ಬ್ರೇಕಿಂಗ್ ನ್ಯೂಸ್
31-10-20 06:56 pm Mangalore Reporter ಕರಾವಳಿ
ಮಂಗಳೂರು, ಅಕ್ಟೋಬರ್ 31: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಧಿಕೃತವಾಗಿ ಅದಾನಿ ಕಂಪನಿ ತೆಕ್ಕೆಗೆ ಬಿದ್ದಿದೆ. ಅದಾನಿ ಕಂಪನಿಯ ಅಧಿಕಾರಿಗಳು ಶನಿವಾರವೇ ಮಂಗಳೂರು ಏರ್ಪೋರ್ಟಿನಲ್ಲಿ ಕಾರ್ಯಾಚರಣೆ ಆರಂಭಿಸಿದ್ದಾರೆ.
ಅ.31ರಿಂದ ಅದಾನಿ ಕಂಪನಿ ಅಧಿಕೃತ ಎಂಟ್ರಿ ಪಡೆಯಲಿದೆ ಎನ್ನಲಾಗುತ್ತಿತ್ತು. ಅದೇ ಪ್ರಕಾರದಲ್ಲಿ ಕಂಪನಿ ಅಧಿಕಾರಿಗಳು ನಿರ್ವಹಣೆ ಆರಂಭಿಸಿದ್ದು, ಔಪಚಾರಿಕವಾಗಿ ಮಂಗಳೂರು ನಿಲ್ದಾಣ ಪ್ರಾಧಿಕಾರದ ನಿರ್ದೇಶಕರಿಂದ ಕೀ ಹಸ್ತಾಂತರ ಮಾಡಿಕೊಂಡಿದ್ದಾರೆ. ವಿಶೇಷ ಅಂದ್ರೆ, ಮೊದಲ ದಿನವೇ ವಿಮಾನ ನಿಲ್ದಾಣದ ನೇಮ್ ಪ್ಲೇಟ್ ಅನ್ನು ಕಂಪನಿ ಅಧಿಕಾರಿಗಳು ಬದಲಿಸಿದ್ದಾರೆ. ಮಂಗಳೂರು ಇಂಟರ್ನ್ಯಾಶನಲ್ ಏರ್ಪೋರ್ಟ್ ಹೆಸರಿನ ಜೊತೆಗೆ ಅದಾನಿ ಏರ್ಪೋರ್ಟ್ ಎನ್ನುವ ಸಿಂಬಲನ್ನು ಸೇರಿಸಲಾಗಿದೆ.
ಮಂಗಳೂರು ಸೇರಿದಂತೆ ದೇಶದ ಆರು ವಿಮಾನ ನಿಲ್ದಾಣಗಳನ್ನು ಅದಾನಿ ಗ್ರೂಪ್ ಗುತ್ತಿಗೆ ಪಡೆದುಕೊಂಡಿದೆ. ಅದರಂತೆ, ನವೆಂಬರ್ 2ರಂದು ಲಕ್ನೋ ಮತ್ತು ಅಹ್ಮದಾಬಾದ್ ವಿಮಾನ ನಿಲ್ದಾಣದ ನಿರ್ವಹಣೆಯನ್ನು ನ.7ರಂದು ಪಡೆದುಕೊಳ್ಳಲಿದೆ. ಕಳೆದ ಫೆಬ್ರವರಿ ತಿಂಗಳಲ್ಲಿಯೇ ಒಪ್ಪಂದ ಪ್ರಕ್ರಿಯೆಗಳು ಆಗಿದ್ದವು. ಆದರೆ, ಕೊರೊನಾ ಲಾಕ್ಡೌನ್ ಕಾರಣದಿಂದಾಗಿ ಹಸ್ತಾಂತರ ವಿಳಂಬವಾಗಿತ್ತು.
ದಕ್ಷ ಮತ್ತು ಗುಣಮಟ್ಟದ ಕಾರ್ಯಾಚರಣೆ ಹಾಗೂ ನಿಲ್ದಾಣಗಳ ಅಭಿವೃದ್ಧಿ ದೃಷ್ಟಿಯಿಂದ ಕಳೆದ 2018ರಲ್ಲಿ ಕೇಂದ್ರ ಸರಕಾರ ದೇಶದ ಆರು ವಿಮಾನ ನಿಲ್ದಾಣಗಳನ್ನು ಖಾಸಗೀಕರಣಗೊಳಿಸಲು ನಿರ್ಧರಿಸಿತ್ತು. ಅದರಂತೆ, ಮಂಗಳೂರು ವಿಮಾನ ನಿಲ್ದಾಣವನ್ನು 50 ವರ್ಷಗಳ ಅವಧಿಗೆ ಅದಾನಿ ಕಂಪನಿಗೆ ಗುತ್ತಿಗೆ ನೀಡಿದೆ.
Adani group of company takes over the management of Mangalore International airport here on Saturday October 31, 2020.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 02:28 pm
HK News Desk
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
15-07-25 01:13 pm
HK News Desk
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am
ಮ್ಯಾಟ್ರಿಮನಿ ಸೈಟಲ್ಲಿ ಸಿಕ್ಕ ಗೆಳತಿಯಿಂದಲೇ ಮೋಸ ; ಆ...
13-07-25 05:23 pm
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm