ಬ್ರೇಕಿಂಗ್ ನ್ಯೂಸ್
05-07-23 06:03 pm Udupi Correspondent ಕರಾವಳಿ
ಉಡುಪಿ, ಜು 05: ಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಕಳೆದೆರಡು ದಿನಗಳಿಂದ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯಲ್ಲಿ ವರುಣನ ಅಬ್ಬರಕ್ಕೆ ಮೂರನೇ ಸಾವು ಸಂಭವಿಸಿದ್ದು, ಜನ ಆತಂಕಕ್ಕೊಳಗಾಗಿದ್ದಾರೆ.
ಭಾರೀ ಮಳೆಗೆ ಉಕ್ಕಿ ಹರಿಯುತ್ತಿರುವ ನದಿಯಲ್ಲಿ ಮುಳುಗಿ ದೇವಾಲಯದ ಅರ್ಚಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಕಮಲಶಿಲೆಯಲ್ಲಿ ನಡೆದಿದೆ. ಶೇಷಾದ್ರಿ ಐತಾಳ್ ( 75) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಕಮಲಶಿಲೆ ಸಮೀಪದ ತಪ್ಪಲು ನಿವಾಸಿ ಶೇಷಾದ್ರಿ ಐತಾಳ್ ಅವರು ಎಂದಿನಂತೆ ಇಂದು ಪ್ರಸಿದ್ಧ ದೇವಾಲಯ ಕಮಲಶಿಲೆಗ ಪೂಜೆ ಮಾಡಲು ಆಗಮಿಸುತ್ತಿದ್ದರು.
ಕಳೆದ ಎರಡು ದಿನಗಳಿಂದ ಸುರಿದ ನಿರಂತರ ಭಾರೀ ಮಳೆಗೆ ಕಮಲಶಿಲೆ ದೇವಳದ ಪಕ್ಕದಲ್ಲಿ ಹರಿಯುವ ಕುಬ್ಜಾ ನದಿ ಉಕ್ಕಿ ಹರಿಯುತ್ತಿದ್ದು, ಅರ್ಚಕರು ಆಯಾ ತಪ್ಪಿ ನದಿಗೆ ಬಿದ್ದು ನೀರು ಪಾಲಾಗಿದ್ದಾರೆ. ನದಿಗೆ ಬಿದ್ದ ಜಾಗದಿಂದ ಸುಮಾರು ನೂರು ಮೀಟರ್ ದೂರಲ್ಲಿ ಶೇಷಾದ್ರಿ ಐತಾಳ್ ಅವರ ಮೃತದೇಹ ಪತ್ತೆಯಾಗಿದ್ದು, ಮುಳುಗು ತಜ್ಞ ಮಂಜುನಾಥ್ ನಾಯಕ್ ತಂಡ ಮೃತದೇಹ ಪತ್ತೆ ಕಾರ್ಯಾಚರಣೆ ನಡೆಸಿದ್ದಾರೆ. ಘಟನೆ ಸಂಬಂಧ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kamalashile temple priest drowned in river after accidentally fall from two wheeler due to heavy rains in Udupi.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm