ಬ್ರೇಕಿಂಗ್ ನ್ಯೂಸ್
31-07-23 10:51 pm Mangalore Correspondent ಕರಾವಳಿ
ಮಂಗಳೂರು, ಜುಲೈ 31: ರಸ್ತೆ ನಡುವಿನ ಹೊಂಡ ತಪ್ಪಿಸಲು ಯತ್ನಿಸಿ, ಬೈಕ್ ಸವಾರನೊಬ್ಬ ನಿಂತಿದ್ದ ಓಮ್ನಿ ಕಾರಿಗೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ನಗರದ ಬಿಕರ್ನಕಟ್ಟೆ ಬಳಿ ಸಂಭವಿಸಿದೆ.
ಕೋಡಿಕಲ್ ನಿವಾಸಿ, ನಗರದ ಸಂತ ಅಲೋಶಿಯಸ್ ಕಾಲೇಜಿನ ಪದವಿ ವಿದ್ಯಾರ್ಥಿ ಅಂಕಿತ್ ಜಿ.(21) ಮೃತಪಟ್ಟ ಯುವಕ. ಅಂಕಿತ್ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದು ತಂದೆ, ತಾಯಿ ಮತ್ತು ಅಣ್ಣನನ್ನು ಅಗಲಿದ್ದಾರೆ.

ಭಾನುವಾರ ರಾತ್ರಿ 10.30ರ ವೇಳೆಗೆ ಅಂಕಿತ್ ತನ್ನ ಗೆಳೆಯ ಆರ್ಯನ್ ಅವರನ್ನು ಕುಲಶೇಖರದಲ್ಲಿರುವ ಅವರ ಮನೆಗೆ ಬಿಟ್ಟು ಕೋಡಿಕಲ್ ಕಡೆಗೆ ವಾಪಸಾಗುತ್ತಿದ್ದಾಗ ಘಟನೆ ನಡೆದಿದೆ. ಬಿಕರ್ನಕಟ್ಟೆಯ ಮಸೀದಿ ಎದುರು ರಸ್ತೆ ಹೊಂಡ ತಪ್ಪಿಸಲು ಯತ್ನಿಸಿ ರಸ್ತೆ ಬದಿ ನಿಲ್ಲಿಸಿದ್ದ ಆಮ್ನಿ ಕಾರಿನ ಹಿಂಬದಿಗೆ ಢಿಕ್ಕಿಯಾಗಿತ್ತು. ಅಂಕಿತ್ ಬೈಕ್‌ನಿಂದ ಚರಂಡಿಗೆ ಬಿದ್ದು ಗಾಯಗೊಂಡಿದ್ದರೆ, ಬೈಕ್ ಪಲ್ಟಿಯಾಗಿ ರಸ್ತೆ ಪಕ್ಕದ ನರ್ಸರಿಯ ಗೇಟಿಗೆ ಡಿಕ್ಕಿ ಹೊಡೆದು ನಿಂತಿತ್ತು. ತಲೆಗೆ ಗಂಭೀರ ಸ್ವರೂಪದ ಗಾಯಗೊಂಡ ಅಂಕಿತ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆಸ್ಪತ್ರೆಯಲ್ಲೇ ಅಂಕಿತ್ ಮೃತಪಟ್ಟಿದ್ದರು. ಸಂಚಾರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜುಲೈ 18ರಂದು ರಾಷ್ಟ್ರೀಯ ಹೆದ್ದಾರಿ 66ರ ಬೈಕಂಪಾಡಿ ಪೆಟ್ರೋಲ್ ಪಂಪ್ ಸಮೀಪ ಹೊಂಡ ತಪ್ಪಿಸಲು ಯತ್ನಿಸಿದ್ದ ದ್ವಿಚಕ್ರ ಸವಾರನಿಗೆ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದ ಘಟನೆ ನಡೆದಿತ್ತು. ಮಂಗಳೂರಿನಲ್ಲಿ ರಸ್ತೆ ಹೊಂಡದ ಕಾರಣಕ್ಕೆ ಎರಡನೇ ಬಲಿಯಾಗಿದೆ.
Mangalore Pothole Accident, 21 year old boy dies in order to avoid pothole at Bikarnakatte. The deceased has been identified as Ankith G. The accident happened at 10:30 night on Sunday. A bike rider was killed as he lost control over the bike he was riding in a bid to avoid a pothole and crashed into a parked van late night on Sunday July 30 near Infant Jesus Church entrance opposite Pramod Nursery.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm