ಪುತ್ತೂರು ಮೆಸ್ಕಾಂ ಕಚೇರಿಗೆ ನುಗ್ಗಿ ಎಇಇಗೆ ಕೊಲೆ ಬೆದರಿಕೆ ; ವಿದ್ಯುತ್ ಗುತ್ತಿಗೆದಾರ ಮಹಮ್ಮದ್ ನಿಸಾರ್ ವಿರುದ್ಧ ಪ್ರಕರಣ ದಾಖಲು 

14-06-23 10:24 pm       Mangalore Correspondent   ಕರಾವಳಿ

ಕೃಷಿ ನೀರಾವರಿ ಪಂಪ್ ಸೆಟ್ ಗೆ ಸಲ್ಲಿಸಿದ ಅರ್ಜಿ ತಿರಸ್ಕರಿಸಿದ ವಿಚಾರದಲ್ಲಿ ವಿದ್ಯುತ್ ಗುತ್ತಿಗೆದಾರನೊಬ್ಬ ಬನ್ನೂರು ಮೆಸ್ಕಾಂ ಉಪವಿಭಾಗ ಕಚೇರಿಗೆ ನುಗ್ಗಿ, ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಇಂಜಿನಿಯರ್ ಅವರನ್ನು ಅವಾಚ್ಯವಾಗಿ ನಿಂದಿಸಿ ಕೊಲೆ ಬೆದರಿಕೆ ಹಾಕಿದ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ತೂರು, ಜೂನ್ 14: ಕೃಷಿ ನೀರಾವರಿ ಪಂಪ್ ಸೆಟ್ ಗೆ ಸಲ್ಲಿಸಿದ ಅರ್ಜಿ ತಿರಸ್ಕರಿಸಿದ ವಿಚಾರದಲ್ಲಿ ವಿದ್ಯುತ್ ಗುತ್ತಿಗೆದಾರನೊಬ್ಬ ಬನ್ನೂರು ಮೆಸ್ಕಾಂ ಉಪವಿಭಾಗ ಕಚೇರಿಗೆ ನುಗ್ಗಿ, ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಇಂಜಿನಿಯರ್ ಅವರನ್ನು ಅವಾಚ್ಯವಾಗಿ ನಿಂದಿಸಿ ಕೊಲೆ ಬೆದರಿಕೆ ಹಾಕಿದ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ತೂರು ಸಸಾ ಇಲೆಕ್ಟ್ರಿಕಲ್ಸ್ ಮಾಲೀಕ, ವಿದ್ಯುತ್ ಗುತ್ತಿಗೆದಾರ ಮಹಮ್ಮದ್ ನಿಸಾರ್ ಪ್ರಕರಣದ ಆರೋಪಿಯಾಗಿದ್ದು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ (ಎಇಇ) ರಾಮಚಂದ್ರ ದೂರು ನೀಡಿದ್ದಾರೆ.

ಜೂ.14ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಮಹಮ್ಮದ್ ನಿಸಾರ್ ಮೆಸ್ಕಾಂ ಕಚೇರಿಗೆ ನುಗ್ಗಿದ್ದು ಮುಂಡೂರು ಗ್ರಾಮದ ರಮೇಶ್ ಎಂಬವರ ಕೃಷಿ ನೀರಾವರಿ ಪಂಪ್ ಸೆಟ್ ಗೆ ನೀಡಿದ ಅರ್ಜಿಯನ್ನು ತಿರಸ್ಕಾರ ಮಾಡಿದ್ದೇಕೆ ಎಂದು ಅವಾಚ್ಯವಾಗಿ ನಿಂದಿಸಿದ್ದಾರೆ. ಅಲ್ಲದೆ, ಅರ್ಜಿಯನ್ನು ಮಂಜೂರು ಮಾಡದೇ ಹೋದಲ್ಲಿ ನಿನ್ನನ್ನು ನೋಡಿಕೊಳ್ಳುತ್ತೇನೆ ಎಂದು ಕೊಲೆ ಬೆದರಿಕೆ ಹಾಕಿದ್ದಾರೆ. 

ಇಲಾಖೆಯ ನಿಯಮದ ತೊಡಕಿನಿಂದಾಗಿ ಅರ್ಜಿಯನ್ನು ತಿರಸ್ಕಾರ ಮಾಡಿದ್ದೆ ವಿನಾ ದುರುದ್ದೇಶ ಹೊಂದಿಲ್ಲ.‌ ಆದರೆ ಗುತ್ತಿಗೆದಾರ ತನ್ನ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ, ಜೀವ ಬೆದರಿಕೆ ಹಾಕಿದ್ದಾರೆಂದು ದೂರಿನಲ್ಲಿ ರಾಮಚಂದ್ರ ತಿಳಿಸಿದ್ದಾರೆ.

Mangalore Life threat to AEE at Puttur Mescom, case filed against Electric Contractor Mohammad Nisar in Puttur.