ಬ್ರೇಕಿಂಗ್ ನ್ಯೂಸ್
10-06-23 09:06 pm Mangalore Correspondent ಕರಾವಳಿ
ಮಂಗಳೂರು, ಜೂನ್ 10: ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಫಲ್ಗುಣಿ ನದಿಗೆ ಕೈಗಾರಿಕಾ ತ್ಯಾಜ್ಯ ಬಿಡುಗಡೆಯಾಗುವುದನ್ನು ತಡೆಯಲು ವಿಫಲಗೊಂಡ ಮಂಗಳೂರು ಮಹಾನಗರ ಪಾಲಿಕೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ಕರ್ನಾಟಕ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.
ಜೂನ್ 4ರಂದು ಪ್ರಕಟಗೊಂಡ ವಿವಿಧ ಮಾಧ್ಯಮ ವರದಿಗಳ ಆಧಾರದಲ್ಲಿ ಲೋಕಾಯುಕ್ತ ಕಾಯಿದೆಯ ಸೆಕ್ಷನ್ 7(2) ಮತ್ತು 9(3-ಎ) ಅಡಿಯಲ್ಲಿ ಪ್ರಕರಣ ಕೈಗೆತ್ತಿಕೊಂಡಿರುವ ಉಪ ಲೋಕಾಯುಕ್ತ ಕೆ.ಎನ್.ಫಣೀಂದ್ರ ಮುಂದಿನ 15 ದಿನಗಳೊಳಗೆ ವರದಿ ಸಲ್ಲಿಸುವಂತೆ ಪಾಲಿಕೆ ಉಪಾಯುಕ್ತ (ಆಡಳಿತ), ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಹಾಗೂ ಕೆಐಎಡಿಬಿ ಕಾರ್ಯಕಾರಿ ಅಭಿಯಂತರರಿಗೆ ಸೂಚನೆ ನೀಡಿದೆ. ಅಲ್ಲದೇ 15 ದಿನಗಳ ಒಳಗಡೆ ವಿವರವಾದ ವರದಿ ಸಲ್ಲಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಉಪ ಲೋಕಾಯುಕ್ತರು ಸೂಚಿಸಿದ್ದಾರೆ.


ಒಳಚರಂಡಿ ಮೂಲಕ ನದಿಗೆ ತ್ಯಾಜ್ಯ ಬಿಡುಗಡೆ ಆಗುತ್ತಿರುವುದು ಜಲಚರಗಳಿಗೆ ಮಾತ್ರವಲ್ಲ, ಆ ನೀರನ್ನು ಬಳಸುವ ಮನುಷ್ಯರಿಗೂ ಪ್ರಾಣಿಗಳಿಗೂ ಹಾನಿಕರವಾಗಿದೆ ಎಂದು ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ಉಪ ಲೋಕಾಯುಕ್ತರು ಪ್ರಶ್ನೆ ಮಾಡಿದ್ದಾರೆ. ಪಣಂಬೂರು ಮತ್ತು ಬೈಕಂಪಾಡಿ ಪರಿಸರದಲ್ಲಿ ಕಾರ್ಯಾಚರಿಸುವ ಹಲವು ಕೈಗಾರಿಕೆಗಳು ತ್ಯಾಜ್ಯ ಸಂಸ್ಕರಣೆ ನಡೆಸದೆ ಅವುಗಳನ್ನು ನೇರವಾಗಿ ನದಿಗೆ ಬಿಡುತ್ತಿವೆ. ಇದರಿಂದ ಸ್ಥಳೀಯ ಕೆರೆ, ಬಾವಿಗಳ ನೀರು ಕಲುಷಿತಗೊಂಡಿದೆ. ತೋಡುಗಳ ಮೂಲಕ ತ್ಯಾಜ್ಯ ನೇರವಾಗಿ ಫಲ್ಗುಣಿ ನದಿ ಸೇರುತ್ತದೆ. ಈ ಬಗ್ಗೆ ಸ್ಥಳೀಯರು ಪ್ರಬಲ ಆಕ್ಷೇಪ ಎತ್ತಿದ್ದರೂ, ಪತಂಜಲಿ ಕಂಪನಿಯ ರುಚಿ ಗೋಲ್ಡ್ ಘಟಕದ ಮಾಲಿನ್ಯ ದಿನವೂ ಕಾಲುವೆ ಸೇರುತ್ತದೆ.
Ruchi gold waste chemical merges with Palguni river, Lokayukta files case against Mangalore city corporation over negligence.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 11:59 am
HK News Staffer
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
05-09-26 11:52 am
HK News Staffer
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಜೈಲು ವಾರ್ಡನ್ ಕತ...
04-09-26 08:16 pm
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm