ಬ್ರೇಕಿಂಗ್ ನ್ಯೂಸ್
28-06-23 02:14 pm Mangalore Correspondent ಕರಾವಳಿ
ಮಂಗಳೂರು, ಜೂನ್ 28: ನಗರದ ಹಂಪನಕಟ್ಟೆ ಮಂಗಳೂರು ವಿವಿ ಕಾಲೇಜಿನಲ್ಲಿ ಕಾರ್ಯಕ್ರಮದಲ್ಲಿ ಕೊನೆಗೂ ಹಿಂಜಾವೇ ಮುಖಂಡ ಶ್ರೀಕಾಂತ್ ಶೆಟ್ಟಿ ಭಾಗವಹಿಸಿದ್ದಾರೆ. ಹಿಂದು ಮುಖಂಡನಿಗೆ ಆತಿಥ್ಯ ನೀಡಿದ್ದ ಬಗ್ಗೆ ಎನ್ಎಸ್ ಯುಐ ಕಡೆಯಿಂದ ವಿರೋಧ ಕೇಳಿಬಂದರೂ ಮಂಗಳವಾರ ನಡೆದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಹಿಂಜಾವೇ ಮುಖಂಡ ಶ್ರೀಕಾಂತ್ ಶೆಟ್ಟಿ ಸದ್ದಿಲ್ಲದೆ ಬಂದು ಹೋಗಿದ್ದಾರೆ.
ಮಂಗಳೂರಿನ ಹಂಪನಕಟ್ಟೆಯ ವಿವಿ ಕಾಲೇಜಿನಲ್ಲಿ ಜೂ.23ರಂದು ಪ್ರತಿಭಾ ದಿನಾಚರಣೆ ಹಾಗೂ ಜೂ.24ರಂದು ಕಾಲೇಜು ವಾರ್ಷಿಕೋತ್ಸವ ಆಯೋಜಿಸಲಾಗಿತ್ತು. ಪ್ರತಿಭಾ ದಿನಾಚರಣೆ ಕಾರ್ಯಕ್ರಮದ ಉದ್ಘಾಟನೆಗೆ ಹಿಂದು ಜಾಗರಣ ವೇದಿಕೆ ಮುಖಂಡ ಶ್ರೀಕಾಂತ್ ಶೆಟ್ಟಿ ಕಾರ್ಕಳ ಅವರನ್ನು ಆಹ್ವಾನಿಸಿದ್ದಕ್ಕೆ ಎನ್ಎಸ್ಯುಐ ವಿರೋಧ ವ್ಯಕ್ತಪಡಿಸಿತ್ತು. ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಲ್ಲದೆ, ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿತ್ತು. ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮಂಗಳೂರು ವಿವಿ ಕಾಲೇಜು ಆಡಳಿತವು ಎರಡೂ ಕಾರ್ಯಕ್ರಮಗಳನ್ನು ಮುಂದೂಡಿಕೆ ಮಾಡಿತ್ತು. ಕಾಲೇಜಿನ ಎಬಿವಿಪಿ ನೇತೃತ್ವದ ವಿದ್ಯಾರ್ಥಿ ಸಂಘದಿಂದ ಶ್ರೀಕಾಂತ್ ಶೆಟ್ಟಿಗೆ ಆಹ್ವಾನ ನೀಡಲಾಗಿತ್ತು. ಆದರೆ, ಎನ್ಎಸ್ ಯುಐ ವಿದ್ಯಾರ್ಥಿಗಳು ಶ್ರೀಕಾಂತ್ ಶೆಟ್ಟಿಯನ್ನು ಕರೆಸಿದರೆ, ಕಾಲೇಜಿನಲ್ಲಿ ಕೋಮು ಭಾವನೆ ಕೆರಳಲು ಕಾರಣವಾಗುತ್ತೆ ಎಂದು ಆರೋಪಿಸಿತ್ತು.



ಮುಂದೂಡಿದ್ದ ಕಾರ್ಯಕ್ರಮವನ್ನು ಕಾಲೇಜಿನಲ್ಲಿ ಮಂಗಳವಾರ ನಡೆಸಲಾಗಿದೆ. ಪ್ರತಿಭಾ ದಿನಾಚರಣೆ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಹಿಂಜಾವೇ ಮುಖಂಡ ಶ್ರೀಕಾಂತ್ ಶೆಟ್ಟಿ ಭಾಗಿಯಾಗಿ ಭಾಷಣ ಮಾಡಿದ್ದಾರೆ. ಶಾಂತಿಯುತವಾಗಿ ಕಾರ್ಯಕ್ರಮ ಮುಕ್ತಾಯವಾಗಿದ್ದು ವಿರೋಧ ವ್ಯಕ್ತಪಡಿಸಿದ್ದವರಿಗೆ ಶ್ರೀಕಾಂತ್ ಶೆಟ್ಟಿ ಬಂದು ಭಾಷಣ ಮಾಡಿ ಹೋಗಿದ್ದೇ ಗೊತ್ತಿಲ್ಲ. ಕೋಮು ಪ್ರಚೋದನೆ ಭಾಷಣ ಮಾಡಿದರೆ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಹೇಳಿದ್ದರು. ಕಾರ್ಯಕ್ರಮಕ್ಕೆ ಪೊಲೀಸರು ಭದ್ರತೆಯನ್ನೂ ನೀಡಿದ್ದರು.
Hindu Activist Shrikanth Shetty attends program at Mangalore University organised by ABVP amid NSIU Congress filing complaint to Police and Administration to stop the program as he would deliver hate speech.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm