ಬ್ರೇಕಿಂಗ್ ನ್ಯೂಸ್
19-07-23 10:32 pm Mangalore Correspondent ಕರಾವಳಿ
ಬೆಳ್ತಂಗಡಿ, ಜುಲೈ 19: ಸೌಜನ್ಯಾ ಕೊಲೆ ಪ್ರಕರಣದ ಬಗ್ಗೆ ಮರು ತನಿಖೆ ಒತ್ತಾಯಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆದಿರುವುದು, ಧರ್ಮಸ್ಥಳದ ಹೆಸರನ್ನು ಎಳೆದು ತಂದು ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಧರ್ಮಸ್ಥಳದಲ್ಲಿ ವೀರೇಂದ್ರ ಹೆಗ್ಗಡೆಯವರು ತಮ್ಮ ವ್ಯಾಪ್ತಿಯ ವಿವಿಧ ಸಂಸ್ಥೆಗಳ ಮುಖ್ಯಸ್ಥರನ್ನು ಕರೆದು ಸಭೆ ನಡೆಸಿದ್ದಾರೆ. ಸಭೆಯಲ್ಲಿ ಪ್ರಸ್ತುತ ವಿದ್ಯಮಾನಗಳು, ಸೌಜನ್ಯಾ ಕೊಲೆ ಪ್ರಕರಣದ ಹೆಸರಲ್ಲಿ ಕ್ಷೇತ್ರದ ಹೆಸರು ಕೆಡಿಸುತ್ತಿರುವ ವಿಚಾರದ ಬಗ್ಗೆ ಹೆಗ್ಗಡೆ ಮಾತನ್ನಾಡಿದ್ದಾರೆ.
ಕ್ಷೇತ್ರದಲ್ಲಿ 60 ವರ್ಷಗಳಲ್ಲಿ ಬಹಳ ಬದಲಾವಣೆಗಳಾಗಿವೆ. ಹಲವು ಸೇವೆಗಳನ್ನು ಮಾಡಿಕೊಂಡು ಬಂದಿದ್ದೇವೆ. ಒಳ್ಳೆಯ ಕೆಲಸ ಅನ್ನೋದು ಎರಡು ರೀತಿಯ ಕತ್ತಿ ಇದ್ದ ಹಾಗೆ. ಅದು ಎರಡೂ ಕಡೆಯಿಂದ ಕೊಯ್ತದೆ, ಪ್ರಚಾರದ ದೃಷ್ಟಿಯಲ್ಲಿ ಒಳ್ಳೆಯದು ಹಾಗೂ ದ್ವೇಷ ಕೂಡ ಉಂಟು ಮಾಡ್ತದೆ. ನಮಗೆ ಕೋಟ್ಯಾಂತರ ಅಭಿಮಾನಿಗಳ ಬಳಗ ಇದೆ, ಇದರಲ್ಲಿ ಕೆಲವರಿಗೆ ದ್ವೇಷ ಆಗಿದೆ.
ಇದಕ್ಕೆ ದ್ವೇಷ, ಅಸೂಯೆ ಕಾರಣ, ಧರ್ಮಸ್ಥಳದ ಹೆಸರಲ್ಲಿ ಒಳ್ಳೆಯ ಕೆಲಸ ಆಗ್ತಿದೆ ಅಂತ ದ್ವೇಷ ಬೆಳೆಸಿಕೊಂಡಿದ್ದಾರೆ. ಕ್ಷೇತ್ರದ ಸಂಪತ್ತನ್ನ ಹೇಗೆ ಬಳಸ್ತೀವಿ ಅನ್ನೋದ್ರ ಮೇಲೆ ಅದರ ಪರಿಣಾಮ ಇದೆ. ಈಗ ಅವರು ಮಾತನಾಡುವ ವಿಷಯಗಳು ನಮಗೆ ಸಂಬಂಧವೇ ಇಲ್ಲ. ಆ ಪ್ರಕರಣದಲ್ಲಿ ಉನ್ನತ ಮಟ್ಟದ ತನಿಖೆ ಮಾಡಲು ಮೊದಲು ಸರ್ಕಾರಕ್ಕೆ ಮೊದಲು ಪತ್ರ ಬರೆದಿದ್ದೇ ನಾನು. ಸಿಬಿಐಗೆ ಒಪ್ಪಿಸಿ ಅಂತ ಮುಖ್ಯಮಂತ್ರಿಗಳಿಗೆ ಹೇಳಿದ್ದು ನಾನೇ. ಈಗ ಬೇಕಿದ್ದರೆ ಮತ್ತಷ್ಟು ತನಿಖೆ, ಸಂಶೋಧನೆ ಮಾಡಲಿ, ಅದರಿಂದ ನಮಗೆ ತೊಂದರೆ ಇಲ್ಲ. ಆದರೆ ಕ್ಷೇತ್ರದ ವಿಷಯ ಯಾಕೆ ಎಳೀತಾರೆ ಅಂತ ಗೊತ್ತಾಗ್ತಿಲ್ಲ.
ಇದರ ಹಿಂದೆ ಅಮಾಯಕ ಹುಡುಗಿಯ ಸಾವಿನ ವಿಚಾರ ಇಲ್ಲ, ಕ್ಷೇತ್ರದ ವಿಚಾರ ಇದೆ. ನನಗೆ ಯಾವುದೇ ಭಯ, ಸಂಕೋಚ ಹಾಗೂ ಸಂದೇಹ ಇಲ್ಲ. ಶತ್ರುತ್ವಕ್ಕೆ ಕಾರಣ ಏನು ಅನ್ನೋದೇ ನಮಗೆ ಇರೋ ಸಮಸ್ಯೆ. ನಮ್ಮ ಸಿಬ್ಬಂದಿಗಳಿಗೆ ಇದರ ಹಿಂದಿನ ಸತ್ಯ ಗೊತ್ತಿರಬಹುದು, ಆದರೂ ನಾವು ಯಾಕೆ ಸುಮ್ಮನಿದ್ದೇವೆ ಅಂತ ಅನಿಸಬಾರದು. ನಾವು ಸುಮ್ಮನಿರೋದು ಈ ಕುರಿತು ಪರ- ವಿರೋಧ ಸಂಭಾಷಣೆ ಆರಂಭವಾಗಬಾರದು ಅಂತಷ್ಟೇ. ಅನೇಕರು ಬಂದು ಕಣ್ಣೀರು ಹಾಕ್ತಾ ಇದಾರೆ, ನಿಮಗೆ ಹೀಗಾದರೆ ಹೇಗೆ ತಡೆಯೋದು ಅಂತ. ಈಗ ಪ್ರೀತಿ ಮತ್ತು ದ್ವೇಷ ಯಾರಿಗಿದೆ ಅಂತ ಜನರಿಗೆ ಗೊತ್ತಾಗ್ತಿದೆ.
ನಮ್ಮ ಆತ್ಮ ಮತ್ತು ವ್ಯವಹಾರ ಎಲ್ಲವೂ ಸ್ವಚ್ಛವಾಗಿದೆ. ಗುಬ್ಬಿಗೆ ಬ್ರಹ್ಮಾಸ್ತ್ರ ಬಿಡುವ ಅಗತ್ಯವೇ ಇಲ್ಲ. ನೀವೆಲ್ಲಾ ನಿಮ್ಮ ಸಿಬ್ಬಂದಿ ಕರೆದು ಈ ಬಗ್ಗೆ ಗಟ್ಟಿಯಾಗಿ ಹೇಳಬೇಕಾಗಿದೆ. ಧರ್ಮಸ್ಥಳದ ಸಿಬ್ಬಂದಿಯ ಕಾರಣಕ್ಕೆ ಇಲ್ಲಿ ಎಲ್ಲವೂ ಚೆನ್ನಾಗಿದೆ. ಸುಸ್ಥಿತಿಯಲ್ಲಿದೆ. ನಮ್ಮ ಒಳ್ಳೆಯ ಕಾರ್ಯಗಳು ಯಾವತ್ತೂ ನಡೆದುಕೊಂಡು ಹೋಗುತ್ತೆ, ಇದು ಮಧ್ಯದಲ್ಲಿ ಬಂದ ಮೋಡವಷ್ಟೇ. ಈ ಪರದೆ ತೆಗೀಬೇಕು, ಅದನ್ನ ದೇವರು ತೆಗೀತಾನೆ. ನಿಮ್ಮ ಶಿಸ್ತು ಮತ್ತು ನಿಯಮ ಬಿಡಬೇಡಿ, ನನಗೆ ಯಾವ ಭಯವೂ ಇಲ್ಲ. ನಾವು ಯಾರಿಗೂ ಯಾವ ಅನ್ಯಾಯಕ್ಕೂ ಸಹಕಾರ ಕೊಡಲ್ಲ.
ವೈಯಕ್ತಿಕ ಅವಮಾನ ಮತ್ತು ವೈಯಕ್ತಿಕ ಆರೋಪ ಸರಿಯಲ್ಲ, ಅದನ್ನು ನಿಲ್ಲಿಸಬೇಕು. ನಮ್ಮ ಅಭಿಮಾನಿಗಳು ರೆಡಿ ಇದ್ದಾರೆ, ಏನಾದ್ರೂ ಮಾಡಲಿಕ್ಕೆ. ಆದರೆ ನಾನು ಏನೂ ಮಾಡಬೇಡಿ ಅಂದಿದ್ದೇನೆ, ನೈತಿಕ ಶಕ್ತಿ ದೊಡ್ಡದು ಅಂದಿದ್ದೇನೆ ಎಂದು ವಿವರವಾಗಿ ಮಾತನಾಡಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ಅವರು ಧರ್ಮಸ್ಥಳದ ಹೆಸರೆತ್ತಿ ಆರೋಪ ಮಾಡಿರುವುದು ತೀವ್ರ ಸಂಚಲನ ಮೂಡಿಸಿದೆ. ಈಗ ಧರ್ಮಾಧಿಕಾರಿ ಹೆಗ್ಗಡೆಯವರೇ ಸ್ಪಷ್ಟನೆಯ ಮೂಲಕ ಸಿಬಂದಿಗೆ ನೈತಿಕ ಸ್ಥೈರ್ಯ ತುಂಬಿದ್ದಾರೆ.
Sowjanya rape case, Veerendra Heggade finally opens up, says its a plot to soil the name of Dharmasthala. After 11 years, a court recently acquitted the lone accused, Santhosh Rao, of all charges. The family had never believed that Santhosh was the perpetrator, and had alleged that the case was not properly probed.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm