ಬ್ರೇಕಿಂಗ್ ನ್ಯೂಸ್
26-07-23 01:58 pm Udupi Correspondent ಕರಾವಳಿ
ಉಡುಪಿ, ಜುಲೈ 26: ಭಾರೀ ಸುದ್ದಿಗೆ ಗ್ರಾಸವಾಗಿರುವ ನೇತ್ರಜ್ಯೋತಿ ಕಾಲೇಜಿನಲ್ಲಿ ನಡೆದಿದೆ ಎನ್ನಲಾದ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಕಡೆಗೂ ಮಲ್ಪೆ ಪೊಲೀಸರು ಕಾಲೇಜು ಮತ್ತು ಮೂವರು ವಿದ್ಯಾರ್ಥಿನಿಯರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದು ತನಿಖೆ ಆರಂಭಿಸಿದ್ದಾರೆ.
ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಹಿಂದು ಹುಡುಗಿಯರ ವಿಡಿಯೋ ತೆಗೆದು ವಾಟ್ಸಪ್ ಗುಂಪುಗಳಿಗೆ ಶೇರ್ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಆದರೆ ಕಾಲೇಜು ಆಡಳಿತ ಮಂಡಳಿಯು ವಿದ್ಯಾರ್ಥಿಗಳನ್ನು ತಾವೇ ವಿಚಾರಣೆ ಮಾಡಿ ವಿಡಿಯೋ ಡಿಲೀಟ್ ಮಾಡಿದ್ದಾರೆ ಎಂದು ಹೇಳಲಾಗಿದ್ದು ಇದೀಗ ಜನಾಕ್ರೋಶ ಹೆಚ್ಚಾದ ಹಿನ್ನೆಲೆ ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಕೇಸು ದಾಖಲಿಸಿಕೊಳ್ಳಲಾಗಿದೆ.



ಮೂವರು ವಿದ್ಯಾರ್ಥಿನಿಯರಾದ ಅಲಿಮತುಲ್ ಶೈಫಾ, ಶಬಾನಾಜ್ ಮತ್ತು ಆಲಿಯಾ ವಿರುದ್ಧ ಹಾಗೂ ನೇತ್ರಜ್ಯೋತಿ ಆಡಳಿತ ಮಂಡಳಿಯ ವಿರುದ್ಧ ಸಾಕ್ಷ್ಯನಾಶ ಆರೋಪದಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಐಪಿಸಿ ಸೆಕ್ಷನ್ 509, 204, 175, 34 ಅಡಿ ಪ್ರಕರಣಗಳನ್ನು ದಾಖಲು ಮಾಡಿಕೊಳ್ಳಲಾಗಿದೆ. ರಾಜ್ಯಾದ್ಯಂತ ಬಿಜೆಪಿ ನಾಯಕರು, ಹಿಂದೂ ಸಂಘಟನೆಗಳ ನಾಯಕರು ಘಟನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಸರ್ಕಾರ, ಒಟ್ಟು ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸುತ್ತಿದೆ, ಆಮೂಲಕ ಹಿಂದುಗಳ ದಮನ ನೀತಿ ಅನುಸರಿಸುತ್ತಿದೆ. ಮುಸ್ಲಿಂ ಮಹಿಳೆಯರ ರಕ್ಷಣೆಗೆ ನಿಂತಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದರು. ಘಟನೆ ನೆಪದಲ್ಲಿ ಜನಾಕ್ರೋಶ ರಾಜ್ಯ ಸರ್ಕಾರದ ವಿರುದ್ಧ ತಿರುಗಿದ್ದರಿಂದ ಪೊಲೀಸರು ಕೊನೆಗೂ ಎಚ್ಚತ್ತಿದ್ದಾರೆ.
ಟ್ವಿಟರ್ ಸೇರಿದಂತೆ ಜಾಲತಾಣದಲ್ಲಿ ವಿಡಿಯೋ ಪ್ರಕರಣ ಭಾರೀ ಸದ್ದು ಮಾಡಿತ್ತು. ಹೀಗಾಗಿ ಹಿಜಾಬ್ ಬಳಿಕ ಮತ್ತೊಮ್ಮೆ ಉಡುಪಿ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿತ್ತು. ನಿನ್ನೆಯಷ್ಟೇ ಕಾಲೇಜು ಆಡಳಿತವಾಗಲೀ, ಸಂತ್ರಸ್ತ ಯುವತಿಯಾಗಲೀ ದೂರು ದಾಖಲಿಸಿಲ್ಲ. ವೈರಲ್ ಆದ ವಿಡಿಯೋ ನಮಗೆ ಸಿಕ್ಕಿಲ್ಲ ಎಂದು ಕಾಗೆ ಹಾರಿಸಿದ್ದ ಪೊಲೀಸರು ಈಗ ಉಲ್ಟಾ ಹೊಡೆದಿದ್ದು ಪ್ರಕರಣ ದಾಖಲಿಸಿ ತನಿಖೆ ಶುರು ಮಾಡಿದ್ದಾರೆ.
Udupi Hidden Camera inside Toilet at Nursing college in Udupi, Police register Sumoto case against College and three Muslim Students. SP Hakay Akshay Machhindra who made a statement saying no Video is found or we don't have any evidence has now regsitered case after controversy sparked on Twitter and Media. Former president of Oxford Students’ Union Rashmi Samant on Tuesday alleged that the Karnataka police was intimidating her for her tweets exposing the alleged voyeurism in a paramedical college in Udupi.
18-12-25 08:40 pm
HK News Desk
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
ಕೊಪ್ಪಳ ; ಬೈಕ್ - ಬೊಲೆರೋ ಡಿಕ್ಕಿ , ಮೂವರು ಯುವಕರ...
18-12-25 12:37 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm