ಬ್ರೇಕಿಂಗ್ ನ್ಯೂಸ್
11-06-23 09:29 pm Udupi Correspondent ಕರಾವಳಿ
ಉಡುಪಿ, ಜೂನ್ 11: ಜಿಲ್ಲೆಯಲ್ಲಿ ಶಕ್ತಿ ಯೋಜನೆಗೆ ಚಾಲನೆ ಕೊಟ್ಟ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು 'ಉಡುಪಿಯಲ್ಲಿ ಸರ್ಕಾರಿ ಬಸ್ಗಳ ಸಂಖ್ಯೆ ಹೆಚ್ಚಿಸುವ' ಭರವಸೆ ಕೊಟ್ಟಿದ್ದಾರೆ.
ಕಾಂಗ್ರೆಸ್ನ ಐದು ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಇಂದು ರಾಜ್ಯಾದ್ಯಂತ ಅನುಷ್ಠಾನಕ್ಕೆ ಬಂದಿದೆ. ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಇಂದು ಶಕ್ತಿ ಯೋಜನೆಗೆ ಚಾಲನೆ ಕೊಟ್ಟರು. ಅದೇ ವೇಳೆ ಎಲ್ಲ ಜಿಲ್ಲೆಗಳ ಉಸ್ತುವಾರಿ ಸಚಿವರೂ ಕೂಡ ತಮ್ಮ ಜಿಲ್ಲೆಗಳಲ್ಲಿ 'ಶಕ್ತಿ' ಸಂಚಾರಕ್ಕೆ ಹಸಿರು ನಿಶಾನೆ ತೋರಿಸಿದ್ದಾರೆ. ಅದರಂತೆ ಲಕ್ಷ್ಮಿ ಹೆಬ್ಬಾಳ್ಕರ್ ತಮ್ಮ ಉಡುಪಿ ಜಿಲ್ಲೆಯಲ್ಲಿ ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ಕೊಟ್ಟು, ಉಚಿತ ಪಾಸ್ ವಿತರಿಸಿ ಬಳಿಕ ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸಿದ್ದಾರೆ. ಈ ವೇಳೆ ಅವರೊಂದಿಗೆ ಅನೇಕ ಮಹಿಳೆಯರು ಇದ್ದರು. ನೂಕುನುಗ್ಗಲು ಕೂಡ ಉಂಟಾಗಿತ್ತು.


ಹೀಗೆ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡಿದ ಸಂದರ್ಭದಲ್ಲಿ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ 'ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ಬಸ್ಗಳ ಸಂಖ್ಯೆ ಎಷ್ಟಿದೆ ಎಂದು ಮಾಹಿತಿ ಪಡೆದಿದ್ದೇನೆ. ಕೇವಲ 95 ಬಸ್ಗಳು ಮಾತ್ರ ಇವೆ. ಈ ಭಾಗದಲ್ಲಿ ಖಾಸಗಿ ಬಸ್ಗಳೇ ಜಾಸ್ತಿ. ಹೀಗಾಗಿ ಉಡುಪಿ ಮಹಿಳೆಯರು ಸರ್ಕಾರದ ಯೋಜನೆಯಿಂದ ವಂಚಿತರಾಗುತ್ತಾರೆ. ಉಡುಪಿ ಭಾಗದಲ್ಲಿ ಸರ್ಕಾರಿ ಬಸ್ಗಳ ಸಂಖ್ಯೆ ಹೆಚ್ಚಿಸುವ ಬಗ್ಗೆ ಮುಖ್ಯಮಂತ್ರಿಗಳ ಜತೆ ಮಾತಾಡುತ್ತೇನೆ. ಸಾರಿಗೆ ಸಚಿವರ ಗಮನಕ್ಕೂ ತರುತ್ತೇನೆ' ಎಂದಿದ್ದಾರೆ. 'ಉಡುಪಿಯಲ್ಲಿ ಪುರುಷರಿಗಿಂತಲೂ ಮಹಿಳೆಯರೇ ಜಾಸ್ತಿ ಇದ್ದಾರೆ. ನಾನು ಇಲ್ಲಿನ ಉಸ್ತುವಾರಿ ಸಚಿವೆಯಾಗಿ ಶಕ್ತಿ ಯೋಜನೆಯ ಲಾಭ ಇಲ್ಲಿನ ಮಹಿಳೆಯರಿಗೆ ಸಿಗುವಂತೆ ಮಾಡುತ್ತೇನೆ. ವಿದ್ಯಾರ್ಥಿನಿಯರಿಗೆ ಅನುಕೂಲವಾಗಬೇಕು' ಎಂದು ಹೇಳಿದರು.
The strength of state run KSRTC buses is very low in Udupi district and efforts will be made to increase their numbers by drawing the attention of the government to this issue, said Lakshmi Hebbalkar, Minister of Women and Child Development, and Disabled and Senior Citizens Empowerment.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
13-04-26 01:27 pm
HK News Staffer
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
13-04-26 12:53 pm
HK News Staffer
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm