ಬ್ರೇಕಿಂಗ್ ನ್ಯೂಸ್
11-06-23 07:47 pm Mangalore Correspondent ಕರಾವಳಿ
ಉಳ್ಳಾಲ, ಜೂ.11: ಕಡಲ್ಕೊರೆತ ತಡೆಗೆ ಮುಂದಿನ ವರ್ಷದಿಂದಲೇ ಶಾಶ್ವತ ಕಾಮಗಾರಿ ಕೈಗೊಳ್ಳಲಾಗುವುದು. ಸರಕಾರಿ ಆಸ್ಪತ್ರೆಗಳಿಗೆ ಬರುವ ರೋಗಿಗಳನ್ನ ನಿರ್ಲಕ್ಷಿಸುವುದಾಗಲಿ, ಅವರಿಂದ ಹಣ ಪೀಕಿಸುವುದು ಗಮನಕ್ಕೆ ಬಂದರೆ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದೆಂದು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಮಂಗಳೂರು ಶಾಸಕ, ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ ಹಾಗೂ ಅಧಿಕಾರಿಗಳ ಜತೆಗೆ ಭಾನುವಾರ ಉಚ್ಚಿಲ ಬಟ್ಟಪ್ಪಾಡಿ ಕಡಲ್ಕೊರೆತಕ್ಕೆ ಹಾನಿಗೊಳಗಾದ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಈ ವೇಳೆ ಮಾತನಾಡಿದ ಅವರು ಮನೆಯನ್ನು ಕಳೆದುಕೊಂಡವರಿಗೆ ಮನೆ ನಿರ್ಮಾಣಕ್ಕೆ ಪರ್ಯಾಯವಾದ ಜಾಗವನ್ನು ವ್ಯವಸ್ಥೆ ಮಾಡಬೇಕು ಎಂದು ಆದೇಶ ಮಾಡಿದ್ದೇನೆ. ಈ ಭಾಗದಲ್ಲಿ ಶಾಶ್ವತ ಪರಿಹಾರ ಅಗತ್ಯವಿದ್ದು ಕಡಲ್ಕೊರೆತ ಉಲ್ಬಣವಾಗುತ್ತಿರುವ ಇಂತಹ ಸಂದರ್ಭ ಈ ತರಹ ಬಿಡೋದಕ್ಕೆ ಸಾಧ್ಯವಿಲ್ಲ. ಅದಕ್ಕಾಗಿ ಶಾಶ್ವತ ಪರಿಹಾರ ಒದಗಿಸಿಕೊಡುವ ನಿಟ್ಟಿನಲ್ಲಿ ಮಾನ್ಯ ಸಭಾಧ್ಯಕ್ಷರ ಜತೆ ಬೆಂಗಳೂರಿನಲ್ಲಿ ಚರ್ಚಿಸಲಿದ್ದೇನೆ ಎಂದರು. ಮುಂದಿನ ವರ್ಷದಿಂದ ಶಾಶ್ವತ ಕಾಮಗಾರಿ ಮಾಡಬೇಕಿದೆ. ಸದ್ಯಕ್ಕೆ ಮಳೆ ಸ್ವಲ್ಪ ಕಡಿಮೆ ಆದ ತಕ್ಷಣ ತಾತ್ಕಾಲಿಕ ಕಾಮಗಾರಿ ನಡೆಸಲು ಮತ್ತು ಎರಡು ಕಡೆ ತಾತ್ಕಾಲಿಕ ರಕ್ಷಣೆ ನೀಡಲು ಹೇಳಿದ್ದೇನೆ. ಚಂಡಮಾರುತ ಸೇರಿದಂತೆ ಪ್ರಕೃತಿ ನಿಯಮದ ಮುಂದೆ ಏನೂ ಮಾಡೋದಕ್ಕೆ ಸಾಧ್ಯವಿಲ್ಲ ಎಂದರು.
ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ
ಇದೇ ಸಂದರ್ಭ ಉಳ್ಳಾಲ ಅಬ್ಬಕ್ಕ ವೃತ್ತದ ಬಳಿಯಲ್ಲಿರುವ ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಸಚಿವರು ಜಿಲ್ಲಾ ಮಟ್ಟದ ಅಧಿಕಾರಿಗಳ ಜತೆಗೆ ಚರ್ಚಿಸಿದರು. ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು ಈಗಾಗಲೇ ಆರೋಗ್ಯದ ಕುರಿತಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳ ಜತೆಗೆ ಜಿಲ್ಲೆಯ ವಿವಿಧ ಆಸ್ಪತ್ರೆಗಳು ನೀಡುತ್ತಿರುವ ಸೇವೆ ಹಾಗೂ ವ್ಯವಸ್ಥೆಗಳ ಕುರಿತಾಗಿ ಚರ್ಚಿಸಿದ್ದು ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಯಾಲಿಸಿಸ್ ಸೇವೆಯೂ ಲಭ್ಯವಾಗಬೇಕು ಎಂದು ಶಾಸಕ ಯು.ಟಿ. ಖಾದರ್ ಅವರು ಬೇಡಿಕೆ ಇಟ್ಟಿದ್ದಾರೆ. ಇಲ್ಲಿ ಅಂತಹ ಸೇವೆ ನೀಡಲು ಸಾಧ್ಯವೇ ಎಂದು ಅವರ ಬೇಡಿಕೆಯನ್ನು ಪರಿಶೀಲಿಸಲಿದ್ದೇನೆ ಎಂದರು. ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಗುತ್ತಿಗೆದಾರರಿಂದ ಡಯಾಲಿಸಿಸ್ ಸೇವೆ ತೃಪ್ತಿಕರವಾಗಿಲ್ಲ. ಅದರಲ್ಲಿ ಸಾಕಷ್ಟು ಗೊಂದಲವಿದೆ. ಅದಕ್ಕಾಗಿ ಹೊಸತಾಗಿ ಟೆಂಡರ್ ಕರೆಯುವ ಮೂಲಕ ಉತ್ತಮ ಸೇವೆ ನೀಡಲು ಪ್ರಯತ್ನಿಸಲಿದ್ದೇವೆ ಎಂದು ತಿಳಿಸಿದರು.
ಸಿಬ್ಬಂದಿ ಕೊರತೆ ಬಗ್ಗೆ ನಿಗಾ ವಹಿಸಿದ್ದೇವೆ. ಜಿಲ್ಲೆ, ತಾಲೂಕು ಮಟ್ಟದಲ್ಲಿ ಜಿಲ್ಲಾ ಆರೋಗ್ಯ ಕೇಂದ್ರ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ವೈದ್ಯರು ಸಮಪರ್ಕವಾಗಿ ನಿರ್ವಹಣೆ ಮಾಡಲು ಸೂಚಿಸಲಾಗಿದೆ. ವೈದ್ಯರು ಸೂಚಿಸಿದ ಎಲ್ಲ ಔಷಧ ಲಭ್ಯವಾಗಬೇಕು ಎಂಬ ನಿಟ್ಟಿನಲ್ಲಿ ಯಾವುದೇ ಪ್ರಾಥಮಿಕ ಆರೋಗ್ಯ ಕೇಂದ್ರ, ಜಿಲ್ಲಾ ಆರೋಗ್ಯ ಕೇಂದ್ರದಲ್ಲೂ ರೋಗಿಗಳಿಗೆ ಔಷಧಿ ಕೊರತೆ ಎದುರಾಗದಂತೆ ಆರ್ಥಿಕವಾಗಿ ಎಲ್ಲ ವ್ಯವಸ್ಥೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲೆ ತಾಲೂಕು ಮಟ್ಟದ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಲಿದ್ದೇನೆ ಎಂದರು.
ಜಿಲ್ಲಾಧಿಕಾರಿ ರವಿಕುಮಾರ್,ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.
Proposal at the government level to check sea erosion in Ullal proposed says Dinesh Gundu Rao in Mangalore. Temporary measures will be taken to ensure that there was no damage to the properties and life.
20-05-25 03:30 pm
Bangalore Correspondent
Shashi Kumar IPS, Corruption, Hubballi, polic...
19-05-25 04:00 pm
Bjp, Radha Mohan Das Agarwal: 1971ರ ಯುದ್ಧ ಗೆಲ...
17-05-25 01:44 pm
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
20-05-25 02:36 pm
HK News Desk
Operation Sindhoor, Rahul Gandhi,.Pakistan: ಆ...
20-05-25 01:42 pm
ಆಡಲು ಹೋಗಿದ್ದಾಗ ಮಳೆ ಬಂತೆಂದು ನಿಲ್ಲಿಸಿದ್ದ ಕಾರಿನ...
19-05-25 02:25 pm
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
20-05-25 02:03 pm
Mangalore Correspondent
Job Scam Mangalore, Police Suspend, Hireglow...
19-05-25 11:07 pm
Jail Attack, Suhas Shetty, Mangalore, Chotte...
19-05-25 10:14 pm
Konaje Suicide, Mangalore, Hair loss: ಕೂದಲು ಉ...
19-05-25 09:41 pm
Mangalore Job Scam, Police, Lawrence Dsouza,...
19-05-25 05:22 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm