Udupi DC Vidyakumari: ಉಡುಪಿ ಜಿಲ್ಲೆಗೆ ಮಹಿಳಾ ಮಣಿಯರ ಅಧಿಕಾರ ; ಜಿಲ್ಲಾಧಿಕಾರಿ ಸ್ಥಾನಕ್ಕೆ ಮಂಗಳೂರು ಮೂಲದ ವಿದ್ಯಾಕುಮಾರಿ ನೇಮಕ 

13-07-23 05:38 pm       Udupi Correspondent   ಕರಾವಳಿ

ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2014ನೇ ಬ್ಯಾಚ್ ಐಎಎಸ್‌ ಅಧಿಕಾರಿ ವಿದ್ಯಾಕುಮಾರಿ ಕೆ. ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಕೂರ್ಮ ರಾವ್ ವರ್ಗಾವಣೆಗೊಂಡಿದ್ದಾರೆ.

ಉಡುಪಿ, ಜುಲೈ 13: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2014ನೇ ಬ್ಯಾಚ್ ಐಎಎಸ್‌ ಅಧಿಕಾರಿ ವಿದ್ಯಾಕುಮಾರಿ ಕೆ. ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಕೂರ್ಮ ರಾವ್ ವರ್ಗಾವಣೆಗೊಂಡಿದ್ದಾರೆ.

ತುಮಕೂರಿನಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದ ವಿದ್ಯಾಕುಮಾರಿ ಈ ಹಿಂದೆ ಉಡುಪಿಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಇದೀಗ ಅವರನ್ನು ಉಡುಪಿ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಹಿಂದಿನ ಜಿಲ್ಲಾಧಿಕಾರಿ ಕೂರ್ಮ ರಾವ್ 2021ರ ಆಗಸ್ಟ್‌ 29ರಂದು ಉಡುಪಿ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. 

ವಿದ್ಯಾಕುಮಾರಿ ಅವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಪಾವೂರು ಗ್ರಾಮದವರು. 2014ನೇ ಬ್ಯಾಚ್‌ ಐಎಎಸ್ ಅಧಿಕಾರಿಯಾಗಿದ್ದರೂ, ಅವರನ್ನು ಈವರೆಗೂ ಜಿಲ್ಲಾಧಿಕಾರಿ ಹುದ್ದೆಗೆ ಭಡ್ತಿ ನೀಡಿರಲಿಲ್ಲ. ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಾಗಿದ್ದು, ಇದೀಗ ಮಹಿಳಾ ಅಧಿಕಾರಿಯನ್ನೇ ಜಿಲ್ಲಾಧಿಕಾರಿಯನ್ನಾಗಿ ನೇಮಕ ಮಾಡಿಕೊಂಡಿದ್ದಾರೆ‌. ಆಮೂಲಕ ಉಡುಪಿಯಲ್ಲಿ ಆಡಳಿತ ವ್ಯವಸ್ಥೆಗೆ ಮಹಿಳಾ ಬಲ ಸಿಕ್ಕಂತಾಗಿದೆ.

Mangalore Pavoor Native Vidyakumari appointed DC of Udupi, Kurma Rao transferred. Vidyakumari has earlier served as the additional deputy commissioner and additional district magistrate of Udupi district.