ಬ್ರೇಕಿಂಗ್ ನ್ಯೂಸ್
02-11-20 10:02 pm Udupi Reporter ಕರಾವಳಿ
ಉಡುಪಿ, ನ. 2: ಶಿರಿಯಾರ ಗ್ರಾಪಂ ವ್ಯಾಪ್ತಿಯ ಕಲ್ಮರ್ಗಿ ಎಂಬಲ್ಲಿನ ರೈಸ್‌ಮಿಲ್ ಒಂದಕ್ಕೆ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು ಅಕ್ರಮವಾಗಿ ದಾಸ್ತಾನು ಇರಿಸಿದ್ದ ಅನ್ನಭಾಗ್ಯ ಯೋಜನೆಯ 600ಕ್ಕೂ ಅಧಿಕ ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಂಡಿದೆ.
ಜಿಲ್ಲೆಯಲ್ಲಿ ಅನ್ನಭಾಗ್ಯದ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡುತ್ತಿರುವ ಕುರಿತು ಮಾಹಿತಿ ಸಂಗ್ರಹಿಸಿದ್ದ ಅಧಿಕಾರಿಗಳು, ದಾಳಿ ನಡೆಸಿದ್ದಾರೆ. ಈ ಅಕ್ಕಿಯನ್ನು ಮನೆ ಮನೆಗಳಿಂದ ಸಂಗ್ರಹಿಸಿ ತಂದು ಇಲ್ಲಿ ದಾಸ್ತಾನು ಇರಿಸಲಾಗಿತ್ತು. ಈ ಅಕ್ಕಿಯನ್ನು ಲಾರಿಗಳಿಗೆ ಲೋಡ್ ಮಾಡಿ ಹಾವೇರಿ ಸೇರಿದಂತೆ ಹೊರಜಿಲ್ಲೆಗಳಿಗೆ ಸಾಗಾಟ ಮಾಡಲು ಯತ್ನ ನಡೆದಿತ್ತು. ದಾಳಿ ವೇಳೆ ಮಿಲ್ ಮಾಲಕ ಪರಾರಿಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ವಶಪಡಿಸಿಕೊಂಡಿರುವ ಅಕ್ಕಿಯ ಒಟ್ಟು ಮೌಲ್ಯ 16.5 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಅಕ್ಕಿ ತುಂಬಲು ಬಂದಿದ್ದ ಮೂವರು ಲಾರಿ ಚಾಲಕರು ಮತ್ತು ಕ್ಲೀನರ್ ಸೇರಿದಂತೆ, 6 ಲಾರಿಗಳು, ಎರಡು 407 ಟೆಂಪೋ, ಒಂದು ಟಾಟಾ ಹಾಗೂ ಮಾರುತಿ ಇಕೋ ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಕಾರ್ಯಾಚರಣೆಯಲ್ಲಿ ಉಡುಪಿ ಆಹಾರ ಇಲಾಖೆಯ ಉಪನಿರ್ದೇಶಕ ಗಜೇಂದ್ರ ವಿ., ಉಡುಪಿ ಆಹಾರ ನಿರೀಕ್ಷಕಿ ಪಾರ್ವತಿ, ಕುಂದಾಪುರ ನಿರೀಕ್ಷಕ ಸುರೇಶ್, ಬ್ರಹ್ಮಾವರ ತಹಶೀಲ್ದಾರ್ ಕಿರಣ್ ಜಿ.ಗೌರಯ್ಯ, ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತ ಪದ್ಮನಾಭ ಮೊದಲಾದವರು ಹಾಜರಿದ್ದರು.
ಬಡವರ ಅಕ್ಕಿ ಉಳ್ಳವರ ಪಾಲು !
ಜಿಲ್ಲೆಯಲ್ಲಿ ಪಡಿತರವನ್ನು ಅಕ್ರಮವಾಗಿ ದಾಸ್ತಾನು, ಮಾರಾಟ ಮಾಡುವ ಜಾಲ ಸಕ್ರಿಯವಾಗಿದ್ದು, ಕಳೆದ ತಿಂಗಳು ಕುಂದಾಪುರ ತಾಲೂಕಿನಲ್ಲಿ ಈ ಜಾಲವನ್ನು ಪತ್ತೆ ಮಾಡಲಾಗಿತ್ತು. ಈಗ ಅಕ್ಕಿಯನ್ನು ಮಾರಾಟ ಮಾಡುವ ಜಾಲ ಪತ್ತೆಯಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
ಪಡಿತರ ಅಕ್ಕಿಯ ಅಕ್ರಮ ದಾಸ್ತಾನು, ಸಾಗಾಟ ಕುರಿತು ಮಾಹಿತಿ ಇದ್ದಲ್ಲಿ ಸಾರ್ವಜನಿಕರು ಜಿಲ್ಲಾಡಳಿತಕ್ಕೆ ತಿಳಿಸಬೇಕು. ಆಗ ಮಾತ್ರ ಇಂತಹ ಜಾಲದ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಲು ಸಾಧ್ಯವಾಗಲಿದೆ ಎಂದು ಹೇಳಿದ್ದಾರೆ.
Officials on Monday November 2 seized several quintals of rice that was being sold illegally at Udupi. The rice was part of the ration under the Anna Bhagya scheme
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 07:33 pm
HK News Desk
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm