ಬ್ರೇಕಿಂಗ್ ನ್ಯೂಸ್
27-05-23 11:21 am Mangalore Correspondent ಕರಾವಳಿ
ಮಂಗಳೂರು, ಮೇ 27: ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಬಿಜೆಪಿ ಕಾರ್ಯಕರ್ತ ದಿ.ಪ್ರವೀಣ್ ನೆಟ್ಟಾರು ಪತ್ನಿಗೆ ನೀಡಲಾಗಿದ್ದ ತಾತ್ಕಾಲಿಕ ನೇಮಕಾತಿಯ ಉದ್ಯೋಗಕ್ಕೆ ಕತ್ತರಿ ಬಿದ್ದಿದೆ. ಹಿಂದಿನ ಸರಕಾರ ಕೈಗೊಂಡಿದ್ದ ಎಲ್ಲ ರೀತಿಯ ತಾತ್ಕಾಲಿಕ ನೇಮಕಾತಿಗಳನ್ನು ಕಾಂಗ್ರೆಸ್ ಸರಕಾರ ರದ್ದುಪಡಿಸಿರುವುದರಿಂದ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿಗೆ ನೀಡಲಾಗಿದ್ದ ಉದ್ಯೋಗವೂ ಕಡಿತಗೊಂಡಿದೆ.
ಕಳೆದ 2022ರ ಸೆಪ್ಟಂಬರ್ ತಿಂಗಳ 22ರಂದು ಪ್ರವೀಣ್ ನೆಟ್ಟಾರು ಪತ್ನಿಗೆ ಮುಖ್ಯಮಂತ್ರಿಗಳ ಕಚೇರಿಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ಅನುಕಂಪದ ಮೇಲೆ ಉದ್ಯೋಗ ಕಲ್ಪಿಸಲಾಗಿತ್ತು. ಆದೇಶದ ಪ್ರತಿಯಲ್ಲಿ ಮುಖ್ಯಮಂತ್ರಿ ಪದಾಧಿಕಾರ ಇರುವ ವರೆಗೆ ಅಥವಾ ಮುಂದಿನ ಆದೇಶದ ವರೆಗೆ ಮಾತ್ರ ಎಂದು ಉಲ್ಲೇಖ ಮಾಡಿದ್ದು, ಅದೇ ಈಗ ಮುಳುವಾಗಿದೆ. ರಾಜ್ಯದಲ್ಲಿ ಸರಕಾರ ಬದಲಾಗುತ್ತಿದ್ದಂತೆ ತಾತ್ಕಾಲಿಕ ಹುದ್ದೆಗಳ ನೇಮಕಾತಿಗೆ ಕತ್ತರಿ ಹಾಕಲಾಗಿದೆ. ಸರಕಾರಿ ಸೇವೆಯಲ್ಲಿದ್ದು ಮೃತಪಟ್ಟ ನೌಕರರ ಪತ್ನಿಯರಿಗೆ ಅರ್ಹತೆ ಆಧಾರದಲ್ಲಿ ನೇಮಕಾತಿ ನಡೆಸುತ್ತಾರೆ. ಅದೇ ರೀತಿ ಪ್ರವೀಣ್ ಪತ್ನಿಗೂ ಉದ್ಯೋಗ ನೇಮಕಾತಿ ಮಾಡಿದ್ದು, ಆದೇಶ ಪ್ರತಿಯಲ್ಲಿ ಮುಖ್ಯಮಂತ್ರಿ ಅಧಿಕಾರದಲ್ಲಿ ಇರುವವರೆಗೆ ಮಾತ್ರ ಎಂದು ಉಲ್ಲೇಖಿಸಿ ಬಿಜೆಪಿ ಸರಕಾರ ಎಡವಟ್ಟು ಮಾಡಿಕೊಂಡಿದೆ.


ಬೆಂಗಳೂರಿಗೆ ಉದ್ಯೋಗಕ್ಕೆ ಹೋಗುವುದು ಕಷ್ಟ ಎಂಬ ನೆಲೆಯಲ್ಲಿ ಆನಂತರ ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ಪ್ರಾಕೃತಿಕ ವಿಕೋಪ ವಿಭಾಗದಲ್ಲಿ ನೂತನ ಕುಮಾರಿಗೆ ಉದ್ಯೋಗ ಕಲ್ಪಿಸಲಾಗಿತ್ತು. ಅಕ್ಟೋಬರ್ 1ರಿಂದ ಉದ್ಯೋಗ ಸೇರಿದ್ದ ನೂತನ ಕುಮಾರಿಗೆ ಇದೀಗ ನೌಕರಿ ಕಡಿತ ಆಗಿರುವ ಬಗ್ಗೆ ಮಾಹಿತಿ ನೀಡಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ರವಿಕುಮಾರ್ ಬಳಿ ಕೇಳಿದಾಗ, ತಾತ್ಕಾಲಿಕ ನೆಲೆಯಲ್ಲಿ ನೇಮಕಗೊಂಡ ಹುದ್ದೆಗಳು ಸರಕಾರ ಬದಲಾದಾಗ ರದ್ದುಗೊಳ್ಳುವುದು ಸಹಜ ಪ್ರಕ್ರಿಯೆ. ಎಲ್ಲರಂತೆ ಇವರದ್ದು ಕೂಡ ಅದೇ ರೀತಿ ಆಗಿದೆ. ಇವರನ್ನು ಮುಂದುವರಿಸುವ ಬಗ್ಗೆ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು ಎಂದು ತಿಳಿಸಿದ್ದಾರೆ.
ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಿಂದ ಕಾರ್ಯಕರ್ತರ ಆಕ್ರೋಶದಿಂದ ತೀವ್ರ ಮುಜುಗರಕ್ಕೀಡಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್, ಪ್ರವೀಣ್ ಪತ್ನಿಗೆ ಮುಖ್ಯಮಂತ್ರಿ ಬೊಮ್ಮಾಯಿಗೆ ಮನವಿ ಮಾಡಿ ಉದ್ಯೋಗ ದೊರಕಿಸುವ ಕೆಲಸ ಮಾಡಿದ್ದರು. ಆದರೆ ತಾತ್ಕಾಲಿಕ ನೇಮಕಾತಿಯಿಂದಾಗಿ ಈಗ ಸರಕಾರ ಬದಲಾಗುತ್ತಿದ್ದಂತೆ ಕೆಲಸ ಕಳಕೊಂಡಿದ್ದು, ಮತ್ತೆ ನಳಿನ್ ಕುಮಾರ್ ಆಕ್ರೋಶಕ್ಕೆ ತುತ್ತಾಗಿದ್ದಾರೆ.
Karnataka congress govt withdraws appointment order of Praveen Nettaru’s wife, after blunder by BJP government in Mangalore. Nutan Kumari, wife of the murdered BJP Yuva Morcha leader, was offered a Group C post on contract basis in the office of former Chief Minister Basavaraj Bommai.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 11:59 am
HK News Staffer
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
05-09-26 02:04 pm
HK News Staffer
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಜೈಲು ವಾರ್ಡನ್ ಕತ...
04-09-26 08:16 pm
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am