ಬ್ರೇಕಿಂಗ್ ನ್ಯೂಸ್
10-06-23 05:31 pm Mangalore Correspondent ಕರಾವಳಿ
ಪುತ್ತೂರು, ಜೂನ್ 10: ಮಂತ್ರವಾದಿಯ ಸೋಗಿನಲ್ಲಿ ಮೋಸ ಎಸಗಲು ಬಂದಿದ್ದ ತಂಡವನ್ನು ಸ್ಥಳೀಯ ಯುವಕರು ಸೇರಿ ಹಲ್ಲೆಗೈದು ಓಡಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಹಲ್ಲೆ ನಡೆಸುವ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ವಳಾಲು ಎಂಬಲ್ಲಿ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಗುಜರಿ ವ್ಯವಹಾರ ಮಾಡುತ್ತಿದ್ದ ವ್ಯಕ್ತಿಗಳು ಮಂತ್ರವಾದಿಯ ಸೋಗಿನಲ್ಲಿ ಮನೆಯೊಂದಕ್ಕೆ ಎಂಟ್ರಿ ಕೊಟ್ಟು ವಂಚನೆ ಎಸಗಿದ ಆರೋಪ ಕೇಳಿಬಂದಿದೆ. ಮಗುವಿಗೆ ಆರೋಗ್ಯ ಸಮಸ್ಯೆಯಿದ್ದ ಹಿನ್ನೆಲೆ ಮುಸ್ಲಿಂ ಕುಟುಂಬವೊಂದು ಮಂತ್ರವಾದಿಗಳನ್ನು ಸಂಪರ್ಕಿಸಿದ್ದರು. ಬಳಿಕ ಮನೆಗೆ ಬಂದಿದ್ದ ಮಂತ್ರವಾದಿಗಳಿಬ್ಬರು ಕಪ್ಪು ನೂಲು ಮಂತ್ರಿಸಿ ಮಗುವಿಗೆ ಕಟ್ಟಲು ಮುಂದಾಗಿದ್ದರು.
ಈ ವೇಳೆ ಮಂತ್ರವಾದಿ ರೂಪದಲ್ಲಿ ಬಂದಿದ್ದ ವ್ಯಕ್ತಿಗಳ ಪರಿಚಯದ ವ್ಯಕ್ತಿಯೊಬ್ಬರು ಅದೇ ಮನೆಗೆ ಬಂದಿದ್ದರು. ಇವರು ಗುಜರಿ ವ್ಯಾಪಾರಿಗಳಾಗಿದ್ದು ಯಾವಾಗ ಮಂತ್ರವಾದಿಯಾಗಿದ್ದು ಎಂದು ಮಾತಿನ ಚಕಮಕಿ ನಡೆದಿದೆ. ಇದು ನಮ್ಮ ಖಾಸಗಿ ವಿಚಾರ, ನೀವು ಯಾಕೆ ಮಧ್ಯೆ ಬರುತ್ತೀರಿ ಎಂದು ಮಂತ್ರವಾದಿ ವ್ಯಕ್ತಿಗಳು ಹೇಳಿದ್ದಾರೆ. ಇದರಿಂದ ಸಿಟ್ಟಿಗೆದ್ದ ಯುವಕರು ಮನೆಯಲ್ಲೇ ನಕಲಿ ಮಂತ್ರವಾದಿಗಳ ಮೇಲೆ ಹಲ್ಲೆ ನಡೆಸಿದ್ದಾರೆ.
ಯುವಕರು ಬ್ಯಾರಿ ಭಾಷೆಯಲ್ಲಿ ಮಾತನಾಡುತ್ತಾ ಇಬ್ಬರಿಗೂ ಹಿಗ್ಗಾಮುಗ್ಗಾ ಥಳಿಸಿರುವ ವೀಡಿಯೋ ವೈರಲ್ ಆಗಿದೆ. ವಾರದ ಹಿಂದೆ ಘಟನೆ ನಡೆದಿದೆ ಎನ್ನಲಾಗುತ್ತಿದ್ದು ಪ್ರಕರಣ ಠಾಣೆಯ ಮೆಟ್ಟಿಲೇರಿ ಬಳಿಕ ಮಾತುಕತೆಯಲ್ಲಿ ಬಗೆಹರಿದಿದೆ ಎನ್ನುವ ಮಾಹಿತಿ ಲಭಿಸಿದೆ.
#Mangalore Two scrap delaers posing as #Muslim #witch #doctors #beaten by public at #Uppinangady, video goes viral #BreakingNews pic.twitter.com/IPAIdxIOxE
— Headline Karnataka (@hknewsonline) June 10, 2023
Mangalore Two scrap delaers posing as Muslim witch doctors beaten in Uppinangady, video goes viral. A family had contacted witch doctor for healing of thier child, but localities have identified them as Scrap dealers after which they were thrashed inside the house by the public.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm