ಸೋಮೇಶ್ವರ ಬೀಚಲ್ಲಿ ನೈತಿಕ ಪೊಲೀಸ್ ಗಿರಿ ; ವಿಹಾರಕ್ಕೆ ಬಂದಿದ್ದ ಮೂವರು ಅನ್ಯಮತೀಯ ವಿದ್ಯಾರ್ಥಿಗಳಿಗೆ ಹಲ್ಲೆ ! 

01-06-23 09:14 pm       Mangalore Correspondent   ಕರಾವಳಿ

ಸಮುದ್ರ ವಿಹಾರಕ್ಕೆಂದು ಬಂದಿದ್ದ ಕೇರಳ ಮೂಲದ ಮೂವರು ಹಿಂದೂ ವಿದ್ಯಾರ್ಥಿನಿಯರು ಹಾಗೂ ಮೂವರು ಅನ್ಯಮತೀಯ ವಿದ್ಯಾರ್ಥಿಗಳನ್ನ ಹಿಂಬಾಲಿಸಿದ  ತಂಡವೊಂದು ದಾಳಿ ನಡೆಸಿ ನೈತಿಕ ಪೊಲೀಸ್ ಗಿರಿ ನಡೆಸಿರುವ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ನಡೆದಿದೆ. 

ಉಳ್ಳಾಲ, ಜೂ.1:  ಸಮುದ್ರ ವಿಹಾರಕ್ಕೆಂದು ಬಂದಿದ್ದ ಕೇರಳ ಮೂಲದ ಮೂವರು ಹಿಂದೂ ವಿದ್ಯಾರ್ಥಿನಿಯರು ಹಾಗೂ ಮೂವರು ಅನ್ಯಮತೀಯ ವಿದ್ಯಾರ್ಥಿಗಳನ್ನ ಹಿಂಬಾಲಿಸಿದ  ತಂಡವೊಂದು ದಾಳಿ ನಡೆಸಿ ನೈತಿಕ ಪೊಲೀಸ್ ಗಿರಿ ನಡೆಸಿರುವ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ನಡೆದಿದೆ. 

ಖಾಸಗಿ ವಿದ್ಯಾಸಂಸ್ಥೆಗೆ ಸೇರಿದ ಕೇರಳ ಮೂಲದ ಆರು ಮಂದಿ ವಿದ್ಯಾರ್ಥಿಗಳು ವಿಹಾರಕ್ಕೆಂದು‌ ಸೋಮೇಶ್ವರ ಕಡಲ ತೀರಕ್ಕೆ ಬಂದಿದ್ದರು. ಮೂವರು ವಿದ್ಯಾರ್ಥಿಗಳು ಮುಸ್ಲಿಂ ಸಮುದಾಯಕ್ಕೆ ಸೇರಿದವರೆಂಬುದನ್ನು ಗಮನಿಸಿ ತಂಡವೊಂದು ಇವರನ್ನು ಹಿಂಬಾಲಿಸಿತ್ತು. ವಿದ್ಯಾರ್ಥಿಗಳು ಸಮುದ್ರ ತೀರದಲ್ಲಿ ವಿಹಾರ ನಡೆಸುತ್ತಿರುವ ಸಂದರ್ಭ ತಂಡ ದಾಳಿ ನಡೆಸಿದೆ. ಘಟನೆಯಲ್ಲಿ ಮೂವರು ಅನ್ಯಮತೀಯ ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಜೊತೆಗಿದ್ದ ಮೂವರು ವಿದ್ಯಾರ್ಥಿನಿಯರು ವಾಪಸ್ ಊರಿಗೆ ತೆರಳಿದ್ದಾರೆಂದು ಪೊಲೀಸರಲ್ಲಿ ಸ್ಥಳೀಯರು ತಿಳಿಸಿದ್ದಾರೆ. ಉಳ್ಳಾಲ ಪೊಲೀಸರು ಸೋಮೇಶ್ವರ ಸಮುದ್ರ ತೀರದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.

Mangalore Moral policing in Someshwar Beach, three Kerala students of different faith assaulted.