ಬ್ರೇಕಿಂಗ್ ನ್ಯೂಸ್
04-11-20 02:52 pm Udupi Correspondent ಕರಾವಳಿ
ಉಡುಪಿ, ನ.4: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೆಸರಿನಲ್ಲಿ ನಕಲಿ ಇಮೇಲ್ ಐಡಿ ಸೃಷ್ಟಿಸಿ ಮಣಿಪಾಲ ವಿಶ್ವವಿದ್ಯಾನಿಲಯದ ಕುಲಸಚಿವರಿಗೆ ಇ ಮೇಲ್ ಸಂದೇಶ ಕಳುಹಿಸಿ ವಂಚಿಸಲು ಯತ್ನಿಸಿದ ಪ್ರಕರಣ ನಡೆದಿದೆ.
ನ.1ರಂದು ಅಪರಿಚಿತ ವ್ಯಕ್ತಿ ‘ಸಿಎಂ ಕರ್ನಾಟಕ’ ಎಂಬ ನಕಲಿ ಮೇಲ್ ಐಡಿಯನ್ನು ಸೃಷ್ಟಿಸಿ, ಮುಖ್ಯಮಂತ್ರಿ ಕಚೇರಿಯಿಂದ ಇ- ಮೇಲ್ ಕಳುಹಿಸಿದ ರೀತಿ ಮೇಲ್ ಬಂದಿತ್ತು. ಮಣಿಪಾಲ ಅಕಾಡಮಿ ಆಫ್ ಹೈಯರ್ ಎಜ್ಯುಕೇಶನ್(ಮಾಹೆ) ಕುಲಸಚಿವ ಡಾ.ನಾರಾಯಣ ಸಭಾಹಿತ್ ಅವರ ರಿಜಿಸ್ಟಾರ್ ವಿಭಾಗದ ಮೇಲ್ ಐಡಿಗೆ ಇಮೇಲ್ ಸಂದೇಶ ಕಳುಹಿಸಲಾಗಿತ್ತು ಎಂದು ಉಡುಪಿ ಸೈಬರ್ ಠಾಣೆಗೆ ದೂರು ನೀಡಲಾಗಿದೆ.

ಈ ಸಂದೇಶದಲ್ಲಿ ‘ಮಾಹೆಯ ಶಿಕ್ಷಣ ಸಂಸ್ಥೆಗಳನ್ನು ಪುನಾರಂಭಿಸುವುದರ ವಿರುದ್ಧ ಇಲ್ಲಿನ ವಿವಿಧ ದೇಶಗಳ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ದೂರುಗಳು ಬಂದಿವೆ. ಕಾಲೇಜುಗಳನ್ನು ನವೆಂಬರ್/ಡಿಸೆಂಬರ್‌ನಲ್ಲಿ ಪುನಾರಂಭಿಸಲು ಪರಿಸ್ಥಿತಿ ಸೂಕ್ತವಾಗಿಲ್ಲ. 2021ರ ಜ.2ರ ವರೆಗೆ ತರಗತಿ ಆರಂಭಿಸಬಾರದು. ಒಂದು ವೇಳೆ ಜ.2ರಿಂದ ಪ್ರಾರಂಭಿಸಬೇಕಾದರೆ ವಿದ್ಯಾರ್ಥಿಗಳ ಪೋಷಕರಿಂದ ಒಪ್ಪಿಗೆ ಪಡೆಯಬೇಕು’ ಎಂಬುದಾಗಿ ಮೇಲ್ ಮಾಡಿ ಯಾಮಾರಿಸಿದ್ದಾನೆ.
ಮುಖ್ಯಮಂತ್ರಿ ಹೆಸರಲ್ಲಿ ಸುಳ್ಳು ಇ-ಮೇಲ್ ಐಡಿಯನ್ನು ಸೃಷ್ಟಿಸಿದ್ದಲ್ಲದೆ, ಇಮೇಲ್ ಸಂದೇಶವನ್ನು ಮುಖ್ಯಮಂತ್ರಿಯವರೇ ಕಳುಹಿಸಿರುವ ರೀತಿಯಲ್ಲಿ ಸಂಸ್ಥೆಗೆ ತಪ್ಪು ಮಾಹಿತಿಯನ್ನು ನೀಡಿ ವಂಚಿಸಿರುವುದಾಗಿ ಡಾ.ನಾರಾಯಣ ಸಭಾಹಿತ್ ನೀಡಿರುವ ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
A complaint has been lodged by Manipal University in the cyber crime police station for sending fake email in the name of Karnataka CM Yediyurappa.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 07:24 pm
Mangalore Correspondent
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
ಮನವಿ ಕೊಡಲು ಬಂದವರನ್ನು ತಡೆದ ಪೊಲೀಸರು, ಬೆಳ್ತಂಗಡಿ...
27-10-25 04:36 pm
11 ದಿನಗಳಿಂದ ಅರಬ್ಬೀ ಸಮುದ್ರದಲ್ಲಿ ಸಿಕ್ಕಿಬಿದ್ದಿದ್...
26-10-25 04:42 pm
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm