ಬ್ರೇಕಿಂಗ್ ನ್ಯೂಸ್
04-06-23 02:35 pm Mangalore Correspondent ಕರಾವಳಿ
ಮಂಗಳೂರು, ಜೂನ್ 4: ನೈತಿಕ ಪೊಲೀಸ್ ಗಿರಿ ಮಾದರಿಯ ಅಪರಾಧ ಕೃತ್ಯಗಳು ಮರುಕಳಿಸದಂತೆ ನೋಡಿಕೊಳ್ಳಲು ಕಳೆದ ಐದು ವರ್ಷಗಳಲ್ಲಿ ಇಂತಹ ಕೃತ್ಯಗಳಲ್ಲಿ ತೊಡಗಿಸಿಕೊಂಡ ಆರೋಪಿಗಳನ್ನು ಠಾಣೆಗೆ ಕರೆಸಿ ಮುಚ್ಚಳಿಕೆ ಬರೆಸಲಾಗುವುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ತಿಳಿಸಿದ್ದಾರೆ.
ಸೋಮೇಶ್ವರದ ನೈತಿಕ ಪೊಲೀಸ್‌ಗಿರಿ ಘಟನೆ ಹಿನ್ನೆಲೆಯಲ್ಲಿ ಆಯುಕ್ತರನ್ನು ಪ್ರಶ್ನಿಸಿದಾಗ, ಮುಂಜಾಗ್ರತಾ ಕ್ರಮವಾಗಿ ಸಿಆರ್‌ಪಿಸಿ ಸೆಕ್ಷನ್ 107 ಮತ್ತು 110ರ ಅಡಿಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ಜಾಮೀನು ಮುಚ್ಚಳಿಕೆ ಪಡೆದುಕೊಳ್ಳಲಾಗುವುದು. ಇದುವರೆಗೆ ಮಂಗಳೂರು ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಕಾನೂನುಬಾಹಿರ ಕೃತ್ಯಗಳಲ್ಲಿ ಪಾಲ್ಗೊಂಡಿದ್ದ 1,200 ಮಂದಿಯಿಂದ ಜಾಮೀನು ಮುಚ್ಚಳಿಕೆ ಪಡೆದುಕೊಳ್ಳಲಾಗಿದೆ. ಮುಚ್ಚಳಿಕೆ ಅವಧಿ ಒಂದು ವರ್ಷ ಅವಧಿ ಇರುತ್ತದೆ. ಅಗತ್ಯ ಬಿದ್ದರೆ ಮತ್ತೆ ಅದನ್ನು ವಿಸ್ತರಿಸಲಾಗುವುದು. ಮುಚ್ಚಳಿಕೆ ನಿಯಮ ಉಲ್ಲಂಘಿಸಿದರೆ ಜಾಮೀನು ಮೊತ್ತವನ್ನು ಮುಟ್ಟುಗೋಲು ಹಾಕಿ ಮತ್ತೊಂದು ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗುವುದು ಎಂದಿದ್ದಾರೆ.
ಕಳೆದ ವರ್ಷ ಜಾಮೀನು ಮುಚ್ಚಳಿಕೆ ಷರತ್ತುಗಳನ್ನು ಉಲ್ಲಂಘಿಸಿದ 9 ಮಂದಿ ನೀಡಿದ್ದ 1.90 ಲಕ್ಷ ರೂ. ಬಾಂಡ್ ಮೊತ್ತವನ್ನು ವಶಕ್ಕೆ ಪಡೆಯಲಾಗಿದೆ. ಒಂದು ವರ್ಷದಲ್ಲಿ ಕಮಿಷನರೇಟ್ ವ್ಯಾಪ್ತಿಯ 62 ಮಂದಿ ರೌಡಿಶೀಟರ್‌ಗಳನ್ನು ಗಡೀಪಾರು ಮಾಡಲಾಗಿದ್ದು ಅವರ ಮೇಲೆ ನಿರಂತರ ನಿಗಾ ಇಡಲಾಗಿದೆ. ರಾಜ್ಯದ ಇತರ ಕಡೆಗಳಿಗೆ ಹೋಲಿಸಿದರೆ ಅತೀ ಹೆಚ್ಚು ಮಂದಿ ರೌಡಿಗಳನ್ನು ಮಂಗಳೂರಿನಿಂದ ಗಡೀಪಾರು ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಬೀಚ್, ಮಾಲ್ ಗಳಲ್ಲಿ ಗಸ್ತು ಹೆಚ್ಚಳ
ಸೋಮೇಶ್ವರ ಬೀಚ್‌ನಲ್ಲಿ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಬೀಚ್, ಮಾಲ್ ಸೇರಿದಂತೆ ಜನರು ಹೆಚ್ಚು ಸೇರುವ ಪ್ರದೇಶಗಳಲ್ಲಿ ಗಸ್ತು ಹೆಚ್ಚಿಸಲಾಗಿದೆ. ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿದ್ದು ಕಂಡುಬಂದರೆ ಕ್ರಮ ಜರುಗಿಸಲಾಗುವುದು ಎಂದು ಆಯುಕ್ತರು ತಿಳಿಸಿದ್ದಾರೆ.
ಇದೇ ವೇಳೆ, ಸೋಮೇಶ್ವರದ ನೈತಿಕ ಪೊಲೀಸ್‌ಗಿರಿ ಪ್ರಕರಣದಲ್ಲಿ ಬಂಧಿಸಿರುವ 7 ಮಂದಿ ಆರೋಪಿಗಳ ಪೈಕಿ 6 ಮಂದಿಯನ್ನು ನ್ಯಾಯಾಲಯ ಜೂ.14ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಓರ್ವ ಅಪ್ರಾಪ್ತನನ್ನು ಬಾಲ ನ್ಯಾಯ ಮಂಡಳಿಗೆ ಹಾಜರುಪಡಿಸೊದ್ದು ಮಂಡಳಿಯ ಆದೇಶದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
City police commissioner Kuldeep Kumar Jain informed that people who are involved in moral policing acts in the past are identified and the process of getting bail undertakings signed by them not to involve in such acts in future is in progress.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:33 pm
HK News Desk
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
09-05-25 01:32 pm
Mangalore Correspondent
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm