ಬ್ರೇಕಿಂಗ್ ನ್ಯೂಸ್
12-07-23 07:21 pm Mangalore Correspondent ಕರಾವಳಿ
ಉಳ್ಳಾಲ, ಜು.12: ಸಾವಿರಾರು ವಿದ್ಯಾರ್ಥಿಗಳು ಜ್ಞಾನಾರ್ಜನೆಗೈಯುತ್ತಿರುವ ಶಾಲೆಯ ಆವರಣದ ಪಕ್ಕದಲ್ಲೇ ಬಾರ್ & ರೆಸ್ಟೋರೆಂಟ್ ಒಂದು ದಿಢೀರನೆ ಹೆಡೆ ಎತ್ತಿದ್ದು ಮದ್ಯ ಕೇಂದ್ರವನ್ನು ಸ್ಥಳಾಂತರಿಸುವಂತೆ ವಿದ್ಯಾರ್ಥಿಗಳು ಜಿಟಿ, ಜಿಟಿ ಮಳೆಯ ನಡುವಲ್ಲೂ ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಾಳೆಪುಣಿ ಗ್ರಾಮದ ಪುಣ್ಯಕೋಟಿ ನಗರದ ಶಾರದಾ ಗಣಪತಿ ವಿದ್ಯಾಕೇಂದ್ರದ ಆವರಣದ ಬಳಿಯಲ್ಲೇ ಬಾರ್& ರೆಸ್ಟೋರೆಂಟ್ ನಿರ್ಮಾಣಗೊಂಡಿದ್ದು, ನಿಯಮಗಳನ್ನು ಗಾಳಿಗೆ ತೂರಿ ಈ ಬಾರಿಗೆ ಸ್ಥಳೀಯ ಪಂಚಾಯತ್ ಆಡಳಿತವು ನಿರಾಕ್ಷೇಪಣಾ ಪತ್ರ ನೀಡಿರುವುದಾಗಿ ಆರೋಪಗಳು ಕೇಳಿಬಂದಿವೆ. ಬಾರ್ ಅನ್ನು ಕೂಡಲೇ ಸ್ಥಳಾಂತರಿಸುವಂತೆ ಆಗ್ರಹಿಸಿ ಶಾರದಾ ವಿದ್ಯಾಗಣಪತಿ ಶಾಲೆಯ ನೂರಾರು ವಿದ್ಯಾರ್ಥಿಗಳು ಬಾಳೆಪುಣಿ ಪಂಚಾಯತ್ ಗೆ ಮುತ್ತಿಗೆ ಹಾಕಿ ಪಂಚಾಯತ್ ಅಧ್ಯಕ್ಷೆ ರಝಿಯಾ ಅವರಿಗೆ ಮನವಿ ಸಲ್ಲಿಸಿದರು.
ಶಾರದಾ ವಿದ್ಯಾಗಣಪತಿ ಶಾಲಾ ವಿದ್ಯಾರ್ಥಿನಿ ರಶ್ಮಿತಾ ಮಾತನಾಡಿ ಶಾಲಾ ಆವರಣದ ನೂರು ಮೀಟರ್ ವ್ಯಾಪ್ತಿಯೊಳಗಡೆ ಯಾವುದೇ ಮಾದಕ ಪದಾರ್ಥಗಳನ್ನ ಮಾರುವಂತಿಲ್ಲ ಎಂದು ಕಾನೂನು ಇದೆ. ಆದರೆ ಇಲ್ಲಿ ನಿಯಮಗಳನ್ನೆಲ್ಲ ಉಲ್ಲಂಘಿಸಿ ಬಾರ್ ನಿರ್ಮಿಸಲಾಗಿದ್ದು ಇದರಿಂದ ವಿದ್ಯಾರ್ಥಿಗಳ ಮೇಲೆ ಕೆಟ್ಟ ಪರಿಣಾಮ ಬೀರೋದು ಖಂಡಿತ ಎಂದಳು.
ಶಾರದಾ ಗಣಪತಿ ವಿದ್ಯಾಕೇಂದ್ರದ ಸಂಚಾಲಕ ಟಿ.ಜಿ.ರಾಜಾರಾಂ ಭಟ್ ಮಾತನಾಡಿ ಸರಕಾರದ ಮಾರ್ಗಸೂಚಿಗಳನ್ನ ಅವಗಣನೆ ಮಾಡಿ, ಸಾರ್ವಜನಿಕ ಆಕ್ಷೇಪಗಳಿಗೆ ಅವಕಾಶ ನೀಡದೆ ಪಂಚಾಯತ್ ಆಡಳಿತವು ಬಾರ್ ನಿರ್ಮಾಣಕ್ಕೆ ತರಾತುರಿಯಲ್ಲಿ ನಿರಾಕ್ಷೇಪಣಾ ಪತ್ರ ನೀಡಿರುವುದು ಖಂಡನೀಯ. ಸರಕಾರದ ಮಾರ್ಗಸೂಚಿ ಪ್ರಕಾರ ಶಾಲಾ ಆವರಣದ 100 ಮೀಟರ್ ಅಂತರದೊಳಗೆ ಮದ್ಯದಂಗಡಿ ತೆರೆಯಲು ಅವಕಾಶ ಇರೋದಿಲ್ಲ. ಇಲ್ಲಿ ಶಾಲಾ ದ್ವಾರದ 53 ಮೀಟರ್ ಮತ್ತು ಶಾಲಾ ಆವರಣದ 13 ಮೀಟರ್ ಅಂತರದಲ್ಲಿ ಬಾರ್ ನಿರ್ಮಿಸಿ ನಿಯಮಗಳನ್ನ ಗಾಳಿಗೆ ತೂರಲಾಗಿದೆ. ಪಂಚಾಯತ್ ಅಧ್ಯಕ್ಷರು ಮುಂದಿನ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಬಾರ್ ಸ್ಥಳಾಂತರಿಸದಿದ್ದರೆ ಮುಂದೆ ಪ್ರಜಾಪ್ರಭುತ್ವದಡಿಯ ಎಲ್ಲಾ ಹೋರಾಟಕ್ಕೂ ಶಾಲಾಡಳಿತ ತಯಾರಾಗಿದೆ ಎಂದರು. ವಿವಾದಿತ ಬಾರ್ & ರೆಸ್ಟೋರೆಂಟ್ ಮುಂದೆಯೂ ಜಮಾಯಿಸಿದ ವಿದ್ಯಾರ್ಥಿಗಳು ತಮ್ಮ ಆಕ್ರೋಶ ಹೊರ ಹಾಕಿದರು.
Mangalore Permission to open Bar and Restaurant opposite to Sharadha school, students Ghearo Balepuni Gram Panchayat opposing to cancel the permission. Students Ghearo office amid heavy rains.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 11:27 am
Mangalore Correspondent
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm