ಬ್ರೇಕಿಂಗ್ ನ್ಯೂಸ್
07-07-23 10:48 am Mangalore Correspondent ಕರಾವಳಿ
ಬೆಳ್ತಂಗಡಿ, ಜುಲೈ 07: ಬೆಳ್ತಂಗಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಸೋಲಿಗೆ ನೇರ ಕಾರಣವಾಗಿದ್ದೀರಿ ಬೆಳ್ತಂಗಡಿ ಕ್ಷೇತ್ರ ಸಮಿತಿಯ ಮೂವರು ಕಾಂಗ್ರೆಸ್ ಮುಖಂಡರಿಗೆ ಕೆಪಿಸಿಸಿಯಿಂದ ನೋಟಿಸ್ ಜಾರಿ ಮಾಡಲಾಗಿದೆ. ಅಂತರಿಕ ತನಿಖೆಗಾಗಿ ಜುಲೈ 8ರ ಒಳಗೆ ಖುದ್ದು ಕೆಪಿಸಿಸಿ ಕಚೇರಿಗೆ ಹಾಜರಾಗಲು ನೋಟಿಸ್ ಜಾರಿಯಾಗಿದೆ.
ವಿಧಾನಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರವಾಗಿ ಬಹಿರಂಗ ಪ್ರಚಾರ ಮಾಡದೆ ಪಕ್ಷದ ವಿರುದ್ಧವೇ ಪ್ರಚಾರ ನಡೆಸಿ ಪಕ್ಷದ ಅಭ್ಯರ್ಥಿ ಸೋಲಲು ಕಾರಣರಾಗಿದ್ದೀರಿ ಎಂದು ಕೆಪಿಸಿಸಿ ಕಚೇರಿಗೆ ಲಿಖಿತ ದೂರು ಬಂದಿದೆ. ಈ ಬಗ್ಗೆ ವಿವರಣೆ ಪಡೆಯಲು ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರ ಗೌಡ, ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಂಜನ್ ಗೌಡ ಹಾಗೂ ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶೈಲೇಶ್ ಕುಮಾರ್ ಇವರಿಗೆ ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಶಿಸ್ತು ಕಮಿಟಿಯ ಅಧ್ಯಕ್ಷ ಕೆ.ರಹಮಾನ್ ಖಾನ್ ನೋಟಿಸ್ ನೀಡಿದ್ದಾರೆ. ಪತ್ರ ತಲುಪಿದ 7 ದಿನದೊಳಗಾಗಿ ಅಂದರೆ ಜುಲೈ 8 ರಂದು ಬೆಂಗಳೂರು ಕೆಪಿಸಿಸಿ ಕಚೇರಿಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.
ಗಂಗಾಧರ ಗೌಡ, ರಂಜನ್ ಗೌಡ, ಶೈಲೇಶ್ ಕುಮಾರ್ ಈ ಮೂವರು ಪಕ್ಷದಲ್ಲಿ ಇದ್ದುಕೊಂಡು ಪಕ್ಷದ ವಿರುದ್ಧವಾಗಿ ನಡೆದುಕೊಂಡಿರುವ ಬಗ್ಗೆ ಬೆಳ್ತಂಗಡಿಯಿಂದ ದೂರುಗಳು ಹೋಗಿದ್ದ ಹಿನ್ನಲೆಯಲ್ಲಿ ಇದೀಗ ಕೆ.ಪಿ.ಸಿಸಿ ಕ್ರಮಕ್ಕೆ ಮುಂದಾಗಿದೆ ಎಂದು ತಿಳಿದುಬಂದಿದೆ.
Karnataka Pradesh Congress disciplinary action committee has served notices to three Congress leaders of Beltangady taluk directing them to attend the internal inquiry of the party on the allegations that they did not openly campaign in favour of Congress's official candidate during the recent assembly elections and were also involved in anti-party activities.
20-07-25 04:24 pm
Bangalore Correspondent
Rcb, Bangalore: ಪೊಲೀಸರು 'ಆರ್ಸಿಬಿ ಸೇವಕರು' ಎಂಬ...
19-07-25 03:05 pm
ಎಲ್ಲ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ತಲಾ 50 ಕೋಟಿ ಅ...
18-07-25 10:59 pm
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
20-07-25 04:47 pm
HK News Desk
Kerala Nurse Yemen; ನರ್ಸ್ ನಿಮಿಷಾ ಉಳಿವಿಗೆ ಗಲ್ಫ...
16-07-25 09:58 pm
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
20-07-25 03:06 pm
Mangaluru Correspondent
MRPL, MP Brijesh Chowta, Mangalore: MRPL ಹಸಿರ...
19-07-25 10:01 pm
Mangalore, Derlakatte Raid: ನಿಯಮ ಉಲ್ಲಂಘಿಸಿ ಕಾ...
19-07-25 07:18 pm
RCB Stampede, DySP Anupama Shenoy: ಕಾಲ್ತುಳಿತ...
19-07-25 06:51 pm
Dharmasthala Case, Santosh Kumar, CPIM: ಧರ್ಮಸ...
19-07-25 06:14 pm
20-07-25 12:16 pm
HK News Desk
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm