ಬ್ರೇಕಿಂಗ್ ನ್ಯೂಸ್
22-07-23 03:04 pm Mangalore Correspondent ಕರಾವಳಿ
ಮಂಗಳೂರು, ಜುಲೈ 22: ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಮತ್ತು ಅವರು ನಡೆಸುತ್ತಿರುವ ಸಂಸ್ಥೆಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡದಂತೆ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಲಯ ನಿರ್ಬಂಧಕಾಜ್ಞೆ ಆದೇಶ ನೀಡಿದೆ. ಈಗಾಗಲೇ ಸಾಮಾಜಿಕ ಮಾಧ್ಯಮಗಳೂ ಸೇರಿದಂತೆ ಇನ್ನಿತರೆ ಮಾಧ್ಯಮಗಳು ಮಾಡಿರುವ ಅವಹೇಳನಕಾರಿ ವರದಿಗಳನ್ನು ಅಳಿಸಿ ಹಾಕುವಂತೆ ನ್ಯಾಯಾಲಯ ಆದೇಶ ನೀಡಿದೆ.
2012 ರಲ್ಲಿ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಪಾಂಗಾಳದಲ್ಲಿ ನಡೆದಿದ್ದ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹೇಶ್ ಶೆಟ್ಟಿ ತಿಮರೋಡಿ, ಜಗದೀಶ್, ಪ್ರಭಾ ಬೆಳವಂಗಲ, ಸೋಮನಾಥ್ ನಾಯಕ್, ಬಿ.ಎಂ.ಭಟ್, ವಿಠಲ್ ಗೌಡ ಮತ್ತು ಇತರರು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬಸ್ಥರ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಿ ತೇಜೋವಧೆ ಮಾಡುತ್ತಿದ್ದಾರೆಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಸಂಬಂಧಪಟ್ಟವರು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ದಾವೆಯನ್ನು ದಾಖಲಿಸಿದ್ದರು.
ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಲಯವು ಶ್ರೀ ಕ್ಷೇತ್ರ ಧರ್ಮಸ್ಥಳದ ದೇವಸ್ಥಾನ, ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ, ಅವರು ನಡೆಸುತ್ತಿರುವ ಸಂಸ್ಥೆಗಳು ಹಾಗೂ ಅವರ ಕುಟುಂಬಸ್ಥರ ವಿರುದ್ಧ ಮೇಲೆ ಹೇಳಿದ 6 ಮಂದಿ ವ್ಯಕ್ತಿಗಳು, ಫೇಸ್‌ಬುಕ್, ವಾಟ್ಸ್‌ಆ್ಯಪ್, ಟ್ವಿಟ್ಟರ್, ಇನ್‌ಸ್ಟಾಗ್ರಾಂ, ಯೂಟ್ಯೂಬ್, ಟಿವಿ ಚಾನಲ್ ಮತ್ತು ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಸೌಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಅವರು ನಡೆಸುತ್ತಿರುವ ಸಂಸ್ಥೆಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡದಂತೆ ನಿರ್ಬಂಧಕಾಜ್ಞೆ ಆದೇಶ ನೀಡಿದೆ.
ಅಲ್ಲದೆ ಈಗಾಗಲೇ ಟಿ.ವಿ.ಚಾನಲ್‌ಗಳು, ಫೇಸ್‌ಬುಕ್, ವಾಟ್ಸ್‌ಆ್ಯಪ್, ಟ್ವಿಟ್ಟರ್, ಇನ್‌ಸ್ಟಾಗ್ರಾಂ, ಯೂಟ್ಯೂಬ್‌ಗಳಲ್ಲಿಅವಹೇಳನಕಾರಿಯಾಗಿ ಪ್ರಸಾರವಾಗಿರುವ ಅಥವಾ ಹಂಚಿಕೊಂಡಿರುವ ವಿಚಾರಗಳನ್ನು ಅಳಿಸಿ ಹಾಕುವಂತೆ ಆದೇಶ ಮಾಡಲಾಗಿರುತ್ತದೆ. ನ್ಯಾಯವಾದಿಗಳಾದ ಪುತ್ತೂರು ಮೂಲದ ರಾಜಶೇಖರ ಹಿಲ್ಯಾರು ಮತ್ತು ಮಂಗಳೂರಿನ ಮಯೂರ ಕೀರ್ತಿ ವಾದಿಸಿದ್ದರು ಎಂದು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಎಚ್.ಮಂಜುನಾಥ್ ತಿಳಿಸಿದ್ದಾರೆ.
ಮೌನ ಮುರಿದಿದ್ದ ಡಾ ಹೆಗ್ಗಡೆ ;
ಶ್ರೀ ಕ್ಷೇತ್ರ ಧರ್ಮಾಧಿಕಾರಿ ಮತ್ತು ರಾಜ್ಯ ಸಭಾ ಸದಸ್ಯರಾದ ಡಾ ಡಿ ವೀರೇಂದ್ರ ಹೆಗ್ಗಡೆ ಅವರು ಇತ್ತೀಚೆಗಷ್ಟೇ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮೌನ ಮುರಿದಿದ್ದರು. ಕ್ಷೇತ್ರದಲ್ಲಿ ನಡೆಸಿದ್ದ ವಿಭಾಗೀಯ ಮುಖ್ಯಸ್ಥರ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ್ದ ಅವರು ಸೌಜನ್ಯ ಹತ್ಯೆ ಪ್ರಕರಣ ನಡೆದಾಗ ನಾನೇ ಸರ್ಕಾರಕ್ಕೆ ತನಿಖೆಗೆ ಒತ್ತಾಯಿಸಿದ್ದೆ ಮತ್ತು ಸಿಬಿಐಗೆ ವಹಿಸಲು ಮುಖ್ಯಮಂತ್ರಿಗಳಿಗೆ ಪತ್ರ ಕೂಡ ಬರೆದಿದ್ದೆ ಎಂದಿದ್ದರು. ಕೆಲವರು ಕ್ಷೇತ್ರದ ಅಭಿವೃದ್ಧಿ ಸಹಿಸದೆ ಈ ರೀತಿ ಅಪ ಪ್ರಚಾರ ನಡೆಸ್ತಾ ಇದ್ದಾರೆ. ಆದರೆ ನನ್ನಲ್ಲಿ ಯಾವುದೇ ಗೊಂದಲ, ಭಯ, ಆತಂಕ ಇಲ್ಲ. ಕ್ಷೇತ್ರದ ಯಾರಿಗೂ ಈ ಬಗ್ಗೆ ಗೊಂದಲ ಬೇಡ ಎಂದು ಹೇಳಿದ್ದರು.
ಭಕ್ತರ ಹಣದಿಂದ ಸಮಾಜಕ್ಕೆ ಸಾಕಷ್ಟು ಸಹಾಯ ನಮ್ಮಿಂದ ಆಗ್ತಾ ಇದೆ ಇದಕ್ಕಿಂತ ಹೆಚ್ಚು ನಾನು ಏನು ಮಾಡಲು ಸಾದ್ಯ ಎಂದು ಪ್ರಶ್ನಿಸಿದ್ದರು. ಇದು ನನ್ನ ಮೇಲೆ ಪ್ರೀತಿ ಇಟ್ಟವರು ಯಾರು ಮತ್ತು ದ್ವೇಷ ಮಾಡುವವರು ಯಾರು ಅನ್ನುವುದನ್ನು ತಿಳಿಯುವ ಕಾಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.
Court restrains Mahesh thimarodi and six others from making allegations against Veerendra Heggade and Dharmasthala in Sowjanya case. A city civil and sessions court in Bengaluru on Tuesday issued an ex parte interim injunction against Mahesh Shetty Thimarodi and others from making any false allegations against Dharmasthala Pattadhikari D Veerendra Heggade, the Manjunathaswamy temple and institutions run by Dharmasthala, till an original suit filed by a few people seeking mandatory injunction in the matter was disposed of.
21-05-25 09:16 pm
Bangalore Correspondent
CM Siddaramaiah, Rain, Visit: ಮಳೆ ಹಾನಿ ಪ್ರದೇಶ...
21-05-25 05:42 pm
Kumki elephants, Pawan Kalyan, Cm Siddaramaia...
21-05-25 02:35 pm
ED Raids, Parameshwar College, Ranya Rao: ಹೋಂ...
21-05-25 01:50 pm
KG Halli Police Sub inspector Nagraj, Wife su...
21-05-25 12:12 pm
21-05-25 12:57 pm
HK News Desk
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
Operation Sindhoor, Rahul Gandhi,.Pakistan: ಆ...
20-05-25 01:42 pm
ಆಡಲು ಹೋಗಿದ್ದಾಗ ಮಳೆ ಬಂತೆಂದು ನಿಲ್ಲಿಸಿದ್ದ ಕಾರಿನ...
19-05-25 02:25 pm
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
21-05-25 11:09 pm
HK News Desk
Mangalore Beltangady, Akanksha Suicide, Updat...
21-05-25 10:45 pm
MP Kota Srinivas Poojary, Mangalore: ಇಂದಿರಾ ಗ...
21-05-25 09:30 pm
Dr M A Saleem New DG&IGP: ಡಿಜಿಪಿ ಅಲೋಕ್ ಮೋಹನ್...
21-05-25 07:17 pm
Tiranga Yatra, Mangalore: ಮಂಗಳೂರಿನಲ್ಲಿ ತಿರಂಗಾ...
20-05-25 11:12 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm