ಬ್ರೇಕಿಂಗ್ ನ್ಯೂಸ್
06-07-23 07:07 pm Mangalore Correspondent ಕರಾವಳಿ
ಬಂಟ್ವಾಳ, ಜುಲೈ 6: ಪುತ್ತೂರಿನಿಂದ ಮಂಗಳೂರಿಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ತುಂಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದ್ದು ಕಾರಿನಿಂದ ಹೊರಕ್ಕೆ ಎಸೆಯಲ್ಪಟ್ಟ ವಿದ್ಯಾರ್ಥಿನಿ ತೀವ್ರ ಗಾಯಗೊಂಡು ಮೃತಪಟ್ಟಿದ್ದಾರೆ.
ಪುತ್ತೂರು ತಾಲೂಕಿನ ಕೂರ್ನಡ್ಕ ನಿವಾಸಿ ಅಬ್ದುಲ್ ಹಮೀದ್ ಎಂಬವರ ಪುತ್ರಿ, ಮಂಗಳೂರಿನ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿನಿ ಖತೀಜಾ (19) ಮೃತರು. ಇವರು ತಾಯಿ ಜೊತೆಗೆ ಕಾರಿನಲ್ಲಿ ಮಂಗಳೂರಿಗೆ ಬರುತ್ತಿದ್ದರು. ಕಾರು ತುಂಬೆ ಕಳೆದು ರಾಮಲ್ ಕಟ್ಟೆ ತಲುಪಿದಾಗ ಭಾರೀ ಮಳೆ ಸುರಿದಿದ್ದು ಚಾಲಕ ಶಾನ್ ನಿಯಂತ್ರಣಕ್ಕೆ ಸಿಗದೆ ರಸ್ತೆ ಬದಿಯ ಗುಡ್ಡಕ್ಕೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರು ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದಿದೆ. ಈ ವೇಳೆ, ಖತೀಜಾ ಕಾರಿನ ಬಾಗಿಲು ಓಪನ್ ಆಗಿ ಹೊರಗೆ ಎಸೆಯಲ್ಪಟ್ಟಿದ್ದು ತೀವ್ರ ಗಾಯಗೊಂಡಿದ್ದಾರೆ.
ಕೂಡಲೇ ಆಕೆಯನ್ನು ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಮೃತರಾಗಿದ್ದಾರೆ. ಖತೀಜಾ ಮಂಗಳೂರಿನ ಅಲೋಶಿಯಸ್ ಕಾಲೇಜಿನಲ್ಲಿ ಬಿಕಾಂ ಕಲಿಯುತ್ತಿದ್ದರು. ತಾಯಿಗೆ ಅಲರ್ಜಿ ಸಮಸ್ಯೆ ಇದ್ದುದಕ್ಕೆ ಮಗಳ ಜೊತೆಗೆ ವೈದ್ಯರಿಗೆ ತೋರಿಸಲೆಂದು ಮಂಗಳೂರಿಗೆ ಬರುತ್ತಿದ್ದರು. ಈ ವೇಳೆ ಅಪಘಾತವಾಗಿದ್ದು ತಾಯಿ ಮತ್ತು ಕಾರು ಚಾಲಕ ಅಪಾಯ ಇಲ್ಲದೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
Heavy rains in Mangalore, Bantwal Thumbe accident, 19 year old girl student killed on spot. The deceased has been identified as Khadeeja of 2nd Year B.com from St Aloysius College
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 11:27 am
Mangalore Correspondent
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm