ಕಾಂಗ್ರೆಸ್ ಆಶ್ವಾಸನೆ ನಂಬಿ ಜನ ಮತ ಹಾಕಿದ್ದಾರೆ, ಯಾರೂ ಕರೆಂಟ್ ಬಿಲ್ ಕಟ್ಟಬೇಡಿ, ಮಹಿಳೆಯರು ಬಸ್ಸಿಗೆ ಹಣ ಕೊಡಬೇಡಿ ; ನಳಿನ್ ವ್ಯಂಗ್ಯ 

26-05-23 12:38 pm       Mangalore Correspondent   ಕರಾವಳಿ

ಕಾಂಗ್ರೆಸ್ ಚುನಾವಣೆ ಪೂರ್ವದಲ್ಲಿ ನೀಡಿದ್ದ ಉಚಿತ ಭರವಸೆಗಳನ್ನು ನಂಬಿ ಜನರು ಮತ ನೀಡಿದ್ದಾರೆ.  ಸಿದ್ದರಾಮಯ್ಯ ತಮ್ಮ ಸರ್ಕಾರ ಬಂದು 24 ಗಂಟೆಯಲ್ಲಿ ಗ್ಯಾರಂಟಿ ಜಾರಿ ಮಾಡ್ತೀವಿ ಅಂದಿದ್ರು.

ಮಂಗಳೂರು, ಮೇ 26 : ಕಾಂಗ್ರೆಸ್ ಚುನಾವಣೆ ಪೂರ್ವದಲ್ಲಿ ನೀಡಿದ್ದ ಉಚಿತ ಭರವಸೆಗಳನ್ನು ನಂಬಿ ಜನರು ಮತ ನೀಡಿದ್ದಾರೆ.  ಸಿದ್ದರಾಮಯ್ಯ ತಮ್ಮ ಸರ್ಕಾರ ಬಂದು 24 ಗಂಟೆಯಲ್ಲಿ ಗ್ಯಾರಂಟಿ ಜಾರಿ ಮಾಡ್ತೀವಿ ಅಂದಿದ್ರು. ಇವತ್ತು 20 ದಿನ ಕಳೆದರೂ ಜಾರಿಯಾಗಿಲ್ಲ.‌ ಸುಳ್ಳು ಆಶ್ವಾಸನೆ ಕೊಟ್ಟು ಸಿದ್ದರಾಮಯ್ಯ ಸರ್ಕಾರ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹರಿಹಾಯ್ದಿದ್ದಾರೆ. ‌

ಮಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ನಳಿನ್ ಕುಮಾರ್, ಸಿದ್ದರಾಮಯ್ಯ ತನ್ನನ್ನೂ ಸೇರಿಸಿ ಉಚಿತ ಕರೆಂಟ್ ಅಂತ ಹೇಳಿದ್ದರು. ಮಹಿಳೆಯರಿಗೆಲ್ಲ ಹಣ ಬರುತ್ತೆ ಅಂತ ಹೇಳಿದ್ರು. ಯಾವುದೇ ಮಾನದಂಡ ಇಲ್ಲದೇ ಭಾಗ್ಯಗಳು ಸಿಗುತ್ತೆ ಅಂದಿದ್ದರು. ಬಸ್ ನಲ್ಲಿ ಎಲ್ಲಿಗೆ ಬೇಕಾದರೂ ಉಚಿತವಾಗಿ ಮಹಿಳೆಯರು ಹೋಗಬಹುದು ಅಂದಿದ್ದರು. ಆದರೆ ಈಗ ಇವುಗಳನ್ನ ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ. ಜನ ಆಶ್ವಾಸನೆ ನಂಬಿ ಮತ ಹಾಕಿದ್ದಾರೆ, ಮತದಾರ ಆಕ್ರೋಶದಲ್ಲಿ ಇದ್ದಾನೆ.  

No moral policing in Karnataka: CM Siddaramaiah directs IPS officers |  Bengaluru - Hindustan Times

ಕರೆಂಟ್ ಬಿಲ್ ಕಲೆಕ್ಷನ್ ಗೆ ಬಂದ ಸಿಬ್ಬಂದಿ ಮೇಲೆ ಹಲ್ಲೆಗಳಾಗ್ತಿವೆ. ಜನ ಸರಿ ಇದ್ದಾರೆ, ಹಾಗಾಗಿ ಬಿಲ್ ಕಟ್ಟಬಾರದು ಅಂತಾನೇ ನಾನು ಕರೆ ಕೊಡ್ತೀನಿ. ಜನ ಆಕ್ರೋಶ ಸಹಜ, ಯಾರೂ ಬಿಲ್ ಕಟ್ಟಲೇ ಬಾರದು. ಈ ವೇಳೆ ಜನರಿಗೆ ತೊಂದರೆಯಾದ್ರೆ ನಾವು ಜನರ ಪರವಾಗಿ ನಿಲ್ತೇವೆ. ನೌಕರರಿಗೆ ಹಲ್ಲೆಯಾದ್ರೆ ಸರ್ಕಾರವೇ ಹೊಣೆಯಾಗುತ್ತೆ. ಇವತ್ತು‌ ಕಾಂಗ್ರೆಸ್ ನ ರಾಜಕೀಯ ನೀತಿಯಿಂದಾಗಿ ರಾಜ್ಯದಲ್ಲಿ ಅರಾಜಕತೆ ಪ್ರಾರಂಭವಾಗಿದೆ. ಕಾಂಗ್ರೆಸ್ ದ್ವೇಷದ ರಾಜಕಾರಣ ಪ್ರಾರಂಭ ಮಾಡಿದೆ. ಅಶ್ವಥ್ ನಾರಾಯಣ್ ಯಾವುದೋ ಸಂಧರ್ಭದಲ್ಲಿ ಹೇಳಿದ್ದರು, ಅದಕ್ಕೆ ಕ್ಷಮೆ ಕೂಡ ಕೇಳಿದ್ದಾರೆ. ಈಗ ಅವರ ಮೇಲೆ ಎಫ್ಐಆರ್ ದಾಖಲು ಮಾಡಲಾಗಿದೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿಕೆ ಇಟ್ಟುಕೊಂಡು ಕೇಸ್ ಮಾಡಿದ್ದಾರೆ. 

FIR against former Karnataka minister Ashwath Narayan | Deccan Herald

ಬೆಳ್ತಂಗಡಿ: ಶಾಸಕ ಹರೀಶ್‌ ಪೂಂಜಾ ವಿರುದ್ಧ ಎಫ್‌ಐಆರ್‌

ಬಂಟ್ವಾಳದ ಮಾಣಿಯಲ್ಲಿ ನಮ್ಮ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿದವರ ಬದಲು ಹಲ್ಲೆಗೆ ಒಳಗಾದವರ ಮೇಲೆ ಕೇಸ್ ಹಾಕಿದ್ದಾರೆ. ಕಾಂಗ್ರೆಸ್ ಗೂಂಡಾಗಿರಿ ಹಾಗೂ ದ್ವೇಷದ ರಾಜಕಾರಣದ ಮೂಲಕ ವಿರೋಧ ಪಕ್ಷವನ್ನ ಮೆಟ್ಟಿ ನಿಲ್ಲಬಹುದು ಅಂದುಕೊಂಡಿದೆ. ಸಿದ್ದರಾಮಯ್ಯರ ತಾತ ಮುತ್ತಾತನೂ ಈ ಕೆಲಸ ಮಾಡಿ ಯಶಸ್ವಿಯಾಗಿಲ್ಲ. ಸಂವಿಧಾನಕ್ಕೆ ತಕ್ಕ‌ಂತೆ ಸರ್ಕಾರ ಕೆಲಸ ಮಾಡಬೇಕು, ಅದು ಬಿಟ್ಟು ದ್ವೇಷ ರಾಜಕಾರಣ ಬೇಡ. ಈ ಸರ್ಕಾರ ಹೆಚ್ಚು ದಿನ ಬಾಳಲ್ಲ, ಉಳಿಯೋದಿಲ್ಲ. ಅಧಿಕಾರಿಗಳಿಗೆ ಒತ್ತಡ ಮತ್ತು ಭಯದ ವಾತಾವರಣದ ಮೂಲಕ ನಿಯಂತ್ರಣ ಹೇರ್ತಾ ಇದೆ. 

ಸಿದ್ದರಾಮಯ್ಯ ಸರ್ಕಾರ ಬಂದ ಕೂಡಲೇ 20 ಸಾವಿರ ಕೋಟಿ ಟೆಂಡರ್ ವಾಪಾಸ್ ಪಡೆದಿದೆ. 80% ಕಮಿಷನ್ ಗೆ ಡಿಮ್ಯಾಂಡ್ ಇಡಲು ಈ ರೀತಿ ಮಾಡಿದ್ದಾರೆ. ಕಾಮಗಾರಿ ಪ್ರಾರಂಭವಾದ ಪ್ರಕ್ರಿಯೆಯನ್ನು ನಿಲ್ಲಿಸಲಾಗಿದೆ. ಪರ್ಸೆಂಟೇಜ್ ಗಾಗಿ ಕಾಮಗಾರಿ ನಿಲ್ಲಿಸಿದ್ದಾರೆ, ಇದು 80% ಸರ್ಕಾರ ಎಂದು ನಳಿನ್ ಆರೋಪಿಸಿದರು. 

ನಮ್ಮ ಸರ್ಕಾರದ ಯಾವುದೇ ವಿಚಾರ ತನಿಖೆ ಮಾಡಲಿ. ಅದರ ಜೊತೆಗೆ ಲೋಕಾಯುಕ್ತದ ಸಿದ್ದರಾಮಯ್ಯ ಕೇಸ್ ಕೂಡ ತನಿಖೆ ಆಗಲಿ. ನಮ್ಮ‌ ಕಾಲಘಟ್ಟದ ಯಾವುದು ಬೇಕಾದ್ರೂ ತನಿಖೆ‌ ಅಗಲಿ. ಆದರೆ  20 ಸಾವಿರ ಕೋಟಿ ಟೆಂಡರ್ ಯಾಕೆ ನಿಲ್ಲಿಸಿದ್ಧೆಂದು ಬಹಿರಂಗ ಪಡಿಸಿ ಎಂದು ನಳಿನ್ ಕುಮಾರ್ ಹೇಳಿದ್ದಾರೆ. ‌

Mangalore Nalin Kateel slams Congress gaurnatees says it's all fake promises.