ಬ್ರೇಕಿಂಗ್ ನ್ಯೂಸ್
31-05-23 09:04 am Mangaluru Correspondent ಕರಾವಳಿ
ಮಂಗಳೂರು, ಮೇ 31: ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳ್ತಂಗಡಿ, ಪುತ್ತೂರು, ಬಂಟ್ವಾಳ ತಾಲೂಕಿನ 16 ಕಡೆ ಇಂದು ನಸುಕಿನಲ್ಲಿ ದಾಳಿ ಕಾರ್ಯಾಚರಣೆ ನಡೆದಿದ್ದು ಹಲವರನ್ನು ವಶಕ್ಕೆ ಪಡೆದಿದ್ದಾರೆ.
ಸ್ಥಳೀಯ ಪೊಲೀಸರ ನೆರವು ಪಡೆದು ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಭಯೋತ್ಪಾದಕ ಕೃತ್ಯಕ್ಕಾಗಿ ಗಲ್ಫ್ ರಾಷ್ಟ್ರಗಳಿಂದ ಹವಾಲಾ ಹಣ ರವಾನೆ ಆಗುತ್ತಿರುವ ಮಾಹಿತಿ ಆಧರಿಸಿ ದಾಳಿ ನಡೆಸಲಾಗಿದೆ. ದಕ್ಷಿಣ ಭಾರತದಲ್ಲಿ ಬೇರು ಬಿಟ್ಟಿರುವ ಪಿಎಫ್ಐ ಹವಾಲಾ ಹಣದ ಜಾಲ ಬೆನ್ನತ್ತಿರುವ ಎನ್ಐಎ ತಂಡ ಕಳೆದೊಂದು ವರ್ಷದಲ್ಲಿ ತನಿಖೆ ನಡೆಸುತ್ತಿದೆ.
ತನಿಖೆಯಲ್ಲಿ ಭಾರತದಲ್ಲಿ ಭಯೋತ್ಪಾದನೆಗೆ ಫಂಡಿಂಗ್ ಮಾಡುತ್ತಿದ್ದ ಹವಾಲಾ ನೆಟ್ವರ್ಕ್ ಪತ್ತೆಯಾಗಿತ್ತು. ಬಿಹಾರದ ಪಾಟ್ನಾದಲ್ಲಿ 2022ರ ಜುಲೈ ತಿಂಗಳಲ್ಲಿ ಪತ್ತೆಯಾಗಿದ್ದ ಫುಲ್ವಾರಿ ಶರೀಫ್ ಪ್ರಕರಣದ ಬಳಿಕ ಈ ಕುರಿತ ತನಿಖೆ ಚುರುಕುಗೊಂಡಿತ್ತು. ಬಿಹಾರದಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದು ತನಿಖೆಯಲ್ಲಿ ಕಂಡುಬಂದಿತ್ತು.
ತನಿಖೆಯ ಜಾಡು ಹಿಡಿದು ದಕ್ಷಿಣ ಕನ್ನಡ ಜಿಲ್ಲೆಗೆ ಬಂದಿದ್ದ ಎನ್ಐಎ ಅಧಿಕಾರಿಗಳು ಎರಡು ತಿಂಗಳ ಹಿಂದೆ ಬಂಟ್ವಾಳ ಮತ್ತು ಪುತ್ತೂರಿನಲ್ಲಿ ದಾಳಿ ನಡೆಸಿದ್ದರು. ಬಂಟ್ವಾಳ ನಿವಾಸಿ ಮಹಮ್ಮದ್ ಸಿನಾನ್, ಸಜಿಪ ಮೂಡದ ಸರ್ಫ್ರಾಜ್ ನವಾಜ್, ಇಕ್ಬಾಲ್, ಪುತ್ತೂರಿನ ಅಬ್ದುಲ್ ರಫೀಕ್ ಮತ್ತು ಕೇರಳದ ಕಾಸರಗೋಡಿನ ಕುಂಜತ್ತೂರು ನಿವಾಸಿ ಅಬೀದ್ ಕೆ.ಎಂ. ಎಂಬಾತನನ್ನು ಬಂಧಿಸಲಾಗಿತ್ತು.
ದಾಳಿ ಸಂದರ್ಭದಲ್ಲಿ ಡಿಜಿಟಲ್ ಸಾಕ್ಷ್ಯಗಳು ಮತ್ತು ಬೇನಾಮಿ ಖಾತೆಗಳಲ್ಲಿ ಕೋಟ್ಯಂತರ ರೂ. ವಹಿವಾಟು ನಡೆಸಿದ್ದು ಪತ್ತೆಯಾಗಿತ್ತು. ಇದೇ ನೆಟ್ವರ್ಕ್ ಆಧರಿಸಿ ಅಧಿಕಾರಿಗಳ ತಂಡ ಕಾರ್ಯಾಚರಣೆ ಮುಂದುವರಿಸಿದೆ.
PFI Hawala network, NIA Raid 16 places of Mangalore, Dakshina kannada, Many taken to custody with the help of local police. Searches were conducted at 16 locations leading to the seizure of multiple digital devices and incriminating documents containing details of transactions running into several crores of rupees," a spokesperson of the agency said.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 11:59 am
HK News Staffer
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
05-09-26 01:13 pm
HK News Staffer
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಜೈಲು ವಾರ್ಡನ್ ಕತ...
04-09-26 08:16 pm
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm