Mangalore Rain, Red alert, School college Holiday: ರೆಡ್ ಅಲರ್ಟ್ ; ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ, ಕಾಲೇಜಿಗೆ ರಜೆ ಘೋಷಣೆ 

24-07-23 07:45 pm       Mangalore Correspondent   ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.‌ ಜುಲೈ 24-25ರಂದು ರೆಡ್ ಅಲರ್ಟ್ ಘೋಷಿಸಿದ್ದು 200 ಮಿಮೀಗೂ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಮಂಗಳೂರು, ಜುಲೈ 24: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.‌ ಜುಲೈ 24-25ರಂದು ರೆಡ್ ಅಲರ್ಟ್ ಘೋಷಿಸಿದ್ದು 200 ಮಿಮೀಗೂ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. 

ರೆಡ್ ಅಲರ್ಟ್ ಘೋಷಣೆ ಮಾಡಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂಜಾಗ್ರತಾ ಕ್ರಮವಾಗಿ (ನಾಳೆ) ಜುಲೈ 25ರಂದು ಶಾಲೆ, ಕಾಲೇಜಿಗೆ ರಜೆ ಸಾರಲಾಗಿದೆ. ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಮಾಡಿದ್ದಾರೆ. ಅಲ್ಲದೆ, ಸಾರ್ವಜನಿಕರು ನದಿ ಪಾತ್ರಗಳಲ್ಲಿ ಜಾಗ್ರತೆ ಇರಬೇಕು.  ‌ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಅಧಿಕಾರಿಗಳು ಸನ್ನದ್ಧ ಇರುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.‌ 

ಸೋಮವಾರ ಬೆಳ್ತಂಗಡಿ ಮತ್ತು ಸುಳ್ಯ ತಾಲೂಕಿನಲ್ಲಿ ಶಾಲೆ, ಕಾಲೇಜಿಗೆ ರಜೆ ನೀಡಲಾಗಿತ್ತು. ಬಂಟ್ವಾಳ ಮತ್ತು ಪುತ್ತೂರು ತಾಲೂಕಿನಲ್ಲಿ ಅಪಾಯ ಇರುವ ಕೆಲವು ಕಡೆ ಮಾತ್ರ ರಜೆ ನೀಡಲಾಗಿತ್ತು. ಪಶ್ಚಿಮ ಘಟ್ಟಗಳ ಭಾಗದಲ್ಲಿ ಭಾರೀ ಮಳೆಯಾಗಿದ್ದರಿಂದ ನದಿಗಳು ಭೋರ್ಗರೆದು ಹರಿಯುತ್ತಿದ್ದು ಹಲವು ಕಡೆ ನೆರೆಯಿಂದ ಸಂಕಷ್ಟ ಎದುರಾಗಿದೆ.

Heavy rains in Mangalore, Red alert declared, School and college holiday on July 25th. Also Schools and colleges announced a holiday tomorrow in Kodagu district in view of the heavy rain in the district. Orange alert announced for Kodagu district too.