ಬ್ರೇಕಿಂಗ್ ನ್ಯೂಸ್
04-06-23 07:21 pm Mangalore Correspondent ಕರಾವಳಿ
ಉಳ್ಳಾಲ, ಜೂ.4: ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ ಅವರ ಸಹೋದರ ಶರತ್ ಕಾಜವ(55) ಅವರಿಂದು ಹೃದಯಾಘಾತದಿಂದ ಸಾವನ್ನಪ್ಪಿದ್ದು ಅವರ ಶವಯಾತ್ರೆಯಲ್ಲಿ ಭಾಗವಹಿಸಿದ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಆಪ್ತನ ಶವದ ಚಟ್ಟಕ್ಕೆ ಹೆಗಲು ಕೊಟ್ಟು ಸರಳತೆ ಮೆರೆದಿದ್ದಾರೆ.
ಮುಡಿಪು ಮಿತ್ತಕೋಡಿ ನಿವಾಸಿ ಶರತ್ ಕಾಜವ ಇಂದು ನಸುಕಿನ ಜಾವ ಹೃದಯಾಘಾತಕ್ಕೊಳಗಾಗಿ ಅಕಾಲಿಕವಾಗಿ ಸಾವನ್ನಪ್ಪಿದ್ದರು. ವಿಷಯ ತಿಳಿದು ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಅವರು ಪೂರ್ವ ನಿಗದಿತ ಕಾರ್ಯಕ್ರಮಗಳನ್ನು ರದ್ದುಪಡಿಸಿ ತಕ್ಷಣವೇ ಮಿತ್ತಕೋಡಿಯ ಶರತ್ ಕಾಜವ ಅವರ ನಿವಾಸಕ್ಕೆ ದೌಡಾಯಿಸಿದ್ದಾರೆ. ಕುಟುಂಬ, ಸಂಬಂಧಿಕರಿಗೆ ಧೈರ್ಯ ತುಂಬಿದ ಅವರು ಅಂತಿಮ ವಿಧಿ ವಿದಾನದಲ್ಲಿ ಪಾಲ್ಗೊಂಡದ್ದಲ್ಲದೆ ಶವದ ಚಟ್ಟಕ್ಕೂ ಹೆಗಲು ಕೊಟ್ಟು ಅಂತಿಮ ಯಾತ್ರೆಯಲ್ಲಿ ಸಾಗಿದ್ದಾರೆ.
ಈ ಮೂಲಕ ಕಾಂಗ್ರೆಸ್ ಹಿರಿಯ ಮುತ್ಸದ್ಧಿ ಜನಾರ್ದನ ಪೂಜಾರಿಯವರು ಹಾಕಿಕೊಟ್ಟ ಸಂಪ್ರದಾಯವನ್ನು ಮುಂದುವರಿಸಿದ ಶಾಸಕರು ಎಂಬ ಕೀರ್ತಿಗೆ ಯು.ಟಿ ಖಾದರ್ ಭಾಜನರಾಗಿದ್ದಾರೆ. ನರಿಂಗಾನ ಕಂಬಳ ಉತ್ಸವ ಸಮಿತಿಯ ಕಾರ್ಯಾಧ್ಯಕ್ಷ ಪ್ರಶಾಂತ್ ಕಾಜವರ ಸಹೋದರ ಮೃತ ಶರತ್ ಕಾಜವ ಅವರು ಪ್ರಗತಿಪರ ಕೃಷಿಕ ವೆಂಕಪ್ಪ ಕಾಜವರ ಪುತ್ರ. ಕಂಬಳ ಸಮಿತಿಯ ಸದಸ್ಯರೂ ಆಗಿದ್ದ ಶರತ್ ಕಾಜವ ಅವರು ನರಿಂಗಾನ ಕಂಬಳದ ಯಶಸ್ಸಿಗಾಗಿ ವಾರಗಳ ಕಾಲ ದುಡಿದಿದ್ದರು. ತಾಯಿಯ ಅನಾರೋಗ್ಯ ಇದ್ದಾಗಲೂ ಕಂಬಳದ ಕರೆಯಲ್ಲಿ ಆಗಬೇಕಾದ ವ್ಯವಸ್ಥೆ ಬಗ್ಗೆ ತುಂಬ ಕಾಳಜಿ ವಹಿಸಿದ್ದರು. ಪ್ರಗತಿಪರ ಕೃಷಿಕರಾಗಿದ್ದ ಅವರು ಪತ್ನಿ, ಪುತ್ರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
Mudipu block congress president brother Sharath dies of heart attack, Speaker Khader helps to carry body for last rites in Mangalore.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 07:31 pm
HK News Desk
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm