Mangalore Udupi Rain, School College Holiday: ರೆಡ್ ಅಲರ್ಟ್ ವಿಸ್ತರಣೆ ; ದ.ಕ.ದಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಮಾತ್ರ ರಜೆ, ಉಡುಪಿಯಲ್ಲಿ ಪಿಯು ವರೆಗೆ ರಜೆ ಘೋಷಣೆ 

26-07-23 09:19 pm       Mangalore Correspondent   ಕರಾವಳಿ

ಕರಾವಳಿಯ ಮೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ವಿಸ್ತರಣೆ‌ ಮಾಡಿದ್ದು ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ (ಜು.27) ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ.

ಮಂಗಳೂರು, ಜುಲೈ 26: ಕರಾವಳಿಯ ಮೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ವಿಸ್ತರಣೆ‌ ಮಾಡಿದ್ದು ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ (ಜು.27) ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ. ಆದರೆ ಪಿಯು, ಇನ್ನಿತರ ತಾಂತ್ರಿಕ ಕಾಲೇಜುಗಳಿಗೆ ರಜೆ ಇಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶದಲ್ಲಿ ತಿಳಿಸಿದ್ದಾರೆ. ‌

ಉಡುಪಿ ಜಿಲ್ಲೆಯಲ್ಲಿ ಸತತ ಮೂರನೇ ದಿನವೂ ಎಲ್ಲ ರೀತಿಯ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ನೀಡಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ನೀಡಿರುವ ಆದೇಶದಲ್ಲಿ ತಿಳಿಸಿದ್ದಾರೆ. ಕರಾವಳಿ ಭಾಗದಲ್ಲಿ ಮೂರನೇ ದಿನವೂ ಏಕ ಪ್ರಕಾರದ ಮಳೆ ಮುಂದುವರಿದಿದೆ. ಹಿಂದಿನ ಎರಡು ದಿನಗಳಿಗೆ ಹೋಲಿಸಿದರೆ ಗುರುವಾರ ಮಳೆ ಸ್ವಲ್ಪ ಮಟ್ಟಿಗೆ ಕಡಿಮೆಯಿತ್ತು. ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗಿರುವುದರಿಂದ ನದಿ ಪ್ರದೇಶಗಳಲ್ಲಿ ಮುಂಜಾಗ್ರತೆ ವಹಿಸಬೇಕೆಂದು ಜಿಲ್ಲಾಧಿಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ನೀಡಿದ್ದಾರೆ.‌

ಅದೇ ರೀತಿ ಹವಾಮಾನ ಇಲಾಖೆ ಮೂರನೇ ದಿನವೂ ರೆಡ್ ಅಲರ್ಟ್ ನೀಡಿದ್ದು ಭಾರೀ ಮಳೆಯ ಮುನ್ಸೂಚನೆ ನೀಡಿದೆ.‌

Heavy Rain in Mangalore, Only schools declared holiday on 27th July, Udupi both school and college declared holiday. No holiday for colleges in Mangalore says Dc.