ಬ್ರೇಕಿಂಗ್ ನ್ಯೂಸ್
01-06-23 08:17 pm Mangalore Correspondent ಕರಾವಳಿ
ಮಂಗಳೂರು, ಜೂನ್ 1: ವಿಧಾನಸಭೆ ಚುನಾವಣೆ ವೇಳೆ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಣ್ಣ ಸಿ.ಡಿ. ಅವರನ್ನು ಅಮಾನತು ಮಾಡಲಾಗಿದೆ.
ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಟಿಡಿ ಜಯಣ್ಣ ಕರ್ತವ್ಯ ಲೋಪ ಎಸಗಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅಮಾನತು ಆದೇಶ ಮಾಡಿದ್ದಾರೆ. ಆದರೆ, ತನ್ನ ಮೇಲೆ ಮಾಡಿರುವ ಆರೋಪಗಳನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ (ಡಿಡಿಪಿಯು) ಜಯಣ್ಣ ನಿರಾಕರಿಸಿದ್ದಾರೆ.
ಜಯಣ್ಣ ಅವರು ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್ ಹೊರಡಿಸಿದ ನೋಟಿಸ್ ಗೆ ಮೇ 22 ರಂದು ಲಿಖಿತ ಉತ್ತರ ನೀಡಿದ್ದರು. ಆದರೆ, ಉತ್ತರ ಸಮಾಧಾನ ತರಲಿಲ್ಲ ಎಂಬ ನೆಲೆಯಲ್ಲಿ ಡಿಡಿಪಿಯು ಅವರನ್ನು ಅಮಾನತು ಮಾಡಲಾಗಿದೆ. ಇದೀಗ ಕೊಕ್ಕಡ ಪಿಯು ಕಾಲೇಜು ಪ್ರಾಂಶುಪಾಲ ವೆಂಕಟೇಶಮೂರ್ತಿ ಅವರನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಹುದ್ದೆಗೆ ಪ್ರಭಾರವಾಗಿ ನೇಮಕ ಮಾಡಲಾಗಿದೆ.
ಜಿಲ್ಲಾಧಿಕಾರಿಗಳು ಮೇ 9 ರಂದು ಚುನಾವಣೆಯ ಪೂರ್ವ ಸಿದ್ಧತೆ ಕುರಿತಂತೆ ಪತ್ರಿಕಾಗೋಷ್ಠಿ ನಡೆಸಿದ್ದರು. ಈ ವೇಳೆ ಹಾಜರಿರುವಂತೆ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಜಯಣ್ಣ ಅವರಿಗೆ ಫೋನ್ ಮೂಲಕ ಮಾಹಿತಿ ನೀಡಲಾಗಿತ್ತು. ಆಗ ಪೋನ್ ಸ್ವೀಕರಿಸಿದ ಜಯಣ್ಣ ಅವರು ತಾವು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ದಾಖಲೆಗಳನ್ನು ಸಲ್ಲಿಸಲು ಬೆಂಗಳೂರಿಗೆ ತೆರಳುತ್ತಿದ್ದೇನೆ, ಆದಕಾರಣ ಪತ್ರಿಕಾಗೋಷ್ಠಿಗೆ ಹಾಜರಾಗಲು ಸಾಧ್ಯವಿಲ್ಲ ಎಂದು ತಿಳಿಸಿದ್ದರು.
ಚುನಾವಣಾ ಪ್ರಕ್ರಿಯೆಗಳು ನಡೆಯುತ್ತಿರುವ ಸಂದರ್ಭದಲ್ಲಿ ಜಿಲ್ಲಾ ಚುನಾವಣಾಧಿಕಾರಿಯ ಅನುಮತಿಯನ್ನು ಪಡೆಯದೆ ಜಿಲ್ಲಾ ಕೇಂದ್ರವನ್ನು ತೊರೆಯುವ ಮೂಲಕ ಜಯಣ್ಣ ಅವರು ಚುನಾವಣಾ ಕರ್ತವ್ಯ ಲೋಪ ಎಸಗಿದ್ದಾರೆ ಎಂದು ಜಿಲ್ಲಾಧಿಕಾರಿ ನೋಟೀಸ್ ನೀಡಿದ್ದರು.
The district election officer, deputy commissioner (DC) Ravikumar M R has suspended Dakshina Kannada Pre-University Education department deputy director Jayanna C D over dereliction of duty during elections.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 11:59 am
HK News Staffer
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
05-09-26 01:13 pm
HK News Staffer
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಜೈಲು ವಾರ್ಡನ್ ಕತ...
04-09-26 08:16 pm
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm