ಕೋಮು ದ್ವೇಷದ ಕೊಲೆ ; ನಾಲ್ಕು ಕುಟುಂಬಗಳಿಗೆ ತಲಾ 25 ಲಕ್ಷ ಪರಿಹಾರ ಘೋಷಣೆ, ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಕುಟುಂಬಕ್ಕೂ ಪರಿಹಾರ 

16-06-23 11:13 pm       Mangalore Correspondent   ಕರಾವಳಿ

ಕೋಮು ವೈಷಮ್ಯ ಹಿನ್ನೆಲೆಯಲ್ಲಿ ಕೊಲೆಗೀಡಾದ ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಯುವಕರ ಕುಟುಂಬಗಳಿಗೆ ರಾಜ್ಯ ಸರ್ಕಾರ ತಲಾ 25 ಲಕ್ಷ ಪರಿಹಾರ ಘೋಷಣೆ ಮಾಡಿದೆ. 

ಮಂಗಳೂರು, ಜೂನ್ 16:  ಕೋಮು ವೈಷಮ್ಯ ಹಿನ್ನೆಲೆಯಲ್ಲಿ ಕೊಲೆಗೀಡಾದ ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಯುವಕರ ಕುಟುಂಬಗಳಿಗೆ ರಾಜ್ಯ ಸರ್ಕಾರ ತಲಾ 25 ಲಕ್ಷ ಪರಿಹಾರ ಘೋಷಣೆ ಮಾಡಿದೆ. 

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಕೊಲೆಯಾದ ಮಸೂದ್, ಸುರತ್ಕಲ್ ನಲ್ಲಿ ಕೊಲೆಯಾದ ಫಾಝಿಲ್ ಮತ್ತು ಜಲೀಲ್, ಕಾಟಿಪಳ್ಳದಲ್ಲಿ ಕೊಲೆಯಾಗಿದ್ದ ದೀಪಕ್ ರಾವ್ ಕುಟುಂಬಕ್ಕೆ ಪರಿಹಾರ ಪ್ರಕಟಿಸಲಾಗಿದೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರಧನ ಮಂಜೂರು ಮಾಡಿರುವ ಬಗ್ಗೆ ದ.ಕ. ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. 

ಜೂನ್ 19ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಗೃಹ ಕಚೇರಿಗೆ ಖುದ್ದಾಗಿ ಹಾಜರಾಗಿ ನಾಲ್ಕು ಕುಟುಂಬಗಳ ಕೊಲೆಯಾದ ಯುವಕರ ತಾಯಂದಿರು ಮುಖ್ಯಮಂತ್ರಿ ಅವರಿಂದಲೇ ಚೆಕ್ ಪಡೆಯುವಂತೆ ಸೂಚನೆ ನೀಡಲಾಗಿದೆ. ವಿಶೇಷ ಅಂದರೆ, 2018ರಲ್ಲಿ ಕೊಲೆಯಾಗಿದ್ದ ಬಿಜೆಪಿ ಕಾರ್ಯಕರ್ತ ಸುರತ್ಕಲ್ ಸಮೀಪದ ಕಾಟಿಪಳ್ಳ ನಿವಾಸಿ ದೀಪಕ್ ರಾವ್ ಕುಟುಂಬಕ್ಕೂ ಪರಿಹಾರ ನೀಡಲಾಗಿದೆ. ಕಳೆದ ವರ್ಷ ಕೊಲೆಯಾಗಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಿಜೆಪಿ ಸರ್ಕಾರ 25 ಲಕ್ಷ ಪರಿಹಾರ ನೀಡಿದ್ದು ಮತ್ತು ಉಳಿದವರಿಗೆ ನೀಡದೇ ಇದ್ದುದು ವಿವಾದಕ್ಕೆ ಕಾರಣವಾಗಿತ್ತು.

Communial murder in Mangalore, compensation of 25 lakhs to 4 families including Deepak Rao declared by Congress.