Udupi Camera in College Toilet, Kushboo Sunder urges detailed probe: ಶೌಚಾಲಯದಲ್ಲಿ ವಿಡಿಯೋ ಪ್ರಕರಣ ; ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ, ಚಿತ್ರನಟಿ ಖುಷ್ಬು ಉಡುಪಿಗೆ 

26-07-23 11:10 pm       Udupi Correspondent   ಕರಾವಳಿ

ನೇತ್ರಜ್ಯೋತಿ ಪ್ಯಾರಾ ಮೆಡಿಕಲ್‌ ಕಾಲೇಜಿನಲ್ಲಿ ಯುವತಿಯ ವಿಡಿಯೋ ಚಿತ್ರೀಕರಣ ಘಟನೆ ಸಂಬಂಧ ವಿಚಾರಣೆ ನಡೆಸಲು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ, ಚಿತ್ರನಟಿ ಖುಷ್ಬು ಸುಂದರ್ ಬುಧವಾರ ಉಡುಪಿಗೆ ಆಗಮಿಸಿದ್ದಾರೆ. 

ಉಡುಪಿ, ಜುಲೈ 26: ನೇತ್ರಜ್ಯೋತಿ ಪ್ಯಾರಾ ಮೆಡಿಕಲ್‌ ಕಾಲೇಜಿನಲ್ಲಿ ಯುವತಿಯ ವಿಡಿಯೋ ಚಿತ್ರೀಕರಣ ಘಟನೆ ಸಂಬಂಧ ವಿಚಾರಣೆ ನಡೆಸಲು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ, ಚಿತ್ರನಟಿ ಖುಷ್ಬು ಸುಂದರ್ ಬುಧವಾರ ಉಡುಪಿಗೆ ಆಗಮಿಸಿದ್ದಾರೆ. 

ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ವಿದ್ಯಾರ್ಥಿನಿಯ ಸಮಸ್ಯೆ ವಿಚಾರಣೆ ಮಾಡಲು ಬಂದಿದ್ದೇನೆ. 
ಗುರುವಾರ ಪೊಲೀಸ್ ಅಧಿಕಾರಿಗಳನ್ನು ಭೇಟಿಯಾಗಿ ಮಾಹಿತಿ ಪಡೆಯುತ್ತೇನೆ, ಬಳಿಕ ಕಾಲೇಜು ‌ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿಗಳನ್ನು ಭೇಟಿ ಮಾಡುತ್ತೇನೆ ಎಂದು ತಿಳಿಸಿದರು.

ಪ್ರಕರಣದ ಸ್ವರೂಪವನ್ನು ಮೊದಲು ಅರಿಯಬೇಕಾಗಿದೆ. ಇದಕ್ಕಾಗಿ ಎರಡು ದಿನ ಉಡುಪಿಯಲ್ಲಿದ್ದು ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲರ ಜತೆ ಮಾತನಾಡುತ್ತೇನೆ ಎಂದು ಖುಷ್ಬೂ ಸುಂದರ್ ತಿಳಿಸಿದರು.

Udupi Camera in College Toilet case, National Women's Commission Kushboo Sunder urges detailed probe, rejects communal angle. She visited Udupi on Wednesday,July 26 to delve into the controversial video shooting of a girl of one community in the wash room of the college by three three classmates of different community.