ಬ್ರೇಕಿಂಗ್ ನ್ಯೂಸ್
16-06-23 03:13 pm Mangalore Correspondent ಕರಾವಳಿ
ಮಂಗಳೂರು, ಜೂನ್ 16: ಕಡಲ್ಕೊರೆತ ಸಮಸ್ಯೆ ಪ್ರತಿ ವರ್ಷ ಜೂನ್, ಜುಲೈ ತಿಂಗಳಲ್ಲಿ ಮಾತ್ರ ಬರುತ್ತದೆ. ಸಮಸ್ಯೆ ಎದುರಾಗುವ ಮೊದಲೇ ಮುಂಜಾಗ್ರತೆ ಕ್ರಮ ತೆಗೆದುಕೊಳ್ಳಬೇಕಾದ್ದು ಸರಕಾರ ಜವಾಬ್ದಾರಿ. ಆ ಕೆಲಸವನ್ನು ನಾವು ಮಾಡುತ್ತೇವೆ. ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ ಎಂದು ಮೀನುಗಾರಿಕೆ, ಬಂದರು ಮತ್ತು ಜಲಸಾರಿಗೆ ಸಚಿವ ಮಾಂಕಾಳು ವೈದ್ಯ ಹೇಳಿದ್ದಾರೆ.
ಸಚಿವರಾದ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಭೇಟಿಯಿತ್ತ ಸಚಿವರು, ಬಂದರು ಮತ್ತು ಮೀನುಗಾರಿಕೆ ಕಚೇರಿಗೆ ಭೇಟಿ ನೀಡಿದರು. ಆನಂತರ, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಸಭೆಯ ಬಳಿಕ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು. ಕರಾವಳಿಯ ಮೂರು ಜಿಲ್ಲೆಗಳಲ್ಲಿ ಕಡಲ್ಕೊರೆತ ಸಮಸ್ಯೆ ಇರುವುದು ನನಗೆ ತಿಳಿದಿದೆ. ಇದರಿಂದ ಬಡವರಿಗೆ, ಅಲ್ಲಿನ ನಿವಾಸಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ. ಇಂಥದ್ದಕ್ಕೆಲ್ಲ ಸಮಸ್ಯೆ ಉಂಟಾದ ಬಳಿಕ ಕೆಲಸ ಮಾಡೋದಲ್ಲ. ಸಮಸ್ಯೆ ಎದುರಾಗುವ ಮೊದಲೇ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು. ಎಲ್ಲಿ ಏನು ಸಮಸ್ಯೆ ಆಗಿದೆಯೋ, ಅದಕ್ಕೆ ಸೂಕ್ತ ರೀತಿ ಸ್ಪಂದಿಸುತ್ತೇನೆ ಎಂದು ಹೇಳಿದರು.
ಕಳೆದ ಕೆಲವು ವರ್ಷಗಳಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಸಾವನ್ನಪ್ಪಿದವರಿಗೆ ಸರಕಾರದಿಂದ ಪರಿಹಾರದ ಹಣ ಕೊಟ್ಟಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ರೀತಿ 20 ಜನರು ಸತ್ತಿದ್ದು, ಅವರ ಕುಟುಂಬಗಳಿಗೆ 1.20 ಕೋಟಿ ರೂ. ಆಗಬೇಕಿದೆ. ಮೂರು ಜಿಲ್ಲೆಗಳಲ್ಲಿ ಮೃತಪಟ್ಟವರಿಗೆ 3.20 ಕೋಟಿ ರೂಪಾಯಿ ಆಗಬೇಕಿದ್ದು, ಅದನ್ನು ಇಲಾಖೆಯಿಂದ ಬಿಡುಗಡೆ ಮಾಡಿಸುತ್ತೇನೆ ಎಂದರು. ಬಿಜೆಪಿ ಸರಕಾರಕ್ಕೆ ಬಡವರ ಬಗ್ಗೆ ಕಾಳಜಿ ಇಲ್ಲ. ಮೀನುಗಾರಿಕೆಯಲ್ಲಿ ಸತ್ತು ಹೋಗಿದ್ದಕ್ಕೆ ಪ್ರೂಫ್ ಇದ್ದರೆ ಸಾಕು. ಸತ್ತವರ ಬಗ್ಗೆ ಮಾನದಂಡ ಕೇಳಿದರೆ ಕತೆಯೇನ್ರಿ ಎಂದು ಪ್ರಶ್ನಿಸಿದ ಸಚಿವ ಮಾಂಕಾಳು ವೈದ್ಯ, ಕೇಂದ್ರ ಸರಕಾರ ಯಾವುದೋ ಏಜನ್ಸಿಗೆ ಪರಿಹಾರದ ಹಣ ನೀಡಲು ನೇಮಕ ಮಾಡಿದೆ. ಅದರ ಬಗ್ಗೆ ನಾನು ಮಾತನಾಡಲ್ಲ. ನಾವು ರಾಜ್ಯ ಸರಕಾರದಿಂದ ಏನು ಪರಿಹಾರ ಆಗಬೇಕಿದೆಯೋ ಅದನ್ನು ಒದಗಿಸುತ್ತೇನೆ. ಬಿಜೆಪಿಯವರಿಗೆ ಕಾಳಜಿ ಇಲ್ಲದೆ ಇರೋದ್ರಿಂದಲೇ ವರ್ಷಗಟ್ಟಲೆ ಪರಿಹಾರದ ಹಣ ಬಾಕಿಯಾಗಿದೆ. ಅದನ್ನು ಈಗ ಕೊಡಿಸುವ ದುಸ್ಥಿತಿ ನಮ್ಮ ಸರಕಾರಕ್ಕೆ ಬಂದಿದೆ.
ಮೀನುಗಾರರು ಇಡೀ ದೇಶದಲ್ಲಿ ಅತಿ ಹೆಚ್ಚು ನಿರ್ಲಕ್ಷಿತರಾಗಿದ್ದಾರೆ. ಕಳೆದ ಹತ್ತು ತಿಂಗಳಲ್ಲಿ ಬಿಜೆಪಿ ಸರಕಾರ ಮೀನುಗಾರರಿಗೆ ಡೀಸೆಲ್ ಸಬ್ಸಿಡಿ ಕೊಟ್ಟಿಲ್ಲ. ಹತ್ತು ತಿಂಗಳದ್ದು ಸೇರಿ ಪ್ರತಿ ತಿಂಗಳು ಡೀಸೆಲ್ ಸಬ್ಸಿಡಿ ಸಿಗುವಂತೆ ಮಾಡುತ್ತೇನೆ. ಅಧಿಕಾರಿಗಳು ಒಂದು ತಿಂಗಳಲ್ಲಿ ಈ ಕೆಲಸವನ್ನು ಮಾಡಬೇಕು. ಕೆಲಸ ಮಾಡದ ಅಧಿಕಾರಿಗಳನ್ನು ನನ್ನ ಇಲಾಖೆಯಲ್ಲಿ ಉಳಿಸಿಕೊಳ್ಳೋದಿಲ್ಲ ಎಂದು ಖಡಕ್ಕಾಗಿ ಹೇಳಿದರು.
Mangalore Mankala Vaidya, strict action on sea erosion, we will take Immidete steps says Fisheries Minister
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm