ಬ್ರೇಕಿಂಗ್ ನ್ಯೂಸ್
12-07-23 02:15 pm Mangalore Correspondent ಕರಾವಳಿ
ಬೆಳ್ತಂಗಡಿ, ಜುಲೈ 12: ದೈವದ ಜಾಗದ ವಿಚಾರದಲ್ಲಿ ತಗಾದೆ ನಡೆದು ಕೊರಗಜ್ಜನ ಗುಡಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆದ ಘಟನೆ ಬೆಳ್ತಂಗಡಿ ತಾಲೂಕು ವೇಣೂರು ಸನಿಹದ ಬಾಡಾರುವಿನಲ್ಲಿ ನಡೆದಿದೆ.
ಬಾಡಾರಿನ ಕೊರಗಕಲ್ಲು ಎಂಬಲ್ಲಿ ತುಳುನಾಡಿನ ಕಾರಣಿಕ ದೈವ ಕೊರಗಜ್ಜನ ಗುಡಿಯ ವಿಚಾರದಲ್ಲಿ ನಡೆದ ಗಲಾಟೆ ತಾರಕಕ್ಕೇರಿ, ಗುಡಿಯ ಬದಿಯಲ್ಲಿರುವ ನಿವಾಸಿ ಗುಡಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾನೆ.
ಸಾರ್ವಜನಿಕರು ಸ್ವಾಮಿ ಕೊರಗಜ್ಜ ಸಮಿತಿ ರಚಿಸಿ ವರ್ಷಂಪ್ರತಿ ಕೊರಗಜ್ಜನಿಗೆ ಕೋಲ, ಅಗೇಲು ನೀಡಿ ಆರಾಧನೆ ಮಾಡುತ್ತಿದ್ದರು. ಆದರೆ ಕೊರಗಜ್ಜನ ಗುಡಿಯಿರುವ ಸ್ಥಳದ ಬಗ್ಗೆ ಸ್ಥಳೀಯ ವ್ಯಕ್ತಿಯೊಬ್ಬರು ಅದು ತನ್ನ ಜಾಗವೆಂದು ಆಕ್ಷೇಪ ವ್ಯಕ್ತಪಡಿಸಿದ್ದರು. ಕಳೆದ ಕೆಲವು ವರ್ಷಗಳಿಂದ ಸ್ವಾಮಿ ಕೊರಗಜ್ಜ ಸಮಿತಿ ಹಾಗೂ ಈ ವ್ಯಕ್ತಿಯ ನಡುವೆ ತಗಾದೆ ಏರ್ಪಟ್ಟಿತ್ತು. ಇಲ್ಲಿ ಆರಾಧನೆಗೆ ಅವಕಾಶ ನೀಡುವುದಿಲ್ಲ ಎಂದು ಆ ವ್ಯಕ್ತಿ ಅಡ್ಡಿ ಪಡಿಸುತ್ತಿದ್ದರು. ಆದರೆ ಪ್ರತೀ ವರ್ಷವರ್ಷ ತಗಾದೆ ಏರ್ಪಟ್ಟಾಗ ಸಂಧಾನವಾಗಿ ಕೊನೆಗೆ ಆರಾಧನೆ ನಡೆಯುತ್ತಿತ್ತು.
ಇದೀಗ ಅಲ್ಲಿಯೇ ಮತ್ತೊಂದು ಕೊರಗಜ್ಜನ ಗುಡಿ ಕಟ್ಟಲು ವ್ಯವಸ್ಥೆ ಮಾಡಿದ್ದರು. ಆದರೆ ಆ ವ್ಯಕ್ತಿ ಇದಕ್ಕೂ ಆಕ್ಷೇಪ ವ್ಯಕ್ತಪಡಿಸಿದಾಗ ಸಮಿತಿಯವರು ಪೊಲೀಸ್ ದೂರು ದಾಖಲಿಸಿದ್ದರು.
ಇದರಿಂದ ಆಕ್ರೋಶಿತ ಸ್ಥಳೀಯ ವ್ಯಕ್ತಿ ಮಂಗಳವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಕೊರಗಜ್ಜನ ಗುಡಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾರೆ. ಈ ಕುರಿತು ಸ್ವಾಮಿ ಕೊರಗಜ್ಜ ಸಮಿತಿ ವೇಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಆರೋಪಿ ಮೇಲೆ ಕ್ರಮ ಕೈಗೊಂಡು ಅದೇ ಸ್ಥಳದಲ್ಲಿ ಕೊರಗಜ್ಜನ ಗುಡಿಯ ಪುನರ್ ನಿರ್ಮಾಣ ಮಾಡಿ ಆರಾಧನೆ ನಡೆಸಲು ಅವಕಾಶ ನೀಡಬೇಕೆಂದು ಮನವಿ ಮಾಡಿದ್ದಾರೆ.
Mangalore Land dispute fight, man sets Koragajja Sannidhi in fire at Venur, Belthangady.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm