Mangalore, Kuldeep Kumar Jain: ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ಸಂದೇಶ ; ಮಂಗಳೂರಿನಲ್ಲಿ ಒಂದೇ ತಿಂಗಳಲ್ಲಿ 21 ಪ್ರಕರಣ

11-07-23 11:05 pm       Mangalore Correspondent   ಕರಾವಳಿ

ಧರ್ಮದ ವಿಚಾರ, ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ರೀತಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಎಚ್ಚರಿಸಿದ್ದಾರೆ.

ಮಂಗಳೂರು, ಜುಲೈ 11: ಧರ್ಮದ ವಿಚಾರ, ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ರೀತಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಎಚ್ಚರಿಸಿದ್ದಾರೆ.

ಈಗಾಗಲೇ ಕಳೆದ ಒಂದು ತಿಂಗಳಲ್ಲಿ ಈ ರೀತಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 21 ಪ್ರಕರಣಗಳನ್ನು ದಾಖಲಿಸಲಾಗಿದೆ. ವಾಟ್ಸಪ್, ಫೇಸ್ಬುಕ್, ಇನ್ ಸ್ಟಾ ಗ್ರಾಮ್, ಟ್ವಿಟರ್ ಇನ್ನಿತರ ಜಾಲತಾಣದಲ್ಲಿ ಪೋಸ್ಟ್ ಹಾಕುವ ಬಗ್ಗೆ ಪೊಲೀಸ್ ಇಲಾಖೆ ನಿಗಾ ಇಡುತ್ತದೆ. ಯಾವುದೇ ರೀತಿಯ ಆಕ್ಷೇಪಾರ್ಹ ಪೋಸ್ಟ್ ಹಾಕಿದಲ್ಲಿ, ಅವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

ಕೋಮು ಸೌಹಾರ್ದಕ್ಕೆ ಧಕ್ಕೆ ತರುವಂತಹ ಸಂದೇಶಗಳು ಹೆಚ್ಚಾಗಿ ಹರಿದಾಡುತ್ತಿರುವುದು ಕಂಡುಬರುತ್ತಿದೆ. ನಗರದ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಈ ಬಗ್ಗೆ ಪೊಲೀಸರು ನಿಗಾ ವಹಿಸುತ್ತಾರೆ. ಧರ್ಮದ ವಿಚಾರವಾಗಿ ಪರ- ವಿರೋಧ ಸಂದೇಶಗಳನ್ನು ಪೋಸ್ಟ್, ಶೇರ್ ಮತ್ತು ಕಮೆಂಟ್ ಮಾಡುವ ವ್ಯಕ್ತಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಇಂತಹ ಅಪರಾಧಗಳನ್ನು ಪುನರಾವರ್ತಿಸಿದಲ್ಲಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಕಮಿಷನರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Communial post on Social media, 21 cases booked so far in Magalore says kuldeep kumar jain Police Commissioner.