ಬ್ರೇಕಿಂಗ್ ನ್ಯೂಸ್
22-07-23 10:26 pm Mangalore Correspondent ಕರಾವಳಿ
ಮಂಗಳೂರು, ಜುಲೈ 22: ಕಾಂಗ್ರೆಸ್ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಪಕ್ಷದಲ್ಲಿ ತಮ್ಮನ್ನು ಕಡೆಗಣಿಸಿದ ಬಗ್ಗೆ ಬಹಿರಂಗವಾಗಿಯೇ ಸಿಎಂ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ಹೇಳಿಕೊಂಡಿದ್ದಾರೆ.
ಮಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಈಡಿಗ, ಬಿಲ್ಲವ, ದೀವರ ಮುಖಂಡರ ಸಭೆಯನ್ನು ಬಿಕೆ ಹರಿಪ್ರಸಾದ್ ನಡೆಸಿದ್ದು ಅದರಲ್ಲಿ ಕರಾವಳಿ, ಮಲೆನಾಡಿನಲ್ಲಿ ಪ್ರಬಲವಾಗಿರುವ ಹಿಂದುಳಿದ ಸಮುದಾಯಗಳನ್ನು ಕಡೆಗಣಿಸಿದ ಬಗ್ಗೆ ಚರ್ಚೆ ನಡೆಸಿದ್ದಾರೆ. ನನಗೆ ಸಿಎಂ ಆಯ್ಕೆ ಮಾಡೋದು ಗೊತ್ತು, ಕೆಳಗೆ ಇಳಿಸೋದು ಗೊತ್ತಿದೆ. ನಾನು ಯಾರ ಬಳಿಯೂ ಭಿಕ್ಷೆ ಬೇಡುವುದಿಲ್ಲ. ಎದೆ ಕೊಟ್ಟು ನಿಲ್ಲುತ್ತೇನೆ. ನಾನು ಮಂತ್ರಿ ಆಗೋದು, ಬಿಡೋದು ಬೇರೆ ಪ್ರಶ್ನೆ. ಐವರನ್ನು ಸಿಎಂ ಆಯ್ಕೆ ಮಾಡುವುದರಲ್ಲಿ ನಾನು ಪಾತ್ರ ವಹಿಸಿದ್ದೇನೆ. ಹಿಂದುಳಿದ ಸಮುದಾಯಕ್ಕೆ ಇವರೇನು ಕೊಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೆಸರೆತ್ತದೆ ತಮ್ಮ ಆಕ್ರೋಶ ಹೊರಹಾಕಿದ್ದಾರೆ.
ಕರ್ನಾಟಕದಲ್ಲಿ ರಾಜಕೀಯವಾಗಿ ಬಿಲ್ಲವ, ಈಡಿಗ ಸಮುದಾಯದವರು ಮುಂದೆ ಬರುತ್ತಿಲ್ಲ. ಏನೇ ಪ್ರಯತ್ನ ಮಾಡಿದರೂ ಆಗುತ್ತಿಲ್ಲ. ಅವಕಾಶ ವಂಚಿತರಾಗುತ್ತಿರುವುದು ನೋಡಿದರೆ ಯಾರದ್ದೋ ಷಡ್ಯಂತ್ರಕ್ಕೆ ಬಲಿಯಾಗುತ್ತಿದ್ದೇವೆ ಅನಿಸುತ್ತದೆ. ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಕ್ಕೆ ಸೇರಿದವರು. ಎಲ್ಲರು ಒಟ್ಟಿಗೆ ಸೇರಬೇಕು ಎಂದು ನಾವು 2013 ರಲ್ಲಿ ಅವರಿಗೆ ಬೆಂಬಲ ಕೊಟ್ಟಿದ್ದೆವು. ಆ ಬಳಿಕ ನಾವು ಯಾರ ಬಳಿಯೂ ಕೈಚಾಚಲು ಹೋಗಿಲ್ಲ. ಹಿಂದುಳಿದ ವರ್ಗಕ್ಕೆ ಯಾವ ರೀತಿ ಅನುಕೂಲ ಮಾಡಬೇಕು ಎಂದು ಯೋಚನೆ ಮಾಡುತ್ತೇವೆ. ಸ್ವಾರ್ಥಕ್ಕೆ ಯಾವುದು ಕೇಳಲ್ಲ ಎಂದು ಕಿಡಿಕಾರಿದ್ದಾರೆ.
ಉಡುಪಿ ಜಿಲ್ಲೆಯ ಕಾರ್ಕಳ ಕೋಟಿ ಚನ್ನಯ್ಯ ಪಾರ್ಕ್ ಗೆ 5 ಕೋಟಿ ಕೊಡಿ ಎಂದು ಕೇಳಿದ್ದೆವು. ಸಿದ್ದರಾಮಯ್ಯ ಕೊಡುತ್ತೇವೆ ಎಂದು ಹೇಳಿದವರು ಇದುವರೆಗೆ ಕೊಟ್ಟಿಲ್ಲ. ನನಗೆ ಅವರು ರಾಜಕೀಯವಾಗಿ ಏನು ಸಹಾಯ ಮಾಡಲು ಆಗಲ್ಲ. ನಾನೇ ಅವರಿಗೆ ಸಹಾಯ ಮಾಡುತ್ತೇನೆ. ಮಂಗಳೂರು ವಿವಿಯಲ್ಲಿ ಗುರುಪೀಠ ಸ್ಥಾಪನೆಗೆ ನಾನು ಎಂಪಿ ಆದಾಗ ಹಣ ಕೊಟ್ಟಿದೆ. ಕಟ್ಟಡ ಅರ್ಧಕ್ಕೆ ನಿಂತಿದೆ ಹಣ ಕೊಟ್ಟಿಲ್ಲ, ಆದರೆ ಅವರ ಸಮಾಜಕ್ಕೆ ಎಷ್ಟು ಕೊಟ್ಟಿದ್ದಾರೆ ಎಂದು ಸ್ವಾಮೀಜಿಗಳು ನೋಡಲಿ. ಹಿಂದುಳಿದ ವರ್ಗ ಎಂದರೆ ಒಂದು ಜಾತಿ ಮಾತ್ರವಲ್ಲ. ಜಾತಿ ಬೇರೆ, ವರ್ಗ ಬೇರೆ, ನಾವು ವರ್ಗದಲ್ಲಿ ಬರುತ್ತೇವೆ. ವರ್ಗದಲ್ಲಿ ಬರುವ ಎಲ್ಲರಿಗೂ ಸಮಾನ ಹಕ್ಕು ಪಡೆಯಬೇಕು. 11 ಕ್ಷೇತ್ರಗಳಲ್ಲಿ ಈಡಿಗ, ಬಿಲ್ಲವ, ದೀವರು ನಿರ್ಣಯಕವಾಗಿದ್ದೇವೆ. ನಾನು ಸಹ ಎಲೆಕ್ಷನ್ ಕಮಿಟಿಯಲ್ಲಿ ಇದ್ದೆ, ನಾಲ್ಕು ಜನ ಟಿಕೆಟ್ ವಂಚಿತರಾದರು. 2 ಬಿಲ್ಲವ, 1 ಈಡಿಗ, 1 ದೀವರು ಟಿಕೆಟ್ ಗಿಟ್ಟಿಸಿಕೊಳ್ಳಲಿಲ್ಲ.
ಮಂಗಳೂರು ಉತ್ತರ ಮತ್ತು ದಕ್ಷಿಣ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ಕೊಟ್ಟಿದ್ದಾರೆ. ನಾವು ಅಲ್ಪಸಂಖ್ಯಾತರ ವಿರೋಧಿಗಳಲ್ಲ. ನೀವು ಮುಂದೆ ಬರಬೇಕಾದರೆ ಅಲ್ಪಸಂಖ್ಯಾತರ ವಿರುದ್ಧ ಧ್ವನಿ ಎತ್ತಬಾರದು. ಅಲ್ಪಸಂಖ್ಯಾತರನ್ನು ಮುಂದಿಟ್ಟು ನಮಗೆ ಟಿಕೆಟ್ ವಂಚಿತರನ್ನಾಗಿ ಮಾಡುತ್ತಾರೆ. ಲಿಂಗಾಯತರು, ಒಕ್ಕಲಿಗರು, ಬ್ರಾಹ್ಮಣರು, ಕುರುಬರು ಸಿಎಂ ಸ್ಥಾನಕ್ಕೆ ಹೋರಾಟ ಮಾಡ್ತಾರೆ. ಅವರು ಅಧಿಕಾರಕ್ಕೆ ಬರಬೇಕಾದರೆ ಅವರ ಸ್ಥಾನಗಳನ್ನು ಬಿಟ್ಟುಕೊಡಲಿ. ನಮ್ಮನ್ನು ಯಾಕೆ ಕಟ್ ಮಾಡ್ತಾರೆ, ನಾವು ಹೆಚ್ಚು ಇರುವ ಜಾಗದಲ್ಲಿ ಅವಕಾಶ ಕೊಡಬೇಕು. ನಾವೇನು ಮಂಡ್ಯ, ಬೆಳಗಾವಿಯಲ್ಲಿ ಕೊಡಿ ಎಂದು ಕೇಳಲ್ಲ. ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಕಡೆ ನಮ್ಮವರು ನಿರ್ಣಾಯಕ ಎಂದು ರಾಜಕೀಯದ ಕಟು ವಾಸ್ತವವನ್ನು ಬಿ.ಕೆ ಹರಿಪ್ರಸಾದ್ ಸಭೆಯಲ್ಲಿ ಎಲ್ಲರ ಮುಂದಿಟ್ಟರು.
I know how to make or break a CM, says Congress leader Hariprasad in Mangalore. Disgruntled Congress leader B.K. Hariprasad, who failed to find a berth in the State cabinet, on Saturday made a snide remark against Chief Minister Siddaramaiah at a meeting of the Billava-Idiga community, to which he belongs, setting off a buzz in political circles.
21-05-25 09:16 pm
Bangalore Correspondent
CM Siddaramaiah, Rain, Visit: ಮಳೆ ಹಾನಿ ಪ್ರದೇಶ...
21-05-25 05:42 pm
Kumki elephants, Pawan Kalyan, Cm Siddaramaia...
21-05-25 02:35 pm
ED Raids, Parameshwar College, Ranya Rao: ಹೋಂ...
21-05-25 01:50 pm
KG Halli Police Sub inspector Nagraj, Wife su...
21-05-25 12:12 pm
21-05-25 12:57 pm
HK News Desk
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
Operation Sindhoor, Rahul Gandhi,.Pakistan: ಆ...
20-05-25 01:42 pm
ಆಡಲು ಹೋಗಿದ್ದಾಗ ಮಳೆ ಬಂತೆಂದು ನಿಲ್ಲಿಸಿದ್ದ ಕಾರಿನ...
19-05-25 02:25 pm
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
21-05-25 11:09 pm
HK News Desk
Mangalore Beltangady, Akanksha Suicide, Updat...
21-05-25 10:45 pm
MP Kota Srinivas Poojary, Mangalore: ಇಂದಿರಾ ಗ...
21-05-25 09:30 pm
Dr M A Saleem New DG&IGP: ಡಿಜಿಪಿ ಅಲೋಕ್ ಮೋಹನ್...
21-05-25 07:17 pm
Tiranga Yatra, Mangalore: ಮಂಗಳೂರಿನಲ್ಲಿ ತಿರಂಗಾ...
20-05-25 11:12 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm