ಬ್ರೇಕಿಂಗ್ ನ್ಯೂಸ್
06-06-23 03:54 pm Mangalore Correspondent ಕರಾವಳಿ
ಮಂಗಳೂರು, ಜೂನ್ 6: ನೈತಿಕ ಪೊಲೀಸ್ ಗಿರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚಿಸಿದ್ದೇನೆ. ಮಂಗಳೂರಿನಲ್ಲಿ ಮೊದಲ ಬಾರಿಗೆ ಇದಕ್ಕಾಗಿ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ ಮಾಡುತ್ತಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಮಂಗಳೂರು ಕಮಿಷನರ್ ಕಚೇರಿಯಲ್ಲಿ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಮಾಧ್ಯಮ ಗೋಷ್ಠಿ ನಡೆಸಿ, ಈ ವಿಚಾರ ಹೇಳಿದ್ದಾರೆ. ಕೋಮು ಸಾಮರಸ್ಯ ಸ್ಥಾಪನೆ ಮಾಡುವುದಕ್ಕಾಗಿ ರಾಜ್ಯದಲ್ಲಿ ಮೊದಲ ಬಾರಿಗೆ ಈ ರೀತಿಯ ಹೊಸ ಟೀಮ್ ಮಾಡುತ್ತಿದ್ದೇವೆ. ಈ ವಿಂಗ್ ನಲ್ಲಿ ಸಮರ್ಥವಾದ ಅಧಿಕಾರಿಗಳು ಇರಲಿದ್ದಾರೆ. ಶೀಘ್ರದಲ್ಲೇ ಮಂಗಳೂರು ಕಮಿಷನರ್ ಈ ತಂಡವನ್ನು ರಚಿಸಲಿದ್ದಾರೆ ಎಂದರು.

ಕರಾವಳಿ ಭಾಗದಲ್ಲಿ ಒಳ್ಳೆಯ ಜನ ಇದ್ದಾರೆ, ಇಲ್ಲಿನವರು ಶ್ರಮ ಜೀವಿಗಳು ಎಂದು ನಾವು ಅಂದ್ಕೊಂಡಿದ್ದೇವೆ. ಇಡೀ ದೇಶವೇ ಈ ಮಾತನ್ನು ನಂಬುತ್ತದೆ. ಆದರೆ ಇದರ ಜೊತೆಗೆ, ಈ ಭಾಗದಲ್ಲಿ ಶಾಂತಿ ಇಲ್ಲ, ಕೋಮು ಸಾಮರಸ್ಯ ಇಲ್ಲ ಎಂಬ ಮಾತೂ ಕೇಳಿಬರುತ್ತಿದೆ. ಪ್ರಣಾಳಿಕೆ ಸಮಿತಿ ಅಧ್ಯಕ್ಷನಾಗಿದ್ದ ಸಂಧರ್ಭದಲ್ಲೂ ಇಪ್ಪತ್ತು ಸಂಸ್ಥೆಗಳ ಮುಖ್ಯಸ್ಥರನ್ನು ಭೇಟಿಯಾಗಿದ್ದೆ. ಆಗ ಇಲ್ಲಿ ಶಾಂತಿಯ ವಾತಾವರಣ ನಿರ್ಮಿಸಿ ಎಂಬ ಕೇಳಿಕೊಂಡಿದ್ದರು. ಹಿಂದೆ ಕೆಪಿಸಿಸಿ ಅಧ್ಯಕ್ಷನಾಗಿ ಕೋಮು ಸೌಹಾರ್ದ ಸ್ಥಾಪನೆಗಾಗಿ ಉಳ್ಳಾಲದಿಂದ ಉಡುಪಿಗೆ ಪಾದಯಾತ್ರೆಯನ್ನೂ ಮಾಡಿದ್ದೆ.
ಕರಾವಳಿಯಲ್ಲಿ ಇಂದು ಭಯದ ವಾತಾವರಣ ಇದೆ ಅಂತಾ ಜನ ಮಾತನಾಡಿಕೊಳ್ಳುತ್ತಿದ್ದಾರೆ. ಇಂತಹ ಪರಿಸ್ಥಿತಿಯನ್ನು ನಾವು ತಡೆಯಬೇಕಾಗಿದೆ. ಸಮಾಜದಲ್ಲಿ ಕೋಮು ಸಾಮರಸ್ಯ ತರಲು ಪೊಲೀಸರಿಗೆ ಕಠಿಣ ಸೂಚನೆಗಳನ್ನು ನೀಡಿದ್ದೇನೆ. ಇಲ್ಲಿ ನೈತಿಕ ಪೊಲೀಸ್ ಕೆಲಸ ಮಾಡುವವರು ಯಾರು? ಎಲ್ಲವೂ ಇದ್ದು ನಾವು ತಡೆಯದಿದ್ದರೆ ಇಲಾಖೆ, ರಾಜ್ಯಕ್ಕೆ ಕೆಟ್ಟ ಹೆಸರು ಬರುತ್ತದೆ. ಅದಕ್ಕಾಗಿ ಇಲ್ಲಿ ಹೊಸತಾಗಿ ಏಂಟಿ ಕಮ್ಯುನಲ್ ವಿಂಗ್ ತರುತ್ತಿದ್ದೇವೆ ಎಂದರು.
ಕರಾವಳಿಯಲ್ಲಿ ಡ್ರಗ್ಸ್ ಚಟುವಟಿಕೆ ಹೆಚ್ಚುತ್ತಿರುವುದು ಗಮನಕ್ಕೆ ಬಂದಿದೆ. ಅದಕ್ಕಾಗಿ ಡ್ರಗ್ಸ್ ಮಾರಾಟ, ಪೆಡ್ಲಿಂಗ್ ಮಾಡೋದನ್ನು ಪತ್ತೆಹಚ್ಚಲು ಪೊಲೀಸರು ವಿಶೇಷ ಡ್ರೈವ್ ಮಾಡಬೇಕಿದೆ. ಆಗಸ್ಟ್ 15ರ ಒಳಗೆ ಈ ಡ್ರೈವ್ ಆಗಬೇಕಿದ್ದು ಡ್ರಗ್ಸ್ ಯಾರು ಮಾರ್ತಿದ್ದಾರೆ, ಹಿಂದೆ ಯಾರಿದ್ದಾರೆ ಪತ್ತೆ ಮಾಡಬೇಕು. ಕಾಲೇಜು ವಿದ್ಯಾರ್ಥಿಗಳು ಇಂತಹ ಕೃತ್ಯಗಳಲ್ಲಿ ತೊಡಗಿಸದೆ, ನೈತಿಕತೆ ಬೆಳೆಸುಕೊಳ್ಳಬೇಕು ಎಂದು ಹೇಳಿದ ಸಚಿವರು, ಯಾರೇ ಆಗಲೀ, ಕಾನೂನು ಕೈಗೆ ತೆಗೆದುಕೊಂಡಲ್ಲಿ ಕಠಿಣ ಕ್ರಮ ತಗೋತೇವೆ. ಅದರಲ್ಲಿ ಮುಲಾಜಿಲ್ಲ ಎಂದರು.
ಈ ಭಾಗದಲ್ಲಿ ಹಿಂದೆ ಆರೇಳು ಕೊಲೆಗಳಾಗಿದ್ದು ಪರಿಹಾರ ನೀಡಬೇಕೆಂಬ ಒತ್ತಾಯ ಇದೆ. ಸರ್ಕಾರಕ್ಕೆ ಆ ಬಗ್ಗೆ ಪ್ರಸ್ತಾವನೆ ಹೋಗಿದ್ದು ಶೀಘ್ರದಲ್ಲೆ ಆದೇಶ ಬರಲಿದೆ. ಮಂಗಳೂರು ಅಂದರೆ ಜನ ಕಣ್ಣೆತ್ತಿ ನೋಡುವ ವಾತಾವರಣ ನಿರ್ಮಾಣ ಆಗಬೇಕಿದೆ. ವಿದ್ಯಾರ್ಥಿ- ವಿದ್ಯಾರ್ಥಿನಿಯರು ಅಕ್ರಮ ಚಟುವಟಿಕೆಯಲ್ಲಿ ಪಾಲ್ಗೊಳ್ಳದಂತೆ ಮನವಿ ಮಾಡುತ್ತೇನೆ ಎಂದು ಹೇಳಿದರು.
Mangalore Moral Policing, Home Minister Parameshwara who hele a press meet at Mangalore Police Commissioner's office warned of strict action against Moral Policing and also Anti Communial Wing to be formed to stop Moral Policing he added. ADGP Alok Kumar, Kuldeep Kumar Jain were present at the press meet.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm