Mangalore Rain, Red Alert Issued : ಕರಾವಳಿಗೆ ರೆಡ್ ಅಲರ್ಟ್ ಘೋಷಣೆ ; ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜುಲೈ 5ರಂದು ಶಾಲೆ, ಕಾಲೇಜುಗಳಿಗೆ ರಜೆ  

04-07-23 08:45 pm       Mangalore Correspondent   ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು.5ರ ವರೆಗೆ ರೆಡ್ ಅಲಟ್೯ ಘೋಷಣೆ ಮಾಡಲಾಗಿದೆ.

ಮಂಗಳೂರು, ಜು.4: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು.5ರ ವರೆಗೆ ರೆಡ್ ಅಲಟ್೯ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜು.5ರಂದು ರಜೆ ಘೋಷಿಸಲಾಗಿದೆ.

ಇದಲ್ಲದೆ, ನೀರು ಇರುವ ತಗ್ಗು ಪ್ರದೇಶ ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸುವುದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ, ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯ ಕೈಗೊಳ್ಳಬೇಕು, ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಜಾಗೃತರಾಗಿದ್ದು ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. 

ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿ ಯಾವುದೇ ಸಮಸ್ಯೆಗಳಿಗೆ ಕಂಟ್ರೋಲ್ ರೂಂ 1 0 7 7 ಹಾಗೂ ದೂರವಾಣಿ: 0824 - 2 4 4 2 5 9 0‌ ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಂಗಳವಾರ ಸಂಜೆಯಾಗುತ್ತಿದ್ದಂತೆ ಮಂಗಳೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಬಿರುಸು ಪಡೆದಿದ್ದು ವ್ಯಾಪಕ ಮಳೆಯಾಗುತ್ತಿದೆ. ಒಂದೇ ದಿನದಲ್ಲಿ ಪೂರ್ತಿ ಚಳಿ ಹಿಡಿದ ವಾತಾವರಣ ಸೃಷ್ಟಿಯಾಗಿದೆ.

Mangalore rain, red alert issued, School colleges declared holiday on July 5th. Dc had issues holiday on July 4th but to heavy rains in Mangalore schools and colleges have been ordered to issue holiday on July 4th too.