Mangalore Rain, School College: ಮುಂಗಾರು ಬಿರುಸು ; ಶಾಲೆ, ಕಾಲೇಜಿಗೆ ರಜೆ ಘೋಷಿಸುವ ಹೊಣೆ ತಹಸೀಲ್ದಾರ್, ಶಿಕ್ಷಣಾಧಿಕಾರಿ ಹೆಗಲಿಗೆ, ಅಗತ್ಯ ಇದ್ದಲ್ಲಿ ರಜೆ ನೀಡಿ ಎಂದ ಜಿಲ್ಲಾಧಿಕಾರಿ 

03-07-23 11:06 pm       Mangalore Correspondent   ಕರಾವಳಿ

ಕರಾವಳಿಯಲ್ಲಿ ಮುಂಗಾರು ಬಿರುಸುಗೊಂಡಿದ್ದು ಹವಾಮಾನ ಇಲಾಖೆ ವ್ಯಾಪಕ ಮಳೆಯಾಗುವ ಎಚ್ಚರಿಕೆ ನೀಡಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಶಾಲೆ, ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಆಯಾ ತಾಲೂಕು ತಹಸೀಲ್ದಾರ್ ಮತ್ತು ಶಿಕ್ಷಣಾಧಿಕಾರಿಗಳಿಗೆ ನೀಡಿದ್ದಾರೆ. 

ಮಂಗಳೂರು, ಜುಲೈ 3:  ಕರಾವಳಿಯಲ್ಲಿ ಮುಂಗಾರು ಬಿರುಸುಗೊಂಡಿದ್ದು ಹವಾಮಾನ ಇಲಾಖೆ ವ್ಯಾಪಕ ಮಳೆಯಾಗುವ ಎಚ್ಚರಿಕೆ ನೀಡಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಶಾಲೆ, ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಆಯಾ ತಾಲೂಕು ತಹಸೀಲ್ದಾರ್ ಮತ್ತು ಶಿಕ್ಷಣಾಧಿಕಾರಿಗಳಿಗೆ ನೀಡಿದ್ದಾರೆ. 

ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಹೆಚ್ಚಿನ ಮಳೆಯಿದ್ದಲ್ಲಿ ಜಿಲ್ಲಾಡಳಿತವೇ ರಜೆ ಘೋಷಣೆ ಮಾಡಲಿದೆ. ಉಳಿದಂತೆ, ಆಯಾ ತಾಲೂಕು ವ್ಯಾಪ್ತಿಯಲ್ಲಿ ಮಳೆ ಹೆಚ್ಚಿದ್ದಲ್ಲಿ ಅಥವಾ ರಜೆಯ ಅಗತ್ಯ ಕಂಡುಬಂದಲ್ಲಿ ಶಿಕ್ಷಣಾಧಿಕಾರಿ ಮತ್ತು ತಹಸೀಲ್ದಾರ್ ನಿರ್ಣಯ ತೆಗೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ದಿನವೂ ಮಳೆಯ ಬಗ್ಗೆ ಮಾಹಿತಿ ಪಡೆದು ಬೆಳಗ್ಗೆ ಆರು ಗಂಟೆ ವೇಳೆಗೆ ಪರಿಶೀಲನೆ ನಡೆಸಿ ನಿರ್ಧಾರಕ್ಕೆ ಬರುವಂತೆ ಸೂಚಿಸಿದ್ದಾರೆ. 

ರಜೆ ಘೋಷಿಸಿದಲ್ಲಿ ಕೂಡಲೇ ಶಾಲಾ ಮಕ್ಕಳ ಪೋಷಕರಿಗೆ ತಿಳಿಸುವ ಕಾರ್ಯ ಮಾಡಬೇಕು. ಇದರ ಸಂಪೂರ್ಣ ಜವಾಬ್ದಾರಿಯನ್ನು ತಾಲೂಕು ಶಿಕ್ಷಣಾಧಿಕಾರಿ ಹೊತ್ತುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ ನೀಡಿದ್ದಾರೆ.

Mangalore Rains, School and college to be declared Holiday on the order of DC or Tahsildar only if necessary says state government order.