ಬ್ರೇಕಿಂಗ್ ನ್ಯೂಸ್
03-11-20 01:55 pm Mangalore Correspondent ಕರಾವಳಿ
ಪುತ್ತೂರು, ನವೆಂಬರ್ 03: ಪುತ್ತೂರು ನಗರಸಭೆ ಅಧ್ಯಕ್ಷರಾಗಿ ಬಿಜೆಪಿಯ ಕೆ. ಜೀವಂಧರ್ ಜೈನ್ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ವಿದ್ಯಾ ಆರ್. ಗೌರಿ ಅವಿರೋಧ ಆಯ್ಕೆಯಾಗಿದ್ದಾರೆ. ಪುತ್ತೂರು ಉಪ ವಿಭಾಗಾಧಿಕಾರಿ ಡಾ. ಯತೀಶ್ ಉಳ್ಳಾಲ್ ಚುನಾವಣಾಧಿಕಾರಿಯಾಗಿ ಪ್ರಕ್ರಿಯೆ ನಡೆಸಿಕೊಟ್ಟರು. ನಗರಸಭಾ ಪೌರಾಯುಕ್ತೆ ರೂಪಾ ಟಿ ಶೆಟ್ಟಿ ಚುನಾವಣಾ ಪ್ರಕ್ರಿಯೆಯಲ್ಲಿ ಸಹಕರಿಸಿದರು.
31 ಸದಸ್ಯ ಬಲದ ಪುತ್ತೂರು ನಗರಸಭೆಯಲ್ಲಿ 25 ಬಿಜೆಪಿ, 5 ಕಾಂಗ್ರೆಸ್ ಹಾಗೂ ಓರ್ವ ಎಸ್‍ಡಿಪಿಐ ಸದಸ್ಯರಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಜೀವಂಧರ್ ಜೈನ್ ಮತ್ತು ಕಾಂಗ್ರೆಸ್‍ನಿಂದ ರಾಬಿನ್ ತಾವ್ರೋ ಸ್ಪರ್ಧಿಸಿದ್ದರು. ಜೀವಂಧರ್ ಜೈನ್ ಅವರು ಶಾಸಕರ, ಸಂಸದರ ಮತಗಳು ಸೇರಿದಂತೆ ಒಟ್ಟು 27 ಮತಗಳನ್ನು ಪಡೆದು ವಿಜಯ ಸಾಧಿಸಿದರು. ರಾಬಿನ್ ತಾವ್ರೋ ಅವರಿಗೆ 3 ಮತಗಳು ಲಭಿಸಿದವು. ಕಾಂಗ್ರೆಸಿನ ಇಬ್ಬರು ಸದಸ್ಯರು ಗೈರು ಹಾಜರಾಗಿದ್ದರು. ಎಸ್‍ಡಿಪಿಐ ಸದಸ್ಯೆ ತಟಸ್ಥರಾಗಿದ್ದರು. ಉಪಾಧ್ಯಕ್ಷರಾಗಿ ಕಾಂಗ್ರೆಸ್‍ನಿಂದ ಯಾರೂ ಸ್ಪರ್ಧಿಸದ ಹಿನ್ನಲೆಯಲ್ಲಿ ಬಿಜೆಪಿಯ ವಿದ್ಯಾಗೌರಿ ಅವಿರೋಧವಾಗಿ ಆಯ್ಕೆಯಾದರು.
ಚುನಾವಣಾ ಪ್ರಕ್ರಿಯೆಯ ಬಳಿಕ ನಡೆದ ಅಭಿನಂದನಾ ಕಾರ್ಯಕ್ರಮ ನಡೆಯಿತು. ಸಂಸದ ನಳಿನ್ ಕುಮಾರ್ ಮತ್ತು ಶಾಸಕ ಸಂಜೀವ ಮಠಂದೂರು ನೂತನ ಅಧ್ಯಕ್ಷ ಉಪಾಧ್ಯಕ್ಷರಿಗೆ ಶುಭ ಹಾರೈಸಿದರು. ಪುತ್ತೂರು ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲ ಬಿಜೆಪಿ ಅಧ್ಯಕ್ಷ ಪಿ.ಜಿ. ಜಗನ್ನಿವಾಸ್ ರಾವ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಕ್ಯಾಂಪ್ಕೋ ನಿರ್ದೇಶಕ ಚನಿಲ ತಿಮ್ಮಪ್ಪ ಶೆಟ್ಟಿ, ಬಿಜೆಪಿ ಮುಂದಾಳುಗಳಾದ ಗೋಪಾಲಕೃಷ್ಣ ಹೇರಳೆ, ಎಸ್. ಅಪ್ಪಯ್ಯ ಮಣಿಯಾಣಿ, ಆರ್.ಸಿ. ನಾರಾಯಣ ಮತ್ತಿತರರು ಉಪಸ್ಥಿತರಿದ್ದರು.
K Jeevandhar Jain of the BJP was elected as the president of Puttur city municipality while Vidya R Gowri of the same party was elected unopposed to the post of the vice president on Monday November 2.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm