ಬ್ರೇಕಿಂಗ್ ನ್ಯೂಸ್
08-07-23 10:38 pm Mangalore Correspondent ಕರಾವಳಿ
ಬಂಟ್ವಾಳ, ಜುಲೈ 8: ಗುಡ್ಡ ಜರಿದು ಮಹಿಳೆ ಬಲಿಯಾದ ಸಜಿಪಮುನ್ನೂರು ಗ್ರಾಮದ ನಂದಾವರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿದ್ದು ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
ಮಾಜಿ ಸಚಿವ ರಮಾನಾಥ ರೈ ಜೊತೆಗೆ ಸಚಿವರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು ಸ್ಥಳೀಯರ ಜೊತೆಗೆ ಮಾತುಕತೆ ನಡೆಸಿದರು. ಭೇಟಿ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಸಚಿವ ದಿನೇಶ್ ಗುಂಡೂರಾವ್, ಈಗಾಗಲೇ ಸರಕಾರದಿಂದ ಮೃತಪಟ್ಟ ಕುಟುಂಬಕ್ಕೆ ಪರಿಹಾರ ನೀಡಲಾಗಿದೆ. ಮನೆ ರಿಪೇರಿಗೆ ಕೂಡ ಪರಿಹಾರ ಕಲ್ಪಿಸುವ ಬಗ್ಗೆ ವ್ಯವಸ್ಥೆ ಮಾಡಲು ಸೂಚಿಸಿದ್ದೇನೆ. ಅದಕ್ಕೆ ಏನೆಲ್ಲ ಆಗಬೇಕು ಎಂದು ಸ್ಥಳೀಯ ಅಧಿಕಾರಿಗಳಲ್ಲಿ ವರದಿ ಕೇಳಿದ್ದೇನೆ ಎಂದರು.




ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಹೆಣ್ಮಗಳ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರಕಾರ ಭರಿಸಲಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಅವರನ್ನು ಆಸ್ಪತ್ರೆಗೆ ಹೋಗಿ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದ್ದೇನೆ. ಘಟನೆ ನಡೆದ ಪ್ರದೇಶದಲ್ಲಿ ಇನ್ನೂ ಹಲವಾರು ಮನೆಗಳು ಅಪಾಯದಲ್ಲಿವೆ. ಈ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗಿದ್ದು ಅಪಾಯಕ್ಕೀಡಾದವರನ್ನು ಸ್ಥಳಾಂತರಿಸಲು ಜಿಲ್ಲಾಡಳಿತಕ್ಕೆ ಸೂಚಿಸಿದ್ದೇನೆ. ಗುಡ್ಡ ಕುಸಿತ ಆಗದಂತೆ ತಡೆಗೋಡೆ ನಿರ್ಮಾಣದ ಬಗ್ಗೆ ಚಿಂತನೆ ನಡೆಸಲಾಗಿದೆ.
ತಡೆಗೋಡೆ ನಿರ್ಮಾಣಕ್ಕೆ ಕ್ರಿಯಾಯೋಜನೆ ತಯಾರಿಸಲು ಜಿಲ್ಲಾಧಿಕಾರಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ. ನಂದಾವರದಲ್ಲಿ ನಿನ್ನೆ ಬೆಳಗ್ಗೆ ನಡೆದಿದ್ದ ಗುಡ್ಡ ಕುಸಿತ ಘಟನೆಯಲ್ಲಿ ಮನೆಯೊಳಗೆ ಸಿಲುಕಿದ್ದ ಮಹಿಳೆ ಝರೀನಾ(46) ಸಾವನ್ನಪ್ಪಿದ್ದರು. ಝರೀನಾ ಅವರ ಪುತ್ರಿ ಶಫಾ(20) ರನ್ನು ಸ್ಥಳೀಯರು ಸೇರಿ ರಕ್ಷಣೆ ಮಾಡಿದ್ದರು.
ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶನಿವಾರ ಬೆಳ್ತಂಗಡಿಯಲ್ಲಿ ಪಕ್ಷದ ಕಾರ್ಯಕರ್ತರ ಸಭೆ ನಡೆಸಿದ್ದರು. ಇದಕ್ಕೂ ಮುನ್ನ ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Rain related mishaps in Mangalore Dinesh Gundu Rao Karnataka Minister warns govt officials against laxity. Officials dealing with rain-related calamities will be directly responsible for any lapses on their part in taking precautionary measures in affected areas, Dakshina Kannada district-in-charge Minister Dinesh Gundu Rao has said.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm