ಆರೆಸ್ಸೆಸ್ ಮೇಲೆ ಕೈಯಿಕ್ಕಿದವರೆಲ್ಲ ಕೈಸುಟ್ಟುಕೊಂಡಿದ್ದಾರೆ, ತಾಕತ್ತಿದ್ದರೆ ಪಾಕಿಸ್ತಾನ ಘೋಷಣೆ ಕೂಗಿದವರನ್ನು ಬಂಧಿಸಿ 

26-05-23 01:11 pm       Mangalore Correspondent   ಕರಾವಳಿ

ಭಜರಂಗದಳ, ಆರ್.ಎಸ್.ಎಸ್ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಉಳಿಯಲ್ಲ, ಇಲ್ಲಿಗೇ ಸಿದ್ದರಾಮಯ್ಯ ರಾಜಕೀಯ ಮುಗಿಯುತ್ತದೆ. ಸಿದ್ದರಾಮಯ್ಯ ಮತ್ತು ಪ್ರಿಯಾಂಕ್ ಖರ್ಗೆಗೆ ಅಷ್ಟು ತಾಕತ್ ಇದ್ರೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರನ್ನ ಬಂಧಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಸವಾಲು ಹಾಕಿದ್ದಾರೆ. 

ಮಂಗಳೂರು, ಮೇ 26 : ಭಜರಂಗದಳ, ಆರ್.ಎಸ್.ಎಸ್ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಉಳಿಯಲ್ಲ, ಇಲ್ಲಿಗೇ ಸಿದ್ದರಾಮಯ್ಯ ರಾಜಕೀಯ ಮುಗಿಯುತ್ತದೆ. ಸಿದ್ದರಾಮಯ್ಯ ಮತ್ತು ಪ್ರಿಯಾಂಕ್ ಖರ್ಗೆಗೆ ಅಷ್ಟು ತಾಕತ್ ಇದ್ರೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರನ್ನ ಬಂಧಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಸವಾಲು ಹಾಕಿದ್ದಾರೆ. 

ಆರ್.ಎಸ್.ಎಸ್ ನಿಷೇಧ ಮಾಡ್ತೀವಿ ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ತಿರುಗೇಟು ನೀಡಿದ ನಳಿನ್, ಆರ್.ಎಸ್.ಎಸ್ ಈ ದೇಶದಲ್ಲಿ ರಾಷ್ಟ್ರ ಭಕ್ತಿ ಕಲಿಸಿದೆ. ಈ ದೇಶ ನಡೆಸುವ ಪ್ರಧಾನ ಮಂತ್ರಿ ಆರ್.ಎಸ್.ಎಸ್ ಸ್ವಯಂಸೇವಕ. ಕೇಂದ್ರದ ಮಂತ್ರಿಗಳು, ನಾವೆಲ್ಲರೂ ಆರ್.ಎಸ್.ಎಸ್ ಸ್ವಯಂಸೇವಕರು. ನೆಹರು, ಇಂದಿರಾ ಗಾಂಧಿ ಎಲ್ಲರೂ ನಿಷೇಧಕ್ಕೆ ಕೈ ಹಾಕಿ ಕೈ ಸುಟ್ಟುಕೊಂಡಿದಾರೆ. ನರಸಿಂಹ ರಾವ್ ಸರ್ಕಾರ, ಯಾವಾಗೆಲ್ಲಾ ಕಾಂಗ್ರೆಸ್ ಸರ್ಕಾರ ಇತ್ತೋ ಆಗೆಲ್ಲಾ ಇಂಥ ಪ್ರಯತ್ನ ಆಗಿದೆ. ನಿಷೇಧದ ಕೆಲಸ ಮಾಡಿದಾಗಲೆಲ್ಲಾ ದೇಶದಲ್ಲಿ ಕಾಂಗ್ರೆಸ್ ಸರ್ಕಾರವೇ ಬಂದಿಲ್ಲ. 

Now, Siddaramaiah halts tenders worth Rs 20,000 cr | Deccan Herald

Congress' Priyank Kharge slams BJP as "Loose Cannons" for siddaramaiah  remark - The Daily Guardian

ಭಜರಂಗದಳ, ಆರ್.ಎಸ್.ಎಸ್ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಇರಲ್ಲ, ಸಿದ್ದರಾಮಯ್ಯ ರಾಜಕೀಯ ಮುಗಿದು ಹೋಗಲಿದೆ. ಸಿದ್ದರಾಮಯ್ಯ ಮತ್ತು ಪ್ರಿಯಾಂಕ್ ಖರ್ಗೆಗೆ ತಾಕತ್ ಇದ್ರೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರನ್ನ ಬಂಧಿಸಿ. ನಿಮ್ಮ ಮೆರವಣಿಗೆ, ವಿಜಯೋತ್ಸವ, ಸಭೆಗಳಲ್ಲೇ ಪಾಕಿಸ್ತಾನ ಪರ ಘೋಷಣೆ ಬಂದಿದೆ. ಅದು ಬಿಟ್ಟು ರಾಜ್ಯವನ್ನ ವಿಭಜನಾವಾದದ ಮೂಲಕ ಕಟ್ಟೋದು ಬೇಡ ಎಂದರು ನಳಿನ್. 

ಪ್ರಿಯಾಂಕ್ ಖರ್ಗೆ ಬಾಯಿಗೆ ಹಿಡಿತ ಇಟ್ಟುಕೊಂಡು, ನಾಲಿಗೆ ಹಿಡಿತದಲ್ಲಿಟ್ಟು ಮಾತನಾಡಲಿ. ಭಜರಂಗದಳ, ಆರ್.ಎಸ್.ಎಸ್ ನಿಷೇಧ ಮಾಡಲು ನಿಮಗೆ ಹಕ್ಕಿಲ್ಲ. ಪಿಎಫ್ಐ ಅನ್ನ ನಾವು ನಿಷೇಧ ಮಾಡಿದ್ದೇವೆ, ಇವರೇನು ನಿಷೇಧ ಮಾಡೋದು? ಆರ್ ಎಸ್ಎಸ್ ರಾಷ್ಟ್ರಭಕ್ತಿ ಸಂಕೇತ ಅಂತ ಕಾಂಗ್ರೆಸ್ ನಾಯಕರೇ ಹೇಳಿದ್ದಾರೆ. ವಿಧಾನಸೌಧದಲ್ಲಿ ಡಿಕೆಶಿಯವರೇ ಆರೆಸ್ಸೆಸ್ ಪ್ರಾರ್ಥನೆ ಹೇಳಿದ್ದಾರೆ, ಅದರಲ್ಲೇ ಇದೆ. ಆ ಪ್ರಾರ್ಥನೆಯಲ್ಲಿ ಏನಿದೆ ಅಂತ ಖರ್ಗೆಯವರು ಡಿಕೆಶಿ ಬಳಿ ಕೇಳಿ ತಿಳಿದುಕೊಳ್ಳಲಿ. ರಾಜ್ಯವನ್ನು ದ್ವೇಷ, ವಿಭಜನೆ ಮೂಲಕ ಕಾಂಗ್ರೆಸ್ ಆಡಳಿತ ಮಾಡ್ತಿದೆ. ಇವರ ಮಂತ್ರಿ ಮಂಡಲದ ಗಲಾಟೆಯಲ್ಲೇ ಕಾಂಗ್ರೆಸ್ ವಿಭಜನೆ ಆಗುತ್ತದೆ. ಇದರ ಭಯದಲ್ಲಿ ಆರ್.ಎಸ್‌ಎಸ್ ಹೆಸರಲ್ಲಿ ಕಾಂಗ್ರೆಸ್ ಗಟ್ಟಿ ಮಾಡ್ತಾ ಇದಾರೆ. ಇವರ ಜಗಳ ಹೊರ ಬಾರದಂತೆ ಮಾಡಲು ಇದೊಂದು ಷಡ್ಯಂತ್ರ ಅಷ್ಟೇ ಎಂದು ನಳಿನ್ ಕುಮಾರ್ ಹೇಳಿದ್ದಾರೆ.

Banning RSS or Bajarang dal in Karnataka Congress will be burnt slams Naleen Kateel in Mangalore. He slammed Priyank Kharge for his remarks on RSS.