ಬ್ರೇಕಿಂಗ್ ನ್ಯೂಸ್
09-06-23 05:22 pm Mangalore Correspondent ಕರಾವಳಿ
ಮಂಗಳೂರು, ಜೂನ್ 9: ವಿಶ್ವ ಸಾಗರ ದಿನದಂಗವಾಗಿ ಸುಯೆಝ್ ಸಂಸ್ಥೆ, ಆಂಜನೇಯ ಗುಡಿ ಮತ್ತು ವ್ಯಾಯಾಮ ಶಾಲೆಯ ಜಂಟಿ ಆಶ್ರಯದಲ್ಲಿ ಬೀಚ್ ಸ್ವಚ್ಛತಾ ಅಭಿಯಾನ ಸುರತ್ಕಲ್ ನ ಸಸಿಹಿತ್ಲು ಬೀಚ್ ಕಿನಾರೆಯಲ್ಲಿ ಹಮ್ಮಿಕೊಳ್ಳಲಾಯಿತು.
ಸಿಕ್ಕ ಸಿಕ್ಕ ಕಸಗಳನ್ನು ಸಮುದ್ರಕ್ಕೆ ಎಸೆಯುತ್ತಿರುವುದರಿಂದ ಜಲಚರಗಳ ಅವನತಿಗೆ ಮನುಷ್ಯರೇ ಕಾರಣವಾಗುತ್ತಿರುವುದಲ್ಲದೆ ಹವಾಮಾನ ವೈಪರೀತ್ಯಕ್ಕೂ ಮಾರಕ ಕೊಡುಗೆ ನೀಡುತ್ತಿದ್ದೇವೆ. ಈ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು.
ಅತ್ಯಂತ ಅಮೂಲ್ಯವಾಗಿರುವ ಸಾಗರ ಸಂಪತ್ತನ್ನು ಸಂರಕ್ಷಿಸುವುದು ನಮ್ಮ ಮುಖ್ಯ ಕರ್ತವ್ಯ. ಈ ನಿಟ್ಟಿನಲ್ಲಿಯೇ ಪ್ರತಿಯೊಬ್ಬರಿಗೂ ಈ ಬಗ್ಗೆ ಜಾಗೃತಿ ಮೂಡಿಸುವ ಸದುದ್ದೇಶದಿಂದ ಜೂನ್ 8 ಅನ್ನು ವಿಶ್ವ ಸಾಗರ ದಿನವನ್ನಾಗಿ ಆಚರಿಸಲಾಗುತ್ತಿದೆ.
ಪರಿಸರ ಸಮತೋಲನ, ಜೀವವೈವಿದ್ಯತೆ, ಆಹಾರ ಭದ್ರತೆ, ಹವಾಮಾನ ಬದಲಾವಣೆ, ಸಮುದ್ರ ಸಂಪನ್ಮೂಲಗಳ ವಿವೇಚನಾರಹಿತ ಬಳಕೆ ಇತ್ಯಾದಿಗಳ ವಿಷಯಗಳನ್ನು ಎತ್ತಿ ತೋರಿಸುವುದು ಮತ್ತು ಸಾಗರಗಳು ಒಡ್ಡುವ ಸವಾಲುಗಳ ಬಗ್ಗೆ ಜಗತ್ತಿನಲ್ಲಿ ಜಾಗೃತಿ ಮೂಡಿಸುವುದು ಈ ದಿನವನ್ನು ಆಚರಿಸುವ ಮುಖ್ಯ ಉದ್ದೇಶವಾಗಿದೆ.
ವಿಶ್ವ ಸಾಗರ ದಿನವನ್ನು ಆಚರಿಸುವ ಪರಿಕಲ್ಪನೆಯನ್ನು ಮೊದಲು 1992 ರಲ್ಲಿ ಬ್ರೆಜಿಲ್ನ ರಿಯೊ ಡಿ ಜನೈರೊದಲ್ಲಿ ನಡೆದ ವಿಶ್ವಸಂಸ್ಥೆಯ ಪರಿಸರ ಮತ್ತು ಅಭಿವೃದ್ಧಿ ಸಮ್ಮೇಳನದಲ್ಲಿ ಪ್ರಸ್ತಾಪಿಸಲಾಯಿತು. ಇದು ಪ್ರಪಂಚದಲ್ಲಿ ವಿಶಾಲವಾಗಿ ಹರಡಿಕೊಂಡಿರುವ ಸಾಗರವನ್ನು ನೋಡಲು ಸಂಭ್ರಮಿಸುವ ಮತ್ತು ನಮ್ಮ ಜೀವನದಲ್ಲಿ ಅದು ವಹಿಸುವ ನಿರ್ಣಾಯಕ ಪಾತ್ರವನ್ನು ಒತ್ತಿಹೇಳುವ ಗುರಿಯನ್ನು ಹೊಂದಿದೆ.
Mangalore Suez Company holds cleaning campaign at Sasihithlu beach in Surathkal on ocean day
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm