ಬ್ರೇಕಿಂಗ್ ನ್ಯೂಸ್
22-06-23 09:50 pm Mangalore Correspondent ಕರಾವಳಿ
ಮಂಗಳೂರು, ಜೂನ್ 22: ನಗರದ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಬಲಪಂಥೀಯ ಲೇಖಕ, ಭಾಷಣಗಾರ ಶ್ರೀಕಾಂತ್ ಶೆಟ್ಟಿ ಕಾರ್ಕಳ ಅವರನ್ನು ಕರೆಸಿರುವುದಕ್ಕೆ ಎನ್ಎಸ್ ಯುಐ ವಿದ್ಯಾರ್ಥಿ ಸಂಘಟನೆ ವಿರೋಧ ವ್ಯಕ್ತಪಡಿಸಿದ್ದಲ್ಲದೆ, ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕುವ ಬೆದರಿಕೆ ಒಡ್ಡಿದ್ದರಿಂದ ಜೂನ್ 23ರಂದು ನಡೆಯುವ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನೇ ರದ್ದುಪಡಿಸಲಾಗಿದೆ.
ಜೂನ್ 23ರಂದು ಬೆಳಗ್ಗೆ 9 ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಗೆ ಕಾಲೇಜಿನ ವಿದ್ಯಾರ್ಥಿ ಘಟಕದವರು ಶ್ರೀಕಾಂತ್ ಶೆಟ್ಟಿಯನ್ನು ಕರೆಸಿದ್ದರು. ಸರಕಾರಿ ಕಾಲೇಜಿನ ಕಾರ್ಯಕ್ರಮಕ್ಕೆ ಬಲಪಂಥೀಯ ಭಾಷಣಗಾರ ಬರುವುದಕ್ಕೆ ಎನ್ಎಸ್ ಯುಐ ವಿದ್ಯಾರ್ಥಿ ಸಂಘಟನೆಯವರು ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ, ಪೊಲೀಸ್ ಕಮಿಷನರ್ ಮತ್ತು ಮಂಗಳೂರು ವಿವಿಯ ಕುಲಪತಿ ಜಯರಾಜ್ ಅಮೀನ್ ಅವರಿಗೆ ದೂರನ್ನು ನೀಡಿದ್ದರು.



ದೂರಿನ ಹಿನ್ನೆಲೆಯಲ್ಲಿ ಗೊಂದಲಕ್ಕೆ ಆಸ್ಪದ ಆಗದಂತೆ ಕಾಲೇಜಿನ ಪ್ರಿನ್ಸಿಪಾಲ್ ಅನಸೂಯ ರೈ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಮುಂದೂಡಿಕೆ ಮಾಡಿದ್ದಾರೆ. ಅಲ್ಲದೆ, ಜೂನ್ 24ರ ಶನಿವಾರ ನಡೆಯಬೇಕಿದ್ದ ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮವನ್ನೂ ಮುಂದೂಡಿದ್ದು, ಈ ಬಗ್ಗೆ ಪ್ರಕಟಣೆ ನೀಡಿದ್ದಾರೆ. ಶುಕ್ರವಾರ ಮತ್ತು ಶನಿವಾರ ಎಂದಿನಂತೆ ಕಾಲೇಜು ತರಗತಿಗಳು ನಡೆಯಲಿದ್ದು ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಬರುವಂತೆ ಸೂಚನೆ ನೀಡಿದ್ದಾರೆ.
Shrikanth shetty to speech at Mangalore University, Congress NSUI threatens of Ghearo, police cancel program as NSUI alleges that there will be a provocative speech by Shrikanth shetty.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm