ಬ್ರೇಕಿಂಗ್ ನ್ಯೂಸ್
29-05-23 04:41 pm Mangalore Correspondent ಕರಾವಳಿ
ಮಂಗಳೂರು, ಮೇ 29 : ಕಾಂಗ್ರೆಸ್ ಪಕ್ಷ ಚುನಾವಣೆ ಪೂರ್ವದಲ್ಲಿ ಘೋಷಿಸಿದ 'ಗ್ಯಾರೆಂಟಿ ಯೋಜನೆ' ದೊಡ್ಡ ಮಟ್ಟಿನ ಗೊಂದಲಕ್ಕೆ ಎಡೆ ಮಾಡಿದೆ. ಸರಕಾರ ಬಂದ 24 ಗಂಟೆಯಲ್ಲೇ ಗ್ಯಾರಂಟಿ ಜಾರಿ ಎಂದು ಘೋಷಿಸಿದ್ದ ಕಾಂಗ್ರೆಸ್ ಭರವಸೆಗಳನ್ನು ಈಡೇರಿಸಲು ಪರದಾಡುತ್ತಿದೆ. ಬಸ್ ಗಳಲ್ಲಿ ಜನ ಟಿಕೆಟ್ ಇಲ್ಲದೆ ಪ್ರಯಾಣಿಸಿ ನಿರ್ವಾಹಕರಲ್ಲಿ ಗಲಾಟೆ ಮಾಡುತ್ತಿದ್ದಾರೆ. ಗ್ಯಾರಂಟಿ ಯೋಜನೆ ನಿಮಗೂ ಇದೆ, ನಮಗೂ ಇದೆ ಎಂದು ಹೇಳಿದ್ದ ಸಿದ್ದರಾಮಯ್ಯ ಈಗ ಷರತ್ತು ಹಾಕುತ್ತಿದ್ದಾರೆ. ಯಾವುದೇ ಷರತ್ತಿಲ್ಲದೆ, ಎಲ್ಲ ಭರವಸೆಗಳನ್ನು ಈಡೇರಿಸಬೇಕು ಎಂದು ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಆಗ್ರಹಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ನಮಗೂ ಫ್ರೀ, ನಿಮಗೂ ಫ್ರೀ ಅಂತ ಹೇಳುವಾಗ ಈ ಎಲ್ಲ ಪುಕ್ಕಟೆ ಯೋಜನೆಗಳಿಗೆ ಸಾವಿರಾರು ಕೋಟಿ ಬಜೆಟ್ ಬೇಕು ಎಂಬ ಕನಿಷ್ಠ ಜ್ಞಾನ ಇರಲಿಲ್ಲವೇ? 200 ಯೂನಿಟ್ ವಿದ್ಯುತ್ ಉಚಿತ ಎಂದು ಹೇಳಿದ ನೀವು, ಈಗ ಅದು ಕೇವಲ 200 ಯೂನಿಟ್ ಒಳಗೆ ಉಪಯೋಗಿಸಿದವರಿಗೆ ಮಾತ್ರ ಎಂದು ಕಂಡೀಶನ್ ಹಾಕುತ್ತಿದ್ದೀರಿ. ಇದು ಯಾವ ನ್ಯಾಯ ? ಎಂದು ಪ್ರಶ್ನಿಸಿದ ಅವರು, ನೀವು ಘೋಷಿಸಿದ ಎಲ್ಲ ಗ್ಯಾರೆಂಟಿಗಳನ್ನು ಯಾವುದೇ ಶರತ್ತುಗಳು ಇಲ್ಲದೆ ಜಾರಿಗೆ ತನ್ನಿ ಎಂದು ಆಗ್ರಹಿಸಿದರು.
ರಾಜ್ಯದಿಂದಲೇ 10 ಕೆಜಿ ಅಕ್ಕಿ ಕೊಡಿ
ಕಾಂಗ್ರೆಸ್ ಪಕ್ಷ 10 ಕೆಜಿ ಅಕ್ಕಿ ಉಚಿತ ಕೊಡುವುದಾಗಿ ಘೋಷಿಸಿದೆ. ಆದರೆ ಈಗಾಗಲೇ ಕೇಂದ್ರ ಸರಕಾರದಿಂದ 5 ಕೆಜಿ ಅಕ್ಕಿ ಪಡಿತರದಲ್ಲಿ ನೀಡಲಾಗುತ್ತಿದೆ. ಕಾಂಗ್ರೆಸ್ ಈಗ ಕೇವಲ 5 ಕೆಜಿ ಹೆಚ್ಚುವರಿ ಅಕ್ಕಿ ನೀಡಿ ಜನರಿಗೆ ಮಂಕುಬೂದಿ ಎರಚಲು ಸಿದ್ಧತೆ ಮಾಡಿಕೊಂಡಿದೆ. ಕಾಂಗ್ರೆಸ್ ಘೋಷಿಸಿದಂತೆ ಕೇಂದ್ರದ ಪಾಲಿನ 5 ಕೆಜಿ ಅಕ್ಕಿ ಹೊರತುಪಡಿಸಿ ರಾಜ್ಯ ಸರಕಾರದಿಂದಲೇ ತಲಾ 10 ಕೆಜಿ ಅಕ್ಕಿಯನ್ನು ವಿತರಣೆ ಮಾಡಲಿ ಎಂದು ಆಗ್ರಹಿಸಿದರು.
ಅಭಿವೃದ್ಧಿ ವಿರೋಧಿ ನಡೆ
ಬಿಜೆಪಿ ಸರಕಾರದ ಅವಧಿಯಲ್ಲಿ ಪ್ರತಿ ವಿಧಾನಸಭೆ ಕ್ಷೇತ್ರಗಳಿಗೆ ವಿವಿಧ ಕಾಮಗಾರಿಗಳಿಗೆ ಬಿಡುಗಡೆಯಾಗಿದ್ದ 20 ಸಾವಿರ ಕೋಟಿ ರೂ. ಮೊತ್ತದ ಅನುದಾನವನ್ನು ಕಾಂಗ್ರೆಸ್ ಸರಕಾರ ತಡೆಹಿಡಿದಿದ್ದು ರಾಜಕೀಯ ಹಗೆತನ ಸಾಧಿಸುವ ಕೆಲಸ ಮಾಡಿದೆ. ಬಿಜೆಪಿ ಸರಕಾರ ಇಂತಹ ಕೀಳುಮಟ್ಟದ, ಅಭಿವೃದ್ಧಿ ವಿರೋಧಿಯ ನಡೆಯನ್ನು ಎಂದೂ ಮಾಡಿಲ್ಲ. ಹಿಂದಿನ ಸರಕಾರದ ಕಾಮಗಾರಿಗಳನ್ನು ಮುಂದುವರಿಸುವ ಕೆಲಸವನ್ನು ನಮ್ಮ ಅವಧಿಯಲ್ಲಿ ಮಾಡಲಾಗಿತ್ತು ಎಂದು ಶಾಸಕ ಕಾಮತ್ ಹೇಳಿದರು.
ಸಂಪುಟ ಕಸರತ್ತು ನಿಲ್ಲಿಸಿ, ಜನರ ಕಣ್ಣೊರೆಸುವ ಕೆಲಸ ಮಾಡಿ
2019ರಲ್ಲಿ ಬಿಎಸ್‍ವೈ ಅಧಿಕಾರ ವಹಿಸಿಕೊಂಡ ಸಂದರ್ಭ ರಾಜ್ಯದಲ್ಲಿ ದೊಡ್ಡ ಮಟ್ಟಿನ ಪ್ರಾಕೃತಿಕ ವಿಕೋಪ ಸಂಭವಿಸಿದ್ದರೂ ಮಂತ್ರಿ ಮಂಡಲ ವಿಸ್ತರಣೆ ಬಗ್ಗೆ ತಲೆಕೆಡಿಸಿಕೊಳ್ಳದೆ ಒಬ್ಬರೇ ಇಡೀ ರಾಜ್ಯ ಸುತ್ತಿ ಜನರ ಕಣ್ಣೊರೆಸುವ ಕೆಲಸ ಮಾಡಿದ್ದರು. ಆದರೆ ಇದೀಗ ಕಾಂಗ್ರೆಸ್ ಸರಕಾರ ಸಂಪುಟ ವಿಸ್ತರಣೆ ಮಾಡಿದ್ದರೂ ಖಾತೆ ಹಂಚಿಕೆ ಬಗೆಗಿನ ಗೊಂದಲ ಬಗೆಹರಿದಿಲ್ಲ. ರಾಜ್ಯದಲ್ಲಿ ಜನರು ಪಡುತ್ತಿರುವ ಕಷ್ಟವನ್ನು ಗಣನೆಗೆ ತೆಗೆದುಕೊಳ್ಳದೆ ಕಾಂಗ್ರೆಸ್ ಪಕ್ಷ ಕೇವಲ ಅಧಿಕಾರದ ಆಸೆಗೆ ಜನರ ಕಣ್ಣಿಗೆ ಮಣ್ಣೆರೆಚುವ ಕೆಲಸ ಮಾಡುತ್ತಿದೆ ಎಂದು ವೇದವ್ಯಾಸ ಕಾಮತ್ ಆರೋಪಿಸಿದರು.
ದ.ಕ., ಉಡುಪಿ ಜನರನ್ನು ವಂಚಿಸಬೇಡಿ
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಜನರಿಗೆ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಕೊಡಬಾರದು ಎಂದು ಜಾಲತಾಣಗಳಲ್ಲಿ ಬರೆಯುವ ಕಾಂಗ್ರೆಸ್ ಪಕ್ಷದವರಿಗೆ ನಾಚಿಕೆ ಆಗಬೇಕು. ದಕ್ಷಿಣ ಕನ್ನಡ ಜಿಲ್ಲೆಯ 8 ಕ್ಷೇತ್ರದಲ್ಲಿ 5 ಲಕ್ಷಕ್ಕೂ ಅಧಿಕ ಮತ ಪಡೆದ ಕಾಂಗ್ರೆಸಿಗರು ಈ ಭಾಗದಲ್ಲಿ ಸೋತ ಕಾರಣಕ್ಕೆ ಹೀಗೆ ಹೇಳುವುದು ಸರಿಯಲ್ಲ. ಕೇವಲ ಗೆಲ್ಲಿಸಿದ ಕ್ಷೇತ್ರಗಳಿಗೆ ಮಾತ್ರ ಗ್ಯಾರಂಟಿ ಕೊಡುವ ಕಾಂಗ್ರೆಸ್ ಮನಸ್ಥಿತಿ ಸರಿಯಲ್ಲ. ಒಮ್ಮೆ ಗೆದ್ದ ಬಳಿಕ ಎಲ್ಲ ಮತದಾರರಿಗೂ ಆತ ಶಾಸಕ. ಕಾಂಗ್ರೆಸಿಗರಿಗೆ ಮಾತ್ರ ಅಲ್ಲ. ಈ ರೀತಿ ಹೇಳುವುದು ಸಣ್ಣತನ ಎಂದರು.
ದೈವ, ದೇವತೆಗಳಿಗೆ ಅವಮಾನ
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಸತ್ಯಸಾರಮಣಿ ದೈವದ ಮೇಲೆ ಪ್ರಮಾಣ ಮಾಡಿ ಪ್ರತಿಜ್ಞೆ ಸ್ವೀಕರಿಸಿರುವುದನ್ನು ವಿರೋಧಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ತುಳುನಾಡಿನ ದೈವ, ದೇವರಿಗೆ ಅಪಮಾನ ಮಾಡಿದ್ದಾರೆ. ಆರಂಭದಲ್ಲಿ ಇದೇ ರೀತಿಯಲ್ಲಿ ಅಜ್ಜಯ್ಯನ ಹೆಸರಿನಲ್ಲಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಿದ್ದಾಗ ಸಿದ್ದರಾಮಯ್ಯ ಅವರು ಯಾಕೆ ಮಾತನಾಡಲಿಲ್ಲ? ಕಾಂಗ್ರೆಸ್ಸಿನ ಕೆಲವು ಶಾಸಕರು ಡಿ.ಕೆ.ಶಿವಕುಮಾರ್ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದಾಗ ಸಿದ್ದರಾಮಯ್ಯ ಎಲ್ಲಿದ್ದರು ಎಂದು ಶಾಸಕ ಕಾಮತ್ ಪ್ರಶ್ನಿಸಿದರು.
Congress has to implement guarantee schemes without conditions as promised before election's says MLA Vedavyas Kamath in Mangalore. MLA Vedavyas Kamath said that Congress government was indulging in hatred politics. He also urged them to implement all the guarantee schemes announced before the elections without conditions.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 07:31 pm
HK News Desk
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm