ಬ್ರೇಕಿಂಗ್ ನ್ಯೂಸ್
10-06-23 03:47 pm Mangalore Correspondent ಕರಾವಳಿ
ಮಂಗಳೂರು, ಜೂನ್ 10: ಎಂಜಿನಿಯರಿಂಗ್ ಪದವಿ ಮುಗಿಸಿ ಕೈ ತುಂಬಾ ವೇತನವಿದ್ದ ಕೆಲಸ ತ್ಯಜಿಸಿ, ದೇಶದ ಭವಿಷ್ಯಕ್ಕಾಗಿ ಯುವ ಸಮೂಹದಲ್ಲಿ ರಾಷ್ಟ್ರೀಯತೆ, ದೇಶ ಭಕ್ತಿ ಉದ್ದೀಪನಗೊಳಿಸುತ್ತಿರುವ ಚಕ್ರವರ್ತಿ ಸೂಲಿಬೆಲೆಯ ವಿದ್ಯಾರ್ಹತೆಯನ್ನು ಪ್ರಥಮ ಪಿಯುಸಿ ಫೇಲ್ ಆದ ಸಚಿವ ಪ್ರಿಯಾಂಕ ಖರ್ಗೆ ಪ್ರಶ್ನಿಸುತ್ತಿರುವುದು ಹಾಸ್ಯಾಸ್ಪದ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ ವ್ಯಂಗ್ಯವಾಡಿದ್ದಾರೆ.
ಸೂಲಿಬೆಲೆ ಯಾವ ಪಿಎಚ್ಡಿ ಪದವಿ ಗಳಿಸಿದ್ದಾನೆ, ಬಾಡಿಗೆ ಭಾಷಣಗಾರರನ್ನು ಲೇಖಕ ಮಾಡಿ, ಅವನ ಪಾಠ ಮಕ್ಕಳು ಯಾಕೆ ಓದಬೇಕು ಎಂದು ಏಕವಚನದಲ್ಲಿ ಪ್ರಿಯಾಂಕ ಖರ್ಗೆ ಮಾತನಾಡಿರುವ ಬಗ್ಗೆ ಡಾ.ಭರತ್ ಶೆಟ್ಟಿ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಮೊದಲು ನಿಮ್ಮ ವಿದ್ಯಾರ್ಹತೆ ನೋಡಿಕೊಂಡು ಸೂಲಿಬೆಲೆ ಬಗ್ಗೆ ಮಾತನಾಡಿ, ನಿಮಗೆ ಪ್ರಶ್ನಿಸುವ ನೈತಿಕ ಹಕ್ಕು ಇಲ್ಲ ಎಂದು ಖರ್ಗೆಗೆ ತಿರುಗೇಟು ನೀಡಿದ್ದಾರೆ.
ದೇಶದಲ್ಲಿ ರಾಷ್ಟ್ರೀಯತೆಯನ್ನು , ದೇಶ ಪ್ರೇಮವನ್ನು ಜಾಗೃತಿ ಮಾಡುವುದೇ ಅಪರಾಧವೆಂದು ಪ್ರಿಯಾಂಕ ಖರ್ಗೆ ತಿಳಿದಂತಿದೆ. ದೇಶ ಭಕ್ತಿ, ನಮ್ಮ ರಾಷ್ಟ್ರ ಎಂಬ ಭಾವನೆಯನ್ನು ನಮ್ಮ ಭವಿಷ್ಯದ ಮಕ್ಕಳಿಗೆ ಯಾವತ್ತೂ ತಿಳಿಸುವ ಗೋಜಿಗೆ ಹೋಗದ ಕಾಂಗ್ರೆಸ್ ಪಕ್ಷವು, ದೇಶದೊಳಗೆ ಭಯೋತ್ಪಾದಕನಿಗೆ ಏನಾದಾರೂ ಆದರೆ ಕಣ್ಣೀರಿಡುವ ಪಕ್ಷವಾಗಿದೆ.
ರಾಷ್ಟ್ರೀಯತೆಯ ಭಾವನೆಯಿಲ್ಲದೆ ಸೊರಗಿರುವ ಮಕ್ಕಳು ಇಂದು ರೈಲು ಓಡಾಡುವ ಹಳಿಗಳ ಮೇಲೆ ಕಲ್ಲಿಟ್ಟು, ಕಲ್ಲು ತೂರಾಟ ನಡೆಸಿ ಹಿಂಸಾ ಪ್ರವೃತ್ತಿ ತೋರಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಕಪಟ ಜಾತ್ಯಾತೀತತೆಯ ಕಾರಣದಿಂದಾಗಿ ದೇಶ ಸೊರಗುತ್ತಿದೆಯೇ ಹೊರತು, ಸೂಲಿಬೆಲೆಯಂತಹ ದೇಶ ಭಕ್ತರಿಂದಲ್ಲ ಎಂದು ಪತ್ರಿಕಾ ಹೇಳಿಕೆಯಲ್ಲಿ ಕಿಡಿಕಾರಿದ್ದಾರೆ.
Priyank Kharge a PUC failure questions Chakravarti Sulibele education qualification slams MLA Bharath Shetty in Mangalore. Recently Kharge had slammed Sulibele on his education.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm