ಬ್ರೇಕಿಂಗ್ ನ್ಯೂಸ್
10-07-23 07:57 pm Mangalore Correspondent ಕರಾವಳಿ
ಮಂಗಳೂರು, ಜುಲೈ 10: ದಿಗಂಬರ ಜೈನ ಮುನಿಯನ್ನು ಹತ್ಯೆಗೈದ ಘಟನೆಯನ್ನು ಖಂಡಿಸಿ ಮಂಗಳೂರಿನಲ್ಲಿ ಜೈನ ಸಮಾಜದ ಪ್ರತಿನಿಧಿಗಳು ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. ಅಲ್ಲದೆ, ಕೃತ್ಯದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದ್ದಾರೆ.
ಮೂಡುಬಿದ್ರೆ ಬಸದಿಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನೇತೃತ್ವದಲ್ಲಿ ನಗರದ ಮಿನಿ ವಿಧಾನಸೌಧ ಬಳಿ ಸೇರಿದ ಸಮುದಾಯದ ಪ್ರತಿನಿಧಿಗಳು ಜಿಲ್ಲಾಧಿಕಾರಿ ಕಚೇರಿ ವರೆಗೆ ಮೌನ ಮೆರವಣಿಗೆ ನಡೆಸಿದ್ದಾರೆ. ಯಾವುದೇ ಲೌಕಿಕ ಸಂಬಂಧಗಳನ್ನು ಇಟ್ಟುಕೊಳ್ಳದೆ, ಕೇವಲ ಆಧ್ಯಾತ್ಮ ಜೀವನ ನಡೆಸುತ್ತಿದ್ದ ದಿಗಂಬರ ಜೈನ ಮುನಿಗಳನ್ನು ಈ ರೀತಿ ಹತ್ಯೆ ನಡೆಸಿರುವುದು ಅತ್ಯಂತ ಹೇಯ ಕೃತ್ಯ. ಕೃತ್ಯದಲ್ಲಿ ಯಾರೇ ಭಾಗಿಯಾಗರಲಿ, ಅವರಿಗೆ ಶೀಘ್ರದಲ್ಲಿ ಗಲ್ಲು ಶಿಕ್ಷೆಯಾಗಬೇಕು. ಮುಂದೆ ಈ ರೀತಿಯ ಕೃತ್ಯ ಆಗದಂತೆ ನೋಡಿಕೊಳ್ಳಬೇಕು. ಅದಕ್ಕಾಗಿ ಜೈನ ಸಮಾಜದ ಸಂತರಿಗೆ ಭದ್ರತೆ ನೀಡಬೇಕು ಎಂದು ಇದೇ ವೇಳೆ ಮಾತನಾಡಿದ ಜೈನ್ ಮಿಲನ್ ಮಾಜಿ ಅಧ್ಯಕ್ಷ ಪುಷ್ಪರಾಜ್ ಜೈನ್ ಆಗ್ರಹಿಸಿದ್ದಾರೆ.


ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮಾತನಾಡಿ, ನಾಗರಿಕ ಸಮಾಜ ತಲೆತಗ್ಗಿಸುವ ರೀತಿಯ ಕೃತ್ಯ ನಡೆದಿದೆ. ಅಮಾಯಕ ಅದರಲ್ಲೂ ಎಲ್ಲವನ್ನೂ ಬಿಟ್ಟ ದಿಗಂಬರನಾಗಿದ್ದ ಸಂತರೊಬ್ಬರನ್ನು ಕೊಲ್ಲುವುದು ಧರ್ಮಕ್ಕಾಗಿ ಜೀವನ ಸವೆಸುತ್ತಿರುವ ಸಂತರಲ್ಲಿ ಭಯ ಮೂಡಿಸಿದೆ. ಇದಕ್ಕಾಗಿ ಜೈನ ಸಮಾಜದ ಆಶ್ರಮಗಳಲ್ಲಿ ಸಿಸಿಟಿವಿಗಳನ್ನು ಅಳವಡಿಸಬೇಕು. ಕೃತ್ಯದ ತನಿಖೆ ಬಗ್ಗೆ ವಿಶೇಷ ತನಿಖಾ ತಂಡ ಮತ್ತು ವಿಶೇಷ ನ್ಯಾಯಾಧೀಶರನ್ನು ನೇಮಕ ಮಾಡಬೇಕು ಎಂದು ಹೇಳಿದರು.


ಜೈನ್ ಮಿಲನ್ ಸಂಘದ ಸುದರ್ಶನ್ ಜೈನ್ ಪ್ರಸ್ತಾವಿಸಿ, ನಾವು ಈ ಬಗ್ಗೆ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸುತ್ತೇವೆ. ಘಟನೆ ಬಗ್ಗೆ ಸಮಗ್ರ ತನಿಖೆ ನಡೆಯಬೇಕು. ಜೊತೆಗೆ, ಜೈನ ಸಮುದಾಯದ ಸಂತರಿಗೆ ಮುಂದೆ ಯಾವತ್ತೂ ಈ ರೀತಿಯಾಗದಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದರು. ಪ್ರತಿಭಟನಾ ಮೆರವಣಿಗೆಯಲ್ಲಿ ಮಹಿಳೆಯರು ಸೇರಿದಂತೆ 50ಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು.
Jain Monk Murder, Jain Community in Mangalore hold protest, demand hanging of Accused. The protest was lead by Moodabidri Basati Priest.Days after the murder of Jain seer Acharya Kamakumar Nandi Maharaj in Karnataka’s Belagavi district, the BJP and a few right-wing groups Monday demanded a Central Bureau Investigation (CBI) probe into the crime.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm