಯಾನ್ ಮಾಡುತ್ತೇವೆ  ಎಂದ ಕಾಂಗ್ರೆಸ್ ಪರ  ವೋಟ್ ಕೇಳಿದ್ದೀರಾ.. ನಿಮ್ಮದು ಯಾವ ರೀತಿಯ ಹಿಂದುತ್ವ ಎಂದು ಕ್ಷೇತ್ರದ ಜನ ಕೇಳುತ್ತಿದ್ದಾರೆ ಎಂದು ಶಾಸಕ ಪೂಂಜ ಹೇಳಿರುವ ವಿಡಿಯೋ ವೈರಲ್ ಆಗಿತ್ತು. ಸಭೆಯಲ್ಲಿ ಮುಖ್ಯಮಂತ್ರಿ ಅವರನ್ನು ಅವಹೇಳನ ಮಾಡುವ ರೀತಿ ಮಾತನಾಡಿದ್ದು ಕಾಂಗ್ರೆಸಿಗರ ಸಿಟ್ಟಿಗೆ ಕಾರಣವಾಗಿದೆ.

Hate speech against CM Siddaramaiah FIR registered against MLA Harish Poonja at Belthangady police station