ಕಡಬ ; ಮತ್ತೆ ಕಾಡಾನೆ ದಾಳಿಗೆ ವ್ಯಕ್ತಿ ಗಂಭೀರ, ಎರಡು ಆನೆ ಬೀಡು ಬಿಟ್ಟ ಬಗ್ಗೆ ಸ್ಥಳೀಯರ ಆತಂಕ 

28-05-23 07:00 pm       Mangalore Correspondent   ಕರಾವಳಿ

ಕಡಬ ವ್ಯಾಪ್ತಿಯಲ್ಲಿ ಮತ್ತೆ ಕಾಡಾನೆ ದಾಳಿ ನಡೆಸಿದ್ದು ಕೆಲಸಕ್ಕೆ ಹೋಗುತ್ತಿದ್ದ ವ್ಯಕ್ತಿಯೊಬ್ಬರು ಕಾಡಾನೆ ತಿವಿತಕ್ಕೊಳಗಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. 

ಪುತ್ತೂರು, ಮೇ 28 : ಕಡಬ ವ್ಯಾಪ್ತಿಯಲ್ಲಿ ಮತ್ತೆ ಕಾಡಾನೆ ದಾಳಿ ನಡೆಸಿದ್ದು ಕೆಲಸಕ್ಕೆ ಹೋಗುತ್ತಿದ್ದ ವ್ಯಕ್ತಿಯೊಬ್ಬರು ಕಾಡಾನೆ ತಿವಿತಕ್ಕೊಳಗಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. 

ಕಡಬ ತಾಲೂಕಿನ ಇಚ್ಲಂಪಾಡಿಯ ನಡುಮನೆ ಕ್ರಾಸ್ ಎಂಬಲ್ಲಿ ಘಟನೆ ನಡೆದಿದ್ದು ವಿಜು ಕುಮಾರ್ ಎಂಬವರು ಕಾಡಾನೆ ದಾಳಿಗೀಡಾದವರು. ಅವರಿಗೆ ಕಡಬದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಬಳಿಕ ಪುತ್ತೂರು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. 

ಇಚ್ಲಂಪಾಡಿ ಪರಿಸರದಲ್ಲಿ ಎರಡು ಕಾಡಾನೆ ಬೀಡು ಬಿಟ್ಟಿರುವ ಬಗ್ಗೆ ಸ್ಥಳೀಯರು ತಿಳಿಸಿದ್ದಾರೆ. ಕಡಬ ವ್ಯಾಪ್ತಿಯಲ್ಲಿ ಎರಡು ತಿಂಗಳ ಹಿಂದೆ ಕಾಡಾನೆ ದಾಳಿಗೆ ಯುವತಿ ಸೇರಿ ಇಬ್ಬರು ಸಾವಿಗೀಡಾಗಿದ್ದರು. ಆನಂತರ, ಕಾರ್ಯಾಚರಣೆ ನಡೆಸಿದ್ದ ಅರಣ್ಯ ಸಿಬಂದಿ ಒಂದು ಕಾಡಾನೆಯನ್ನು ಸೆರೆಹಿಡಿದು ತೆರಳಿದ್ದರು. ಇದೀಗ ಮತ್ತೆ ಕಾಡಾನೆ ಮನುಷ್ಯನ ಮೇಲೆ ದಾಳಿ ನಡೆಸಿದ್ದು ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಹೊಸ ಸವಾಲು ಎದುರಾಗಿದೆ.

Kadaba wild elephant attack, one seriously injured, villagers in panic. Viji kumar was attacked by elephant. Two wild elephants have been suspected moving around the village.