ಬ್ರೇಕಿಂಗ್ ನ್ಯೂಸ್
08-06-23 10:48 am Mangalore Correspondent ಕರಾವಳಿ
ಉಳ್ಳಾಲ, ಜೂ.8: ನೂತನ ಮನೆ ಖರೀದಿಸಿದ ಯುವತಿಯೋರ್ವಳು ಅದ್ಧೂರಿ ಗೃಹ ಪ್ರವೇಶಗೈದ ಐದೇ ದಿವಸದಲ್ಲಿ ಅದೇ ಮನೆ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ.
ಮೂಲತಃ ಫರಂಗಿಪೇಟೆಯ ಸದ್ಯ ಕುಂಪಲ ಚಿತ್ರಾಂಜಲಿ ನಗರದ ನಿವಾಸಿಯಾಗಿದ್ದ ಅಶ್ವಿನಿ ಬಂಗೇರ(25) ಆತ್ಮಹತ್ಯೆಗೈದ ಯುವತಿ. ನಿನ್ನೆ ರಾತ್ರಿ ಅಶ್ವಿನಿ ತನ್ನ ಸ್ನೇಹಿತೆ ಜೊತೆ ಚಾಟ್ ಮಾಡಿದ್ದಳು ಎನ್ನಲಾಗಿದ್ದು ಸ್ನೇಹಿತೆ ಬೆಳಗ್ಗೆ ಬಂದು ಕೋಣೆಯ ಬಾಗಿಲು ಒಡೆದು ನೋಡಿದಾಗ ಅಶ್ವಿನಿ ಫ್ಯಾನಿಗೆ ಸೀರೆಯಿಂದ ನೇಣು ಬಿಗಿದು ಆತ್ಮ ಹತ್ಯೆಗೈದಿದ್ದು ಬೆಳಕಿಗೆ ಬಂದಿದೆ. ಅಶ್ವಿನಿ ಬರೆದ 24 ಪುಟಗಳ ಡೆತ್ ನೋಟ್ ಪೊಲೀಸರಿಗೆ ದೊರೆತಿದೆ.
ಡೆತ್ ನೋಟಲ್ಲಿ ತಾನು ಮನೆ ಖರೀದಿಸಿ ಮೋಸ ಹೋಗಿದ್ದು ಬ್ಯಾಂಕ್ ಅಧಿಕಾರಿಗಳು ಬಂದು ಪೀಡಿಸುತ್ತಿರುವ ಬಗ್ಗೆ ಉಲ್ಲೇಖಿಸಲಾಗಿದೆಯಂತೆ. ಅಶ್ವಿನಿ ಸಾಮಾನ್ಯ ಕುಟುಂಬದವರಾಗಿದ್ದು ವಿದೇಶದಲ್ಲಿ ಉದ್ಯೋಗದಲ್ಲಿದ್ದು ಒಂದೂವರೆ ತಿಂಗಳ ಹಿಂದೆ ಊರಿಗೆ ಬಂದಿದ್ದಳು. ಕುಂಪಲದ ಚಿತ್ರಾಂಜಲಿ ನಗರದಲ್ಲಿ ಸಂಗೀತಾ ಎಂಬವರಿಂದ ಅಶ್ವಿನಿಯೇ ಮನೆಯೊಂದನ್ನ ಖರೀದಿಸಿದ್ದು ಕಳೆದ ಜೂ.3 ರಂದು ಗೃಹ ಪ್ರವೇಶ ಮಾಡಿ ತಾಯಿ ದೇವಕಿ, ದೊಡ್ಡಮ್ಮನ ಇಬ್ಬರು ಗಂಡು ಮಕ್ಕಳೊಂದಿಗೆ ನೆಲೆಸಿದ್ದರೆನ್ನಲಾಗಿದೆ. ನಿನ್ನೆ ರಾತ್ರಿ ಇವರೆಲ್ಲ ಇದ್ದರೂ, ತನ್ನ ಕೋಣೆಯಲ್ಲಿ ಅಶ್ವಿನಿ ಸಾವಿಗೆ ಶರಣಾಗಿದ್ದು ಮನೆಯವರಿಗೇ ತಿಳಿದಿರಲಿಲ್ಲ.
ಅಶ್ವಿನಿ ಗೃಹ ಪ್ರವೇಶದಂದು ರಾತ್ರಿ ಸ್ನೇಹಿತೆಯರ ಜೊತೆ ಪಾರ್ಟಿ ಮಾಡಿ ಕುಣಿದು ಸಂಭ್ರಮಿಸಿದ್ದಳಂತೆ. ನಂತರವೂ ಸ್ನೇಹಿತೆಯರು ಮನೆಗೆ ಬರುತ್ತಿದ್ದು ಟೆರೇಸ್ ಮೇಲೆ ಪಾರ್ಟಿ ಮಾಡುತ್ತಿದ್ದರಂತೆ. ಡೆತ್ ನೋಟಲ್ಲಿ ಅಶ್ವಿನಿ ತನ್ನ ಪ್ರಿಯಕರನ ಹೆಸರು ಉಲ್ಲೇಖಿಸಿ ಐ ಲವ್ ಯೂ ಅಂತ ಬರೆದಿದ್ದು ತಾನು ಬಳಸುತ್ತಿದ್ದ ಐ ಫೋನನ್ನ ಆತನಿಗೆ ನೀಡಬೇಕೆಂದು ಹೇಳಿದ್ದಾಳೆ. ಅಶ್ವಿನಿಯ ತಾಯಿ ಮಗಳನ್ನ ನೆನೆದು ಮನೆಯೊಳಗಡೆ ಬಿದ್ದು ಹೊರಳಾಡುತ್ತಿರುವ ದೃಶ್ಯ ಮನಕಲಕುವಂತಿತ್ತು.
ಬ್ಯಾಂಕ್ ಸಾಲದಿಂದ ಅಶ್ವಿನಿ ಖಿನ್ನತೆಗೊಳಗಾಗಿ ಆತ್ಮ ಹತ್ಯೆಗೈದಿರುವುದಾಗಿ ಪೊಲೀಸರು ಶಂಕಿಸಿದ್ದಾರೆ. ಮೃತದೇಹವನ್ನ ಉಳ್ಳಾಲ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
25 year old girl commits suicide after fifth day of housewarming at Kumpala in Mangalore. The house was under bank loan fearing of financial issues she committed suicide writing letter to her boyfriend.
26-09-23 08:57 pm
HK News Desk
Bengaluru Bandh, Cauvery water: ಕಾವೇರಿ ಹೋರಾಟ...
26-09-23 05:41 pm
Tumkur Car Accident: ತುಮಕೂರು ; ರಥೋತ್ಸವ ಕಾರ್ಯಕ...
26-09-23 12:37 pm
Hd Kumaraswamy, Bengaluru Bandh Cauvery: ಇದೇನ...
26-09-23 12:28 pm
Bengaluru, City police commissioner, Cauvery...
25-09-23 07:09 pm
26-09-23 07:44 pm
HK News Desk
Goa Deltin Royale Casino GST Notice, 17 thous...
26-09-23 06:32 pm
Kasaragod accident, five dead: ಬದಿಯಡ್ಕ ಬಳಿ ಭೀ...
25-09-23 11:06 pm
Delhi,AIADMK-BJP alliance: ತಮಿಳುನಾಡು ಬಿಜೆಪಿಗೆ...
25-09-23 09:32 pm
Jog falls drowning: ಜೋಗ್ ಫಾಲ್ಸ್ ಸಮೀಪ ದುರಂತ ;...
24-09-23 09:05 pm
26-09-23 02:24 pm
Mangalore Correspondent
Subramanya, illegal cattle Cow trafficking, M...
26-09-23 10:52 am
Mangalore Dinesh Gundu Rao, Janatha Darshana:...
25-09-23 09:38 pm
Mangalore Eid Milad 2023, Banner Fish Bunder:...
25-09-23 06:17 pm
Ullal Suicide, Train Mangalore; ರೈಲಿನಡಿಗೆ ಹಾರ...
25-09-23 05:22 pm
26-09-23 07:20 pm
HK News Desk
Udupi, OTP Fraud, Kapu: ಬ್ಯಾಂಕ್ ಅಧಿಕಾರಿ ಎಂದು...
24-09-23 10:27 pm
Mangalore Rowdy Sheeter Tallat arrested by CC...
20-09-23 11:43 am
ಸುಳ್ಯಕ್ಕೆ ಬಂದಿದ್ದ ಕೊಡಗಿನ ಯುವಕನಿಗೆ ಹಲ್ಲೆಗೈದು ದ...
19-09-23 09:31 pm
Bantwal Robbery: ಬಂಟ್ವಾಳ ; ಹಗಲು ವೇಳೆ ಮನೆಗೆ ನು...
18-09-23 10:59 pm