ಬ್ರೇಕಿಂಗ್ ನ್ಯೂಸ್
31-07-23 03:57 pm Mangalore Correspondent ಕರಾವಳಿ
ಮಂಗಳೂರು, ಜುಲೈ 31: ಮೆಡಿಕಲ್ ಕಾಲೇಜನ ವಿದ್ಯಾರ್ಥಿಯೊಬ್ಬ ಅಪಾರ್ಟ್ಮೆಂಟಿನ 5ನೇ ಮಹಡಿಯಿಂದ ಆಕಸ್ಮಿಕವಾಗಿ ಜಾರಿ ಬಿದ್ದು ಮೃತಪಟ್ಟ ಘಟನೆ ನಗರದ ಶಿವಭಾಗ್ ನಲ್ಲಿ ನಡೆದಿದೆ.
ಅಡ್ಯಾರು ನಿವಾಸಿ, ಪ್ರಸ್ತುತ ಕದ್ರಿ ಶಿವಭಾಗ್‌ನಲ್ಲಿ ಅಪಾರ್ಟ್ಮೆಂಟ್ ನಲ್ಲಿ ವಾಸವಿದ್ದ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಸಮಯ್ ಶೆಟ್ಟಿ (21) ಮೃತಪಟ್ಟವರು. ಭಾನುವಾರ ಮಧ್ಯಾಹ್ನ ಘಟನೆ ನಡೆದಿದ್ದು ಅಪಾರ್ಟ್ಮೆಂಟ್ ಬಾಲ್ಕನಿಯಲ್ಲಿ ಸಮಯ್ ಓದುತ್ತಿದ್ದಾಗ ಅವರ ತಾಯಿ ಕಾರು ವಾಷ್ ಮಾಡಲು ನೆಲಮಹಡಿಗೆ ಹೋಗೋಣ ಎಂದು ಹೇಳಿ ಹೋಗಿದ್ದರು. ಅವರಿಗೆ ಸಹಾಯ ಮಾಡಲು ಬಕೆಟ್ ತೆಗೆದುಕೊಂಡು ಬರಲು ಸಮಯ್ ಬಾತ್‌ರೂಂಗೆ ಹೋಗಿದ್ದು ತಾಯಿ ನೆಲ ಮಹಡಿಗೆ ತಲುಪಿದ್ದರು. ಹೀಗಾಗಿ ಮರಳಿ ಫ್ಲ್ಯಾಟ್‌ನ ಬಾಲ್ಕನಿಗೆ ತೆರಳಿದ್ದ ಸಮಯ್ ಅಲ್ಲಿಂದ ತಾಯಿಯನ್ನು ಕರೆದಿದ್ದ. ತಾಯಿಗೆ ಕರೆದಿದ್ದು ಕೇಳಿಲ್ಲ ಅಂತ ಬಗ್ಗಿದ್ದ ಎನ್ನಲಾಗುತ್ತಿದ್ದು ಈ ವೇಳೆ ಮಳೆ ನೀರಿನಿಂದಾಗಿ ಜಾರಿ ಮೂರು ಫೀಟ್ ಎತ್ತರದ ತಡೆಗೋಡೆ ದಾಟಿ ಮಹಡಿಯಿಂದ ಹೊರಕ್ಕೆ ಬಿದ್ದಿದ್ದಾನೆ ಎನ್ನಲಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಿದ್ದು ಅಷ್ಟರಲ್ಲಿ ಮೃತಪಟ್ಟಿದ್ದ ಎಂದು ತಿಳಿದುಬಂದಿದೆ.
ಸಮಯ್ ತಂದೆ ಸಿವಿಲ್ ಎಂಜಿನಿಯರ್ ಆಗಿದ್ದು, ತಾಯಿ ಗೃಹಿಣಿಯಾಗಿದ್ದಾರೆ. ದಂಪತಿಯ ಇಬ್ಬರು ಗಂಡು ಮಕ್ಕಳಲ್ಲಿ ಸಮಯ್ ಹಿರಿಯವನು. ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
21 year old Medical student accidently falls from 5th floor of appartment building at Shivabagh in Mangalore. The deceased has been identified as Samay Shetty.
20-07-25 08:35 pm
Bangalore Correspondent
ವಾಲ್ಮೀಕಿ ನಿಗಮ ಹಗರಣ ರೀತಿಯಲ್ಲೇ ಮತ್ತೊಂದು ಹಗರಣ ;...
20-07-25 07:55 pm
Dharmasthala SIT Case, Parameshwar: ಎಸ್ಐಟಿ ರ...
20-07-25 04:24 pm
Rcb, Bangalore: ಪೊಲೀಸರು 'ಆರ್ಸಿಬಿ ಸೇವಕರು' ಎಂಬ...
19-07-25 03:05 pm
ಎಲ್ಲ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ತಲಾ 50 ಕೋಟಿ ಅ...
18-07-25 10:59 pm
20-07-25 04:47 pm
HK News Desk
Kerala Nurse Yemen; ನರ್ಸ್ ನಿಮಿಷಾ ಉಳಿವಿಗೆ ಗಲ್ಫ...
16-07-25 09:58 pm
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
21-07-25 04:03 am
Mangaluru Correspondent
Mangalore Bantwal Rural PSI, Suicide: ಬಂಟ್ವಾಳ...
20-07-25 10:35 pm
Dharmasthala Case, SIT, Pronab Mohanty: ಧರ್ಮಸ...
20-07-25 03:06 pm
MRPL, MP Brijesh Chowta, Mangalore: MRPL ಹಸಿರ...
19-07-25 10:01 pm
Mangalore, Derlakatte Raid: ನಿಯಮ ಉಲ್ಲಂಘಿಸಿ ಕಾ...
19-07-25 07:18 pm
20-07-25 08:52 pm
HK News Desk
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm